ಕಾರ್ಯಕ್ರಮದ ಸಾನ್ನಿಧ್ಯವನ್ನು ಶ್ರೀ ಕ್ಷೇತ್ರ ಕಾಗಿನೆಲೆ ಪೀಠಾಧ್ಯಕ್ಷರಾದ ನಿರಂಜನಾನಂದ ಪುರಿ ಸ್ವಾಮಿಗಳು, ಶ್ರೀ ಸಿದ್ಧಗಂಗಾ ಮಠದ ಪೀಠಾಧಿಪತಿಗಳಾದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು, ಶ್ರೀ ಆದಿಚುಂಚನಗಿರಿ ಮಠದ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಧರ್ಮಸ್ಥಳದ ಧರ್ಮದರ್ಶಿಗಳಾದ ಡಾ. ವೀರೇಂದ್ರ ಹೆಗಡೆ ಅವರು ವಹಿಸಿಕೊಳ್ಳಲಿದ್ದಾರೆ. ಘನ ಉಪಸ್ಥಿತಿಯನ್ನು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆಗಮಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಅವರು ನೆರವೇರಿಸಲಿದ್ದಾರೆ.
ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ
ತಾಲೂಕಿನ ಗಡಿ ಗ್ರಾಮವಾದ ತೊಳಸಿ ಗ್ರಾಮದ ಶ್ರೀ ತೊಳನೇಶ್ವರ, ಬಸವೇಶ್ವರ, ಮಹಾಗಣಪತಿ, ಸುಬ್ರಮಣ್ಯ ದೇವರ ವಿಮಾನ ಕಳಸ ಮಹಾ ಕುಂಭಾಭಿಷೇಕ ಪ್ರತಿಷ್ಠಾಪನಾ ಮಹೋತ್ಸವ ಜರುಗಲಿದೆ ಎಂದು ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಟಿ. ಎನ್. ರಮೇಶ ತಿಳಿಸಿದರು. ಏ.೧೯ರ ಭಾನುವಾರ ಬ್ರಾಹ್ಮೀ ಮುಹೂರ್ತದಲ್ಲಿ ಪೀಠಪೂಜೆ, ಯಂತ್ರ ಮತ್ತು ರತ್ನ ವ್ಯಾಸಗಳು ಶ್ರೀಯವರಿಗೆ ಅಷ್ಟ ಬಂಧನ, ಆವಾಹನೆ, ವಿಮಾನ ಕಳಸ ಸ್ಥಾಪನೆ, ಶ್ರೀಯವರಿಗೆ ರುದ್ರಾಭಿಷೇಕ, ನೇತ್ರೋನಿಮಿಲನ, ಪೂರ್ಣಾವತಿ, ಕದಲೀಚೇತನ ನಿರೀಕ್ಷಣೆ, ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗ ನಡೆಯಲಿದೆ ಎಂದು ತಿಳಿಸಿದರು. ಈ ಕಾರ್ಯಕ್ರಮದ ಸಾನ್ನಿಧ್ಯವನ್ನು ಶ್ರೀ ಕ್ಷೇತ್ರ ಕಾಗಿನೆಲೆ ಪೀಠಾಧ್ಯಕ್ಷರಾದ ನಿರಂಜನಾನಂದ ಪುರಿ ಸ್ವಾಮಿಗಳು, ಶ್ರೀ ಸಿದ್ಧಗಂಗಾ ಮಠದ ಪೀಠಾಧಿಪತಿಗಳಾದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು, ಶ್ರೀ ಆದಿಚುಂಚನಗಿರಿ ಮಠದ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಧರ್ಮಸ್ಥಳದ ಧರ್ಮದರ್ಶಿಗಳಾದ ಡಾ. ವೀರೇಂದ್ರ ಹೆಗಡೆ ಅವರು ವಹಿಸಿಕೊಳ್ಳಲಿದ್ದಾರೆ. ಘನ ಉಪಸ್ಥಿತಿಯನ್ನು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆಗಮಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಅವರು ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಕೆ ಆರ್ ಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎಚ್ ಟಿ ಮಂಜು ವಹಿಸಲಿದ್ದಾರೆ, ಮುಖ್ಯ ಅತಿಥಿಗಳಾಗಿ ಮಂಡ್ಯ ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಎನ್ ಚೆಲುವರಾಯಸ್ವಾಮಿ, ಎಂಎಲ್‌ಸಿ ಡಾ. ಯತೀಂದ್ರ ಸಿದ್ರಾಮಯ್ಯ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಚನ್ನರಾಯಪಟ್ಟಣ ತಾಲೂಕಿನ ಶಾಸಕ ಸಿ. ಎನ್. ಬಾಲಕೃಷ್ಣ, ಸ್ವರೂಪ್ರಕಾಶ್, ಸೂರಜ್ ರೇವಣ್ಣ, ಜಿ ಟಿ ಹರೀಶ್ ಗೌಡ, ಮಾಜಿ ಮಂತ್ರಿಗಳಾದ ಕೆ ಸಿ ನಾರಾಯಣಗೌಡ, ಮಾಜಿ ಶಾಸಕರಾದ ಕೆ ಬಿ ಚಂದ್ರಶೇಖರ್, ಬಿ ಪ್ರಕಾಶ್, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷರಾದ ಬಿ ಎಲ್ ದೇವರಾಜ್, ಟಿಎಪಿಸಿಎಂಎಸ್ ನಿರ್ದೇಶಕರಾದ ಎಚ್ ಟಿ ಲೋಕೇಶ್, ಕರ್ನಾಟಕ ಸಹಕಾರ ಮಾರಾಟ ಮಂಡಳಿಯ ನಿರ್ದೇಶಕರಾದ ಸಿ ಎನ್ ಪುಟ್ಟಸ್ವಾಮಿಗೌಡ, ಮಮುಲ್ ನಿರ್ದೇಶಕರಾದ ಡಾಲ್ ರವಿ, ಎಂ ಬಿ ಹರೀಶ್, ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಕೆ ಎಸ್ ಪ್ರಭಾಕರ್, ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷರಾದ ಕಿಕ್ಕೇರಿ ಸುರೇಶ್, ಮಿತ್ರ ಫೌಂಡೇಶನ್ ಅಧ್ಯಕ್ಷರಾದ ವಿಜಯ ರಾಮೇಗೌಡ, ಆರ್‌ಟಿಒ ಸಂಘದ ರಾಜ್ಯಾಧ್ಯಕ್ಷರಾದ ಮಲ್ಲಿಕಾರ್ಜುನ್, ಸುಬ್ರಹ್ಮಣ್ಯ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಬಿ.ಎಮ್ ಕಿರಣ್, ಕಿಕ್ಕೇರಿ ಕೆಪಿಎಸ್ ಶಾಲೆಯ ಅಧ್ಯಕ್ಷರಾದ ಎನ್ ಕೃಷ್ಣೇಗೌಡ, ತಾಲೂಕು ಪಂಚಾಯತಿ ಮಾಜಿ ಸದಸ್ಯರಾದ ಧನಂಜಯ್, ಸೇರಿದಂತೆ ಇತರೆ ಗಣ್ಯರು ಆಗಮಿಸಲಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.