ಸಿಸಿಆರ್‌ಟಿ ಸ್ಕಾಲರ್‌ಶಿಪ್‌ಗೆ ತೇಜಸ್ವಿರಾಜ್ ಆಯ್ಕೆ

KannadaprabhaNewsNetwork |  
Published : May 26, 2025, 12:34 AM ISTUpdated : May 26, 2025, 12:35 AM IST
ಫೋಟೋ: ೨೪ಪಿಟಿಆರ್=ತೇಜಸ್ವಿರಾಜ್ | Kannada Prabha

ಸಾರಾಂಶ

ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯ ವಿವಿಧ ಸಾಂಸ್ಕೃತಿಕ ಕ್ಷೇತ್ರಗಳ ಯುವ ಕಲಾವಿದರಿಗೆ ನೀಡುವ ಸಿಸಿಆರ್‌ಟಿ (ಸಾಂಸ್ಕೃತಿಕ ಸಂಪನ್ಮೂಲ ಮತ್ತು ತರಬೇತಿ ಕೇಂದ್ರ) ೨೦೨೨-೨೩ನೇ ಸಾಲಿನ ಸ್ಕಾಲರ್‌ಶಿಪ್‌ಗೆ ಭರತನಾಟ್ಯ ವಿಭಾಗದಲ್ಲಿ ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿ ವಿದ್ಯಾರ್ಥಿ ತೇಜಸ್ವಿರಾಜ್ ಆಯ್ಕೆಯಾಗಿದ್ದಾರೆ.

ಕರಾವಳಿಯಿಂದ ಭರತನಾಟ್ಯ ವಿಭಾಗದಲ್ಲಿ ಆಯ್ಕೆಯಾದ ಏಕೈಕ ವಿದ್ಯಾರ್ಥಿ

ಕನ್ನಡಪ್ರಭ ವಾರ್ತೆ ಪುತ್ತೂರು

ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯ ವಿವಿಧ ಸಾಂಸ್ಕೃತಿಕ ಕ್ಷೇತ್ರಗಳ ಯುವ ಕಲಾವಿದರಿಗೆ ನೀಡುವ ಸಿಸಿಆರ್‌ಟಿ (ಸಾಂಸ್ಕೃತಿಕ ಸಂಪನ್ಮೂಲ ಮತ್ತು ತರಬೇತಿ ಕೇಂದ್ರ) ೨೦೨೨-೨೩ನೇ ಸಾಲಿನ ಸ್ಕಾಲರ್‌ಶಿಪ್‌ಗೆ ಭರತನಾಟ್ಯ ವಿಭಾಗದಲ್ಲಿ ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿ ವಿದ್ಯಾರ್ಥಿ ತೇಜಸ್ವಿರಾಜ್ ಆಯ್ಕೆಯಾಗಿದ್ದಾರೆ.

ಕರ್ನಾಟಕ ಕರಾವಳಿಯಲ್ಲಿ ಭರತನಾಟ್ಯ ವಿಭಾಗದಲ್ಲಿ ಸಿಸಿಆರ್‌ಟಿ ಸ್ಕಾಲರ್‌ಶಿಪ್‌ಗೆ ಆಯ್ಕೆಯಾದ ಏಕೈಕ ವಿದ್ಯಾರ್ಥಿ ಇವರಾಗಿದ್ದಾರೆ.

ಕಳೆದ ೧೦ ವರ್ಷಗಳಿಂದ ಭರತನಾಟ್ಯ ಶಾಸ್ತ್ರೀಯ ನೃತ್ಯ ಅಭ್ಯಾಸ ಮಾಡುತ್ತಿರುವ ತೇಜಸ್ವಿರಾಜ್, ೨೦೧೮ರಲ್ಲಿ ಜೂನಿಯರ್, ೨೦೨೧ರಲ್ಲಿ ಸೀನಿಯರ್ ಪರೀಕ್ಷೆಯಲ್ಲಿ ವಿಶೇಷ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದರು. ಈ ವರ್ಷ ವಿದ್ವತ್ ಪೂರ್ವ ಪರೀಕ್ಷೆ ಬರೆಯುತ್ತಿದ್ದಾರೆ. ತೇಜಸ್ವಿರಾಜ್ ಅವರು ನೃತ್ಯೋಪಾಸನಾ ಕಲಾ ಅಕಾಡೆಮಿಯ ನೃತ್ಯಗುರು ವಿದುಷಿ ಶಾಲಿನಿ ಆತ್ಮಭೂಷಣ್ ಅವರ ಮಾರ್ಗದರ್ಶನದಲ್ಲಿ ಭರತನಾಟ್ಯ ತರಬೇತಿ ಪಡೆಯುತ್ತಿದ್ದಾರೆ.ಈ ಕಲಾ ಅಕಾಡೆಮಿಯ ನೃತ್ಯ ಕಲಾವಿದರಾದ ತೇಜಸ್ವಿರಾಜ್, ದಕ್ಷಿಣ ಕನ್ನಡ, ಕೇರಳ ಹಾಗೂ ಹೊರ ರಾಜ್ಯಗಳಲ್ಲೂ ಕಲಾ ತಂಡದೊಂದಿಗೆ ಹಲವು ನೃತ್ಯ ಪ್ರದರ್ಶನ ನೀಡಿದ್ದಾರೆ.ಅವರು ಕಡಬ ತಾಲೂಕಿನ ಮರ್ದಾಳದ ಕೋಲಂತಾಡಿ ನಿವಾಸಿ ದಿ. ಶಾಂತರಾಮ ಗೌಡ ಮತ್ತು ಲಕ್ಷ್ಮೀ ದಂಪತಿಯ ಪುತ್ರ. ಭಾರತ ಸರ್ಕಾರದ ಸಾಂಸ್ಕೃತಿಕ ಸಚಿವಾಲಯ ವಿವಿಧ ಸಾಂಸ್ಕೃತಿಕ ಕ್ಷೇತ್ರದ ಯುವ ಕಲಾವಿದರನ್ನು ಪ್ರೋತ್ಸಾಹಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿ, ಸಂದರ್ಶನ ನಡೆಸಿ ಸ್ಕಾಲರ್‌ಶಿಪ್‌ಗೆ ಆಯ್ಕೆ ನಡೆಸುತ್ತದೆ. ೨೦೨೨-೨೩ನೇ ಸಾಲಿನ ಆಯ್ಕೆ ಪ್ರಕ್ರಿಯೆ ಕಳೆದ ಅಕ್ಟೋಬರ್‌ನಲ್ಲಿ ನಡೆದಿದ್ದು, ಈಗ ಫಲಿತಾಂಶ ಪ್ರಕಟಿಸಲಾಗಿದೆ. ಕರ್ನಾಟಕದಲ್ಲಿ ಭರತನಾಟ್ಯದಲ್ಲಿ ಒಟ್ಟು ಏಳು ಮಂದಿ ಸ್ಕಾಲರ್‌ಶಿಪ್‌ಗೆ ಆಯ್ಕೆಯಾಗಿದ್ದು, ಬೆಂಗಳೂರಲ್ಲಿ ಐವರು, ಶಿವಮೊಗ್ಗದಲ್ಲಿ ಓರ್ವ ಮತ್ತು ದ.ಕ.ದಲ್ಲಿ ತೇಜಸ್ವಿರಾಜ್ ಸೇರಿದ್ದಾರೆ.

PREV

Recommended Stories

ನನ್ನ ಬಗ್ಗೆ ಮಾತನಾಡುವವರಿಗೆ ಸಿಗಂದೂರು ಚೌಡೇಶ್ವರಿ ತಕ್ಕ ಬುದ್ಧಿ ಕಲಿಸಲಿದ್ದಾಳೆ : ಮಧು ಬಂಗಾರಪ್ಪ
ಡಾ.ಪ್ರಭಾಕರ್‌ ಕೋರೆ 78ನೇ ಜನ್ಮದಿನ ಅರ್ಥಪೂರ್ಣ ಆಚರಣೆ