ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಜಿಲ್ಲಾ ಪಂಚಾಯ್ತಿ ಕಾವೇರಿ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಆಯೋಜಿಸಿದ್ದ ಗ್ರಾಮೀಣಾ ಪ್ರದೇಶ ಸುಸ್ಥಿರ ಕುಡಿಯುವ ನೀರು ಸರಬರಾಜು ಮಾಡುವಲ್ಲಿ ಗ್ರಾಮ ಪಂಚಾಯ್ತಿ ಪಾತ್ರ, ಕರ್ನಾಟಕ ಸುಸ್ಥಿರ ಗ್ರಾಮೀಣಾ ಕುಡಿಯುವ ನೀರು ಸರಬರಾಜು ಕಾರ್ಯಕ್ರಮದ ಅನುಷ್ಠಾನ ಮತ್ತು 24/7 ನೀರು ಸರಬರಾಜು ಗ್ರಾಮಗಳ ಘೋಷಣೆ ಕುರಿತಂತೆ ಜಿಲ್ಲಾ ಮಟ್ಟದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಜನರಿಗೆ ಮೂಲ ಸೌಕರ್ಯವನ್ನು ಒದಗಿಸುವುದು ಎಷ್ಟು ಮುಖ್ಯವೋ ಅವುಗಳ ನಿರ್ವಹಣೆಯು ಅಷ್ಟೇ ಮುಖ್ಯ. 24*7 ಜನರಿಗೆ ನೀರನ್ನು ಒದಗಿಸುವಲ್ಲಿ ಸಮಸ್ಯೆ ಉಂಟಾಗದಂತೆ ಸುಸ್ಥಿರವಾಗಿ ಕೆಲಸ ನಿರ್ವಹಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.ಸಾರ್ವಜನಿಕರಿಗೆ ಸರಬರಾಜು ಮಾಡುವ ನೀರಿನಲ್ಲಿ ಇತರೆ ಕಲುಷಿತ ನೀರು ಮಿಶ್ರಿತವಾಗುತ್ತಿರುವುದು ಕಂಡು ಬಂದಿದೆ. ನೀರಿನ ಪೈಪ್ ಲೈನ್ ಗಳನ್ನು ಪರಿಶೀಲಿಸಿ ಸಮೀಕ್ಷೆ ನಡೆಸಿ ಒಂದು ತಿಂಗಳಿನಲ್ಲಿ ಮಾಹಿತಿ ನೀಡಿ ಹಾಗೂ ಕಲುಷಿತ ನೀರು ಕುಡಿಯುವ ನೀರಿನ ಪೈಪ್ ಲೈನ್ ನಲ್ಲಿ ಮಿಶ್ರಿಣವಾಗದಂತೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ತಿಳಿಸಿ ಎಂದರು.
ಗ್ರಾಮಗಳಿಗೆ ದಿನದ 24 ಗಂಟೆ ನೀರು ಸರಬರಾಜು ಮಾಡಲು ನಿರ್ಧರಿಸಿರುವುದರಿಂದ ಜಿಲ್ಲೆಯ ಪ್ರತಿ ಗ್ರಾಮದ ವಾಟರ್ ಮ್ಯಾನ್ ಗಳು ನೀರು ಫೋಲ್ ಆಗದಂತೆ ಗಮನಿಸಲು ಹಾಗೂ ನೀರು ಬಿಡುಗಡೆಯಲ್ಲಿ ಲೋಪ ಉಂಟಾಗದಂತೆ ಕೆಲಸ ನಿರ್ವಹಿಸಬೇಕು ಎಂದರು.
ಪೈಪ್ ಲೈನಿಗೆ ಸಂಬಂಧಿಸಿದಂತೆ ಉಂಟಾಗುವ ಸಣ್ಣ ಪುಟ್ಟ ತಾಂತ್ರಿಕ ಸಮಸ್ಯೆಗಳನ್ನು ಮನೆ ಮನೆಗೆ ತಲುಪಿ ಬಗೆಹರಿಸುವ ಸಲುವಾಗಿ ಉಪಕರಣಗಳನ್ನು ಒಳಗೊಂಡಂತೆ ಪ್ರತಿ ತಾಲೂಕಿನಲ್ಲಿ. ಐಟಿಐ, ಎಂಜಿನಿಯರಿಂಗ್ ಮಾಡಿ ಉದ್ಯೋಗವಿಲ್ಲದ ಹೆಣ್ಣು ಮಕ್ಕಳನ್ನು ಗುರುತಿಸಿ ಸಣ್ಣ ಪುಟ್ಟ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ತರಬೇತಿ ನೀಡಿ ಉದ್ಯೋಗವಕಾಶವನ್ನು ಕಲ್ಪಿಸಿ ಎಂದು ತಿಳಿ ಹೇಳಿದರು.