ತೇಜಸ್ವಿ ನಿಸರ್ಗದ ಒಡನಾಡಿ: ಡಾ. ಜಯಪ್ರಕಾಶ್ ಶೆಟ್ಟಿ

KannadaprabhaNewsNetwork |  
Published : Jun 27, 2026, 01:30 AM IST
ಮೂಲ್ಕಿಯಲ್ಲಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರ ಕಥನಗಳಲ್ಲಿ ಪರಿಸರ ಪ್ರಜ್ಞೆ ವಿಶೇಷ ಉಪನ್ಯಾಸ | Kannada Prabha

ಸಾರಾಂಶ

ಪೂರ್ಣ ಚಂದ್ರ ತೇಜಸ್ವಿ ಅವರು ನಿಸರ್ಗದ ಒಡನಾಡಿಯಾಗಿ ಮನುಷ್ಯ ಹೇಗೆ ಬದುಕಬೇಕು ಎಂದು ತೋರಿಸಿಕೊಟ್ಟ ಮಹಾನುಭಾವ ಎಂದು ಹಿರಿಯಡ್ಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಜಯಪ್ರಕಾಶ್ ಶೆಟ್ಟಿ ಹೇಳಿದರು.

ಮೂಲ್ಕಿ: ಪೂರ್ಣ ಚಂದ್ರ ತೇಜಸ್ವಿ ಅವರು ನಿಸರ್ಗದ ಒಡನಾಡಿಯಾಗಿ ಮನುಷ್ಯ ಹೇಗೆ ಬದುಕಬೇಕು ಎಂದು ತೋರಿಸಿಕೊಟ್ಟ ಮಹಾನುಭಾವ ಎಂದು ಹಿರಿಯಡ್ಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಜಯಪ್ರಕಾಶ್ ಶೆಟ್ಟಿ ಹೇಳಿದರು.ದಕ್ಷಿಣ ಕನ್ನಡ ಚಕೋರ ಸಾಹಿತ್ಯ ವಿಚಾರ ವೇದಿಕೆ ಮತ್ತು ಮೂಲ್ಕಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಹಯೋಗದೊಂದಿಗೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಜರಗಿದ ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರ ಕಥನಗಳಲ್ಲಿ ಪರಿಸರ ಪ್ರಜ್ಞೆ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಜನರ ಅವಿವೇಕದಿಂದ ಪರಿಸರ ನಾಶವಾಗುತ್ತಿದ್ದು ನದಿಯಲ್ಲಿರುವ ಸಂಪತ್ತು ಲೂಟಿಯಾಗುತ್ತಿದೆ ಎಂದು ತಮ್ಮ ಕೃತಿಗಳಲ್ಲಿ ನಿರೂಪಿಸಿದ್ದರು ಎಂದರು.

ಪರಿಸರ ದೌರ್ಜನ್ಯದ ವಿರುದ್ಧ ಹೋರಾಟ ನಡೆಸುವುದರಲ್ಲಿ ತೇಜಸ್ವಿ ಮುಂಚೂಣಿಯಲ್ಲಿರು. ಗಾಂಧಿ ಹಾಗೂ ಅಂಬೇಡ್ಕರ್ ಅವರು ಸಮಾಜದ ಎರಡು ಕಣ್ಣುಗಳು ಇದ್ದಂತೆ, ಸರ್ವರಿಗೆ ಸಮಪಾಲು ಸರ್ವರಿಗೆ ಸಮ ಬಾಳು ನೀಡಲು ಪ್ರಯತ್ನಿಸಿದ ಮಹಾನುಭಾವ ತೇಜಸ್ವಿ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂಲ್ಕಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ವಾಸುದೇವ ಬೆಳ್ಳೆ ವಹಿಸಿದ್ದರು. ಸಾಹಿತಿ ಹಾಗೂ ಬರಹಗಾರ ಕೆಪಿ ಪೂರ್ಣಚಂದ್ರ ತೇಜಸ್ವಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಹಾಗೂ ಪಾರಿವಾಳಗಳನ್ನು ಹಾರಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಪಡುಬಿದ್ರಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಡಾ. ಸುಮಾ ಎಸ್ ಉಪನ್ಯಾಸ ನೀಡಿದರು. ಕಾಲೇಜಿನ ಅಭಿವೃದ್ದಿ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಜಯಲಕ್ಷ್ಮಿಟಿ. ನಾಯಕ್, ಚಕೋರ ದ.ಕ .ಜಿಲ್ಲಾ ಸಂಚಾಲಕರಾದ ಸುಜಿತ್, ಉಪನ್ಯಾಸಕಿ ರೇಖಾ, ಉಪನ್ಯಾಸಕ ರಮಾನಂದ ಮತ್ತಿತರರು ಉಪಸ್ಥಿತರಿದ್ದರು. ಕಾಲೇಜು ಪ್ರಾಂಶುಪಾಲ ಡಾ. ವಾಸುದೇವ ಬೆಳ್ಳೆ ಸ್ವಾಗತಿಸಿದರು. ಉಪನ್ಯಾಸಕಿ ಗಾಯತ್ರಿ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಾತಿ ಸಂಕೋಲೆಯಿಂದ ಸಮಾಜ ಬಿಡುಗಡೆಯಾಗಲಿ
ಭೋವಿ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ ಸಹಕಾರ