ಕೇಂದ್ರ ಸರ್ಕಾರದ ಉನ್ನತ ಹುದ್ದೆಯಲ್ಲಿ ಜಿಲ್ಲೆಯ ತೇಜಸ್ವಿ ನಾಯ್ಕ, ರಾಜೇಶ ನಾಯ್ಕ

KannadaprabhaNewsNetwork |  
Published : Jun 25, 2024, 12:30 AM IST
ಫೋಠೊ ಪೈಲ್ : 24ಬಿಕೆಲ್4 : ತೇಜಸ್ವಿ ನಾಯ್ಕ, ಐಎಎಸ್ ಪೊಟೋ  ಪೈಲ್ : 24ಬಿಕೆಲ್ 5-ರಾಜೇಶ ನಾಯ್ಕ ಐಎಪ್ ಎಸ್  | Kannada Prabha

ಸಾರಾಂಶ

ಮಧ್ಯಪ್ರದೇಶ ಕೇಡರ್‌ನ ಐಎಎಸ್ ಅಧಿಕಾರಿ ತೇಜಸ್ವಿ ನಾಯ್ಕ ಅವರು ಕೇಂದ್ರ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಚ್.ಡಿ. ಕುಮಾರ ಸ್ವಾಮಿ ಅವರ ಆಪ್ತ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

ಭಟ್ಕಳ: ಉತ್ತರ ಕನ್ನಡ ಮೂಲದ ಇಬ್ಬರೂ ಅಧಿಕಾರಿಗಳು ಕೇಂದ್ರ ಸರ್ಕಾರದ ಉನ್ನತ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಮಧ್ಯಪ್ರದೇಶ ಕೇಡರ್‌ನ ಐಎಎಸ್ ಅಧಿಕಾರಿ ತೇಜಸ್ವಿ ನಾಯ್ಕ ಅವರು ಕೇಂದ್ರ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಚ್.ಡಿ. ಕುಮಾರ ಸ್ವಾಮಿ ಅವರ ಆಪ್ತ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಇವರು ಮಧ್ಯಪ್ರದೇಶದ ರ‍್ವಾನಿ ಹಾಗೂ ಬೆತುಲನಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಮಧ್ಯಪ್ರದೇಶದಲ್ಲಿ ಆಡಳಿತ ಸುಧಾರಣೆಯಲ್ಲಿ ಖಡಕ್ ಅಧಿಕಾರಿಯೆಂದೇ ಹೆಸರುವಾಸಿಯಾಗಿದ್ದರು. ಕಳೆದ ಬಾರಿ ನರೇಂದ್ರ ಮೋದಿಯವರ ಸಂಪುಟದಲ್ಲಿ ಕೃಷಿ ಸಚಿವರಾಗಿದ್ದ ನರೇಂದ್ರ ಸಿಂಗ್ ತೋಮರ್ ಹಾಗೂ ಅರ್ಜುನ ಮುಂಡಾ ಅವರ ಆಪ್ತ ಸಹಾಯಕರಾಗಿ ಕೆಲಸ ನಿರ್ವಹಿಸಿದ್ದ ಅವರಿಗೆ ಈ ಬಾರಿ ಎಚ್.ಡಿ. ಕುಮಾರಸ್ವಾಮಿ ಅವರ ಕೈಗಾರಿಕೆಗೆ ಖಾತೆಯ ನಿರ್ವಹಣೆ ಜವಾಬ್ದಾರಿ ವಹಿಸಲಾಗಿದೆ. ಇವರ ಪತ್ನಿ ಸ್ವಾತಿ ಮೀನಾ ನಾಯ್ಕ ಕೂಡ ಐಎಎಸ್ ಅಧಿಕಾರಿಯಾಗಿದ್ದು, ಪ್ರಸ್ತುತ ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಇದರ ಜೆಎಸ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ನಿವಾಸಿಯಾಗಿರುವ ರಾಜೇಶ ನಾಯ್ಕ ಐಎಫ್‌ಎಸ್ ಶ್ರೇಣಿಯ ಅಧಿಕಾರಿಯಾಗಿದ್ದು, ಪ್ರಸ್ತುತ ಭಾರತದ ಉಪರಾಷ್ಟ್ರಪತಿ ಜಗದೀಪ ಧನಕರ್ ಅವರ ಆಪ್ತ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಭಾರತದ ವಿದೇಶಾಂಗ ಕಾರ್ಯದರ್ಶಿಯಾಗಿ ಜಪಾನ್ ಹಾಗೂ ಅಮೆರಿಕದಲ್ಲಿ ಕಾರ್ಯನಿರ್ವಹಿಸಿದ ಬಳಿಕ ರಿಜಿನಲ್ ಪಾಸ್ಪೋರ್ಟ್‌ ಅಧಿಕಾರಿಯಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಜಪಾನ್ ಭೇಟಿ ಸಂದರ್ಭದಲ್ಲಿ ಅಲ್ಲಿನ ಭಾಷಾ ಪರಿವರ್ತಕರಾಗಿ ಅವರ ಜತೆ ಪ್ರಯಾಣ ಬೆಳೆಸಿದ್ದನ್ನು ಇಲ್ಲಿ ಸ್ಮರಿಸಬಹುದು. ಉತ್ತರ ಕನ್ನಡದಲ್ಲಿ ಹುಟ್ಟಿ ಬೆಳೆದ ಇಬ್ಬರು ಅಧಿಕಾರಿಗಳು ರಾಷ್ಟ್ರಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವುದು ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!