ಪ್ರಧಾನಿ ಮೋದಿ ಸಾಧನೆ ತಿಳಿಸಿ ಬಿಜೆಪಿಗೆ ಮತಕೊಡಿಸಿ: ರಾಮದಾಸಪ್ಪ

KannadaprabhaNewsNetwork | Published : Apr 3, 2024 1:34 AM

ಸಾರಾಂಶ

ಬೂತ್‌ಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆಗಳನ್ನು ತಿಳಿಸುವ ಮೂಲಕ ಅಭಿವೃದ್ಧಿ ರಾಜಕಾರಣಿ ಗೋವಿಂದ ಎಂ.ಕಾರಜೋಳ ಗೆಲುವಿಗೆ ಕ್ಷೇತ್ರದಲ್ಲಿ ಹೆಚ್ಚಿನ ಮತಗಳನ್ನು ಕೊಡಿಸುವುದು ಕಾರ್ಯಕರ್ತರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಳೇಕಾಯಿ ರಾಮದಾಸಪ್ಪ ಹೇಳಿದರು.

ಮೊಳಕಾಲ್ಮುರು: ಬೂತ್‌ಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆಗಳನ್ನು ತಿಳಿಸುವ ಮೂಲಕ ಅಭಿವೃದ್ಧಿ ರಾಜಕಾರಣಿ ಗೋವಿಂದ ಎಂ.ಕಾರಜೋಳ ಗೆಲುವಿಗೆ ಕ್ಷೇತ್ರದಲ್ಲಿ ಹೆಚ್ಚಿನ ಮತಗಳನ್ನು ಕೊಡಿಸುವುದು ಕಾರ್ಯಕರ್ತರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಳೇಕಾಯಿ ರಾಮದಾಸಪ್ಪ ಹೇಳಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆದ ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರ ನಾಮಪತ್ರ ಸಲ್ಲಿಸುವ ಕುರಿತು ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಪ್ರಧಾನಿ ಮೋದಿ ಅವರ ಸಾಧನೆಗಳೇ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಪ್ರಮುಖ ಕಾರಣವಾಗಿದೆ. ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಸಂಘಟಿತರಾಗಬೇಕು. ಮನೆ ಮನೆಗೆ ಮೋದಿಯವರ ಜನಪ್ರಿಯ ಕಾರ್ಯಕ್ರಮಗಳ ಮಾಹಿತಿಯನ್ನು ತಲುಪಿಸಬೇಕು. ಆಯಾ ಗ್ರಾಮಗಳಲ್ಲಿ ಮತಗಳನ್ನು ಗಟ್ಟಿಗೊಳಿಸಬೇಕು. ಮುತ್ಸದ್ದಿ ರಾಜಕಾರಣಿ ಗೋವಿಂದ ಎಂ.ಕಾರಜೋಳ ಅಭಿವೃದ್ಧಿ ರಾಜಕಾರಣಿಯಾಗಿದ್ದಾರೆ. ದೇಶದಲ್ಲಿ ಮತ್ತೊಮ್ಮೆ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಜಿಲ್ಲೆಯಿಂದ ಸಂಸದನನ್ನು ಆಯ್ಕೆ ಮಾಡಬೇಕಿದೆ. ಹಾಗಾಗಿ ಪ್ರತಿಯೊಬ್ಬ ಕಾರ್ಯಕರ್ತರು ಲೋಕಸಭಾ ಚುನಾವನೆಯಲ್ಲಿ ಹೆಚ್ಚಿನ ಮತಗಳನ್ನು ಕೊಡಿಸುವತ್ತ ಮುಂದಾಗಬೇಕು ಎಂದರು.

ಮಂಡಲ ಅಧ್ಯಕ್ಷ ಡಾ.ಪಿ.ಎಂ.ಮಂಜುನಾಥ ಮಾತನಾಡಿ, ಗೋವಿಂದ ಕಾರಜೋಳ ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದಾರೆ. ಸದಾ ಜನರ ಒಡನಾಡಿಯಾಗಿ ಸೇವೆ ಸಲ್ಲಿಸಿದ್ದಾರೆ. ಉಪಮುಖ್ಯಮಂತ್ರಿಯಾಗಿ, ಸಚಿವರಾಗಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿರುವ ಅವರನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ. ಕಾಂಗ್ರೆಸ್ ಸರ್ಕಾರದ ದುರಾಡಳಿತವನ್ನು ಜನ ಸಾಮಾನ್ಯರಿಗೆ ತಿಳಿಸುವ ಮೂಲಕ ಪಕ್ಷವನ್ನು ಇನ್ನಷ್ಟು ಬಲಪಡಿಸಬೇಕು. ಪ್ರತಿ ಬೂತ್‌ಗಳಲ್ಲಿ ಬಿಜೆಪಿಗೆ ಹೆಚ್ಚಿನ ಮತಗಳನ್ನು ಕೊಡಿಸುವ ಮೂಲಕ ಕಾರಜೋಳ ಅವರನ್ನು ಗೆಲ್ಲಿಸಿ ನರೇಂದ್ರ ಮೋದಿ ಅವರ ಕೈ ಬಲ ಪಡಿಸಬೇಕು ಎಂದರು.

ಈ ವೇಳೆ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಲಕ್ಷ್ಮಣ,ಸದಸ್ಯೆ ರೂಪ, ಶುಭಾ, ಮಹಿಳಾ ಮೋರ್ಚ ಅಧ್ಯಕ್ಷೆ ಸರ್ವ ಮಂಗಳ, ಮುಖಂಡ ಮಂಜು ಸ್ವಾಮಿ, ಪರಿಶಿಷ್ಟ ಪಂಗಡ ಮೋರ್ಚಾ ಅಧ್ಯಕ್ಷ ಜೀರಳ್ಳಿ ತಿಪ್ಪೇಸ್ವಾಮಿ, ತಿಮ್ಲಾಪುರ ಮೂರ್ತಿ, ಸೂರಮ್ಮನಹಳ್ಳಿ ನಾಗರಾಜ, ಜಿಂಕ್ಲು ಬಸವರಾಜ, ಚಂದ್ರಶೇಖರ ಗೌಡ, ಪರಿಶಿಷ್ಟ ಜಾತಿಮೋರ್ಚ ಅಧ್ಯಕ್ಷ ಸಿದ್ದಾರ್ಥ, ಕೆ.ಬಿ.ಮಹೇಶ,

Share this article