ಪ್ರಜಾ ಸೇವೆ ಆಂದೋಲನಕ್ಕೆ ಅಧಿಕಾರಿಗಳ ಸಿದ್ಧತೆಗೆ ತಹಸೀಲ್ದಾರ್ ಸೂಚನೆ

KannadaprabhaNewsNetwork |  
Published : Sep 03, 2026, 01:30 AM IST
 ನರಸಿಂಹರಾಜಪುರ ತಾಲೂಕು ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರ್ ಡಾ.ನೂರಲ್ ಹುದಾ ಅಧ್ಯಕ್ಷತೆಯಲ್ಲಿ ಪೂರ್ವ ಭಾವಿ ಸಭೆ ನಡೆಯಿತು. ತಾಲೂಕು ಪಂಚಾಯಿತಿ ಇ.ಓ ನವೀನ್ ಕುಮಾರ್ ಹಾಗೂ ಇತರ ಅಧಿಕಾರಿಗಲು ಪಾಲ್ಗೊಂಡಿದ್ದರು. | Kannada Prabha

ಸಾರಾಂಶ

ನರಸಿಂಹರಾಜಪುರಸೆಪ್ಟಂಬರ್ 5 ರ ಶನಿವಾರ ಬಿ.ಎಚ್. ಕೈಮರದ ನಾರಾಯಣ ಗುರು ಸಮುದಾಯಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅಧ್ಯಕ್ಷತೆಯಲ್ಲಿ ನಡೆಯುವ ತಾಲೂಕು ಮಟ್ಟದ ಪ್ರಜಾಸೇವೆ ಆಂದೋಲನಕ್ಕೆ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಹಸೀಲ್ದಾರ್ ಡಾ.ನೂರಲ್ ಹುದಾ ಸೂಚಿಸಿದರು.

5 ರಂದು ಆಂದೋಲನ । ತಾಲೂಕು ಕಚೇರಿಯಲ್ಲಿ ಪೂರ್ವ ಭಾವಿ ಸಭೆ

ಕನ್ನಡಪ್ರಭ ವಾರ್ತೆ ನರಸಿಂಹರಾಜಪುರ

ಸೆಪ್ಟಂಬರ್ 5 ರ ಶನಿವಾರ ಬಿ.ಎಚ್. ಕೈಮರದ ನಾರಾಯಣ ಗುರು ಸಮುದಾಯಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅಧ್ಯಕ್ಷತೆಯಲ್ಲಿ ನಡೆಯುವ ತಾಲೂಕು ಮಟ್ಟದ ಪ್ರಜಾಸೇವೆ ಆಂದೋಲನಕ್ಕೆ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಹಸೀಲ್ದಾರ್ ಡಾ.ನೂರಲ್ ಹುದಾ ಸೂಚಿಸಿದರು.

ಮಂಗಳವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ ಕುರಿತು ನಡೆದ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಎನ್.ಆರ್.ಪುರ ತಾಲೂಕಿನಲ್ಲಿ ಪ್ರಜಾ ಸೇವೆ ಆಂದೋಲನ ಶನಿವಾರ ಬೆಳಿಗ್ಗೆ 11 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್, ಶಾಸಕ ಟಿ.ಡಿ.ರಾಜೇಗೌಡ ಹಾಗೂ ಇತರ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ, ಜಿಪಂ ಸಿಒ, ಜಿಲ್ಲಾ ಮಟ್ಟದ ಅಧಿಕಾರಿಗಳು ಸಹ ಭಾಗವಹಿಸಲಿದ್ದಾರೆ.

ಸಾರ್ವಜನಿಕರು ಯಾವುದೇ ಸರ್ಕಾರಿ ಇಲಾಖೆ ಸಮಸ್ಯೆಗಳ ಬಗ್ಗೆ ಅರ್ಜಿ ನೀಡಬಹುದು. ಇಲಾಖೆ ಅಧಿಕಾರಿಗಳ ಸೂಕ್ತ ಉತ್ತರ ನೀಡಬೇಕು. ವೇದಿಕೆ ಎದುರು 2 ಪೋಡಿಯಂ ಮಾಡಲಿದ್ದು ಒಂದು ಪೋಡಿಯಂನಲ್ಲಿ ಸಾರ್ವಜನಿಕರು ಪ್ರಶ್ನೆ ಕೇಳಬಹುದು. ಮತ್ತೊಂದು ಪೋಡಿಯಂ ನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಉತ್ತರ ನೀಡಲಿದ್ದಾರೆ. ಸಮಸ್ಯೆ ಬಗೆಹರಿಸಲು ಸಾಧ್ಯವಾದರೆ ಅಲ್ಲೇ ಬಗೆಹರಿಸುತ್ತಾರೆ. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸಮಸ್ಯೆಗೆ ಪರಿಹಾರ ನೀಡಲಿದ್ದಾರೆ ಎಂದರು.

ಸಭೆಯಲ್ಲಿ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳಿಗೆ ಹಾಗೂ ಮಾದ್ಯಮದವರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಲು ತೀರ್ಮಾನಿಸಲಾಯಿತು. 9 ಕೌಂಟರ್ ತೆರೆದು ಅಲ್ಲೇ ಅರ್ಜಿ ನಮೂನೆ ಸಿಗುವಂತೆ ವ್ಯವಸ್ಥೆ ಮಾಡಲಾಗುವುದು. ಯಾವುದೇ ಸರ್ಕಾರಿ ಇಲಾಖೆಯವರು ತಮ್ಮ ಇಲಾಖೆಯಿಂದ ಫಲಾನುಭವಿಗಳಿಗೆ ಸೌಲಭ್ಯ ನೀಡುವುದಾದರೆ ಇದಕ್ಕೆ ಸಿದ್ದತೆ ಮಾಡಬೇಕು. ಅಂದಾಜು 400- 500 ಜನರು ಸೇರಬಹುದು. ಎಲ್ಲರ ಊಟದ ವ್ಯವಸ್ಥೆಗೆ ತೀರ್ಮಾನಿಸಲಾಯಿತು.

ತಾಲೂಕು ಕಚೇರಿಯಲ್ಲಿ ಬುಧವಾರದಿಂದಲೇ ಸಾರ್ವಜನಿಕರು ಅರ್ಜಿ ನೀಡಲು ಅನುಕೂಲವಾಗುವಂತೆ ಕೌಂಟರ್ ತೆರೆಯಲು ತೀರ್ಮಾನಿಸಲಾಯಿತು. ತಾಲೂಕು ಮಟ್ಟದ ಎನ್.ಆರ್.ಎಲ್.ಎಂ. ಯೋಜನೆಯಿಂದ ಗೃಹ ಬಳಕೆ ವಸ್ತುಗಳ ಸ್ಟಾಲ್ ಹಾಕಬಹುದು. ಸಾರ್ವಜನಿಕರು ಕಾರ್ಯಕ್ರಮ ನಡೆಯುವ ದಿನದಂದೇ ನಿಗದಿತ ಅರ್ಜಿ ಫಾರಂನಲ್ಲಿ ಪಿಂಚಣಿ, ವಸತಿ, ನಿವೇಶನ ಸಮಸ್ಯೆ, ಗ್ಯಾರಂಟಿ ಯೋಜನೆಗೆ ಇರುವ ಸಮಸ್ಯೆ ಸೇರಿದಂತೆ ಯಾವುದೇ ಸಮಸ್ಯೆ ಇದ್ದರೂ ಅರ್ಜಿ ನೀಡಬಹುದು. ಈ ವಿಚಾರ ವ್ಯಾಪಕ ಪ್ರಚಾರಕ್ಕೆ ನಿರ್ಧರಿಸಲಾಯಿತು.

ಸಭೆಯಲ್ಲಿ ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಶಬಾನಾ ಅಂಜುಮ್, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಪುನೀತ್, ಪಪಂ ಮುಖ್ಯಾಧಿಕಾರಿ ಆರ್.ವಿ.ಮಂಜುನಾಥ್,ತಾಲೂಕು ವೈದ್ಯಾಧಿಕಾರಿ ಡಾ.ಮಹೇಂದ್ರ ಕಿರೀಟಿ,ಎನ್.ಆರ್.ಪು ವಲಯ ಅರಣ್ಯಾಧಿಕಾರಿ ನಿಶ್ಚಿತ್,ಚಿಕ್ಕಅಗ್ರಹಾರ ವಲಯ ಅರಣ್ಯಾ ಧಿಕಾರಿ, ಶಿರಸ್ತಾರ್ ಸಚಿನ್, ಚುನಾವಣಾ ಶಿರಸ್ತಾರ್ ವೇಣುಗೋಪಾಲ್, ಎಂಜಿನಿಯರ್ ಸುನೀಲ್ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿ.ಎ. ಸೈಟ್‌ ಶುಲ್ಕ ನಿಯಮ ಸರಳಗೊಳಿಸಿ: ಶಾಸಕರಾದ ಅರುಣ್‌, ಚನ್ನಬಸಪ್ಪ ಆಗ್ರಹ
ಕಸ್ತೂರಿ ರಂಗನ್‌ ವರದಿ ಗಂಭೀರತೆ ಅರಿಯದ ರಾಜಕಾರಣಿಗಳು: ಆರ್‌ಕೆ ಸಿದ್ದರಾಮಣ್ಣ