ಕನ್ನಡಪ್ರಭ ವಾರ್ತೆ ಕುಶಾಲನಗರ
ಇಲ್ಲಿಗೆ ಸಮೀಪದ ಕೊಪ್ಪ ಭಾರತ ಮಾತಾ ಪಿಯು ಕಾಲೇಜಿನ ವಿದ್ಯಾರ್ಥಿನಿಯಾದ, ಕುಶಾಲನಗರ ಪಟ್ಟಣ ನಿವಾಸಿ ಎಂ.ಎ.ಆನಂದ ಮತ್ತು ಸುಜಾತ ದಂಪತಿ ಪುತ್ರಿ ಎಂ.ಎ.ತೇಜಸ್ವಿನಿಗೆ ಮಂಗಳವಾರ ಪ್ರಕಟಗೊಂಡ ದ್ವಿತೀಯ ಪಿಯುಸಿ ಕಾಮರ್ಸ್ ವಿಭಾಗದಲ್ಲಿ ರಾಜ್ಯಕ್ಕೆ 2 ನೇ ಟಾಪರ್ ಆದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ತಾಯಿ ಸುಜಾತ ತಮ್ಮ ಪುತ್ರಿ ತೇಜಸ್ವಿನಿಗೆ ಸಿಹಿ ತಿನ್ನಿಸಿ ಸಂಭ್ರಮಿಸಿದರು.600 ಅಂಕದಲ್ಲಿ 598 ಅಂಕಗಳಿಸಿದ ತೇಜಸ್ವಿನಿ ಬಗ್ಗೆ ಕೊಡಗು ಮತ್ತು ಮೈಸೂರು ಜಿಲ್ಲೆಗಳ ಗಡಿ ಭಾಗದ ಜನರು ಅಭಿನಂದನೆ ಸಲ್ಲಿಸಿದ್ದಾರೆ.
--------------------------------------ದ್ವಿತೀಯ ಪಿ. ಯು ಪರೀಕ್ಷೆ: ಸಂತ ಅನ್ನಮ್ಮ ಪಿಯು ಕಾಲೇಜು ಉತ್ತಮ ಫಲಿತಾಂಶ
ಕನ್ನಡಪ್ರಭ ವಾರ್ತೆ ವಿರಾಜಪೇಟೆದ್ವಿತೀಯ ಪಿ. ಯು. ಫಲಿತಾಂಶ ಪ್ರಕಟಗೊಂಡಿದ್ದು ವಿರಾಜಪೇಟೆ ಪಟ್ಟಣದ ಸಂತ ಅನ್ನಮ್ಮ ಪಿ. ಯು. ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಫಲಿತಾಂಶವನ್ನು ನೀಡಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿನಿ ಅನುಷಾ ಕೆ. ಜಿ. 575 ಅಂಕಗಳನ್ನು ಪಡೆದುಕೊಂಡು ವಿಜ್ಞಾನ ವಿಭಾಗದಲ್ಲಿ ಕಾಲೇಜಿಗೆ ಪ್ರಥಮ ಸ್ಥಾನವನ್ನು ಪಡೆದಿರುತ್ತಾಳೆ. ಕೀರ್ತಿ ಬಿ. ಎಸ್. 574 ಅಂಕಗಳನ್ನು ಪಡೆದು ದ್ವಿತೀಯ, ಹಾಗೂ ಆನನ್ ಮೆಂಡೋಂಜಾ 558 ಅಂಕಗಳನ್ನು ಪಡೆದು ವಿಜ್ಞಾನ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಕಾಲೇಜಿಗೆ ಪಡೆದುಕೊಂಡಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ ಮಾನ್ಯ ದೇಚಮ್ಮ ಜೆ. ಪಿ. 576 ಅಂಕಗಳನ್ನು ಪಡೆದುಕೊಂಡು ಕಾಲೇಜಿಗೆ ಪ್ರಥಮ, ತಪಸ್ವಿ ಪಿ. ಎಸ್. 572 ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ, ಹಾಗೂ ವಿಭಿನ್ಯ ಸಿ. ಪಿ. 563 ಅಂಕಗಳನ್ನು ಪಡೆದು ಕಾಲೇಜಿಗೆ ವಾಣಿಜ್ಯ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ 28 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 76 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ ಇಬ್ಬರು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ 31 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 84 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 10 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ ಎಂದು ಸಂತ ಅನ್ನಮ್ಮ ಪಿ. ಯು. ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಮದಲೈ ಮುತ್ತು ಮಾಹಿತಿಯನ್ನು ನೀಡಿದ್ದಾರೆ.