ಬೆಂಗಳೂರು: ಬಿಸಿಲ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರಾಜ್ಯದ 11 ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಶಿಯಸ್ ದಾಟಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಜಿಲ್ಲೆಗಳು ಭಾರೀ ಪ್ರಮಾಣದ ಬಿಸಿ ಎದುರಿಸಬೇಕಾಗಲಿದೆ.
ಎಲ್ ನಿನೋ ಪ್ರಭಾವದಿಂದ ರಾಜ್ಯದಲ್ಲಿ ಭಾರೀ ಪ್ರಮಾಣದ ಮಳೆ ಕೊರತೆ ಉಂಟಾಗಿ ಭೀಕರ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ವಾತಾವರಣದಲ್ಲಿ ತೇವಾಂಶ ಕಡಿಮೆಯಾಗಿ ಗರಿಷ್ಠ ಉಷ್ಣಾಂಶದಲ್ಲಿ ತೀವ್ರ ಹೆಚ್ಚಳವಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಾಡಿಕೆ ಪ್ರಮಾಣಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಶಿಯಸ್‌ವರೆಗೆ ಗರಿಷ್ಠ ಉಷ್ಣಾಂಶ ಹೆಚ್ಚಳವಾಗುತ್ತಿದೆ.
ಭಾನುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಉತ್ತರ ಕರ್ನಾಟಕ ಭಾಗದ 11 ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಶಿಯಸ್‌ಗಿಂತ ಹೆಚ್ಚು ದಾಖಲಾಗಿದೆ.ಬಾಗಲಕೋಟೆಯಲ್ಲಿ 40.6 ಡಿಗ್ರಿ ಸೆಲ್ಸಿಯಸ್, ಬಳ್ಳಾರಿ 40.7, ಬೀದರ್ 40.1, ಗದಗ 40, ಹಾವೇರಿ 40.1, ಕಲಬುರಗಿ 42, ಕೊಪ್ಪಳ 40.6, ರಾಯಚೂರು 42.1, ವಿಜಯನಗರ 40.7, ವಿಜಯಪುರ 40.9 ಹಾಗೂ ಯಾದಗಿರಿಯಲ್ಲಿ 41.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಅದೇ ರೀತಿ ವಿಜಯಪುರ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಶನಿವಾರ ಹಗುರ ಮಳೆಯಾದ ವರದಿಯಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ. ಮುಂದಿನ 24 ಗಂಟೆಯಲ್ಲಿ ಬಾಗಲಕೋಟೆ, ಬೆಳಗಾವಿ ಹಾಗೂ ವಿಜಯಪುರದಲ್ಲಿ ಗುಡುಗು-ಮಿಂಚು ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.-
3 ದಿನ ಉಷ್ಣ ಅಲೆ
ಬಾಗಲಕೋಟೆ, ಕಲಬುರಗಿ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಏ.3 ರಿಂದ 5ರವರೆಗೆ ಉಷ್ಣ ಅಲೆ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಎಲ್ಲಿ ಎಷ್ಟು ಬಿಸಿ? (ಡಿಗ್ರಿ ಸೆಲ್ಶಿಯಸ್)ರಾಯಚೂರು42.1ಕಲಬುರಗಿ42ಯಾದಗಿರಿ41.8ವಿಜಯಪುರ 40.9ಬಳ್ಳಾರಿ40.7ವಿಜಯನಗರ40.7ಕೊಪ್ಪಳ40.6ಬಾಗಲಕೋಟೆ40.6ಬೀದರ್40.1ಹಾವೇರಿ40.1ಗದಗ40