ದೇವಸ್ಥಾನಗಳು ನಮ್ಮ ಸಂಸ್ಕೃತಿ, ಸಂಪ್ರದಾಯದ ಪ್ರತೀಕ: ಚೈತನ್ಯ ಸದ್ಗುರು ಗೋಪಾಲ ಮಹಾರಾಜ

KannadaprabhaNewsNetwork |  
Published : Aug 29, 2026, 01:45 AM IST
ಲಕ್ಷ್ಮೇಶ್ವರ ಪಟ್ಟಣದ  ಭಾವಸಾರ ಕ್ಷತ್ರಿಯ ಸಮಾಜದ ಪಾಂಡುರಂಗ, ರಕುಮಾಯಿ ದೇವರ ನೂತನ ಮೂರ್ತಿಗಳ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ನಡೆದ ಹೋಮದಲ್ಲಿ ಆನಂದ ಗಡ್ಡದೇವರಮಠ ಹಾಗೂ ರಮೇಶ ನವಲೆ ದಂಪತಿಗಳು ಪಾಲ್ಗೊಂಡು ಪೂಜೆ ಸಲ್ಲಿಸಿದರು. | Kannada Prabha

ಸಾರಾಂಶ

ಲಕ್ಷ್ಮೇಶ್ವರ ಪಟ್ಟಣದ ಪಾಂಡುರಂಗ ದೇವಸ್ಥಾನದಲ್ಲಿ ಶ್ರಾವಣ ಮಾಸದ ಜ್ಞಾನೇಶ್ವರಿ ಪಾರಾಯಣದ ರಜತ ಮಹೋತ್ಸವ ಹಾಗೂ ಪಾಂಡುರಂಗ–ರಕುಮಾಯಿ ನೂತನ ಮೂರ್ತಿಗಳ ಪ್ರತಿಷ್ಠಾಪನಾ ಕಾರ್ಯಕ್ರಮ ಇತ್ತೀಚೆಗೆ ಶಾಸ್ತ್ರೋಕ್ತವಾಗಿ ನೆರವೇರಿತು.

ಲಕ್ಷ್ಮೇಶ್ವರ: ಪಟ್ಟಣದ ಪಾಂಡುರಂಗ ದೇವಸ್ಥಾನದಲ್ಲಿ ಶ್ರಾವಣ ಮಾಸದ ಜ್ಞಾನೇಶ್ವರಿ ಪಾರಾಯಣದ ರಜತ ಮಹೋತ್ಸವ ಹಾಗೂ ಪಾಂಡುರಂಗ–ರಕುಮಾಯಿ ನೂತನ ಮೂರ್ತಿಗಳ ಪ್ರತಿಷ್ಠಾಪನಾ ಕಾರ್ಯಕ್ರಮ ಇತ್ತೀಚೆಗೆ ಶಾಸ್ತ್ರೋಕ್ತವಾಗಿ ನೆರವೇರಿತು.

ಮಹೋತ್ಸವದ ಅಂಗವಾಗಿ ಐದು ದಿನಗಳ ಕಾಲ ಕಾಕಡಾ ಆರತಿ, ಜ್ಞಾನೇಶ್ವರಿ ಪಾರಾಯಣ, ಮಂಚರಿಗಾಥಾ ಭಜನೆ, ಪ್ರವಚನ, ನಾಮಜಪ, ಕೀರ್ತನೆ, ಜಾಗರ ಭಜನೆ ಹಾಗೂ ಭಾರೂಡ ಸೇರಿದಂತೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಕಾಕಡಾ ಆರತಿ ಹಾಗೂ ಪೋಥಿ ಸ್ಥಾಪನೆಯೊಂದಿಗೆ ಮಹೋತ್ಸವಕ್ಕೆ ಚಾಲನೆ ನೀಡಲಾಗಿತ್ತು. ಮಂಚರಿಗಾಥಾ ಭಜನೆ, ಸಂಜೆ ಪ್ರವಚನ ಹಾಗೂ ನಾಮಜಪ ಮತ್ತು ರಾತ್ರಿ ಕೀರ್ತನೆ ನೆರವೇರಿತು.

ಎರಡನೇ ದಿನ ಕಾಕಡಾ ಆರತಿ, ಪಾರಾಯಣ ಕಾರ್ಯಕ್ರಮ, ಆನಂತರ ಸರಿಯಾಗಿ ಮುಂಜಾನೆ ೭.೫೦ಕ್ಕೆ ಪಂಡರಪುರದ ಚೈತನ್ಯ ಸದ್ಗುರು ಗೋಪಾಲ ಮಹಾರಾಜ ಹಾಗೂ ಪ್ರಭಾಕರ ದಾದಾ ಭುಜಂಗರಾವ್ ಬೋಧಲೆ ಮಹಾರಾಜ ಅವರ ಅಮೃತಹಸ್ತದಿಂದ ಪ್ರತಿಷ್ಠಾಪನೆ ನೆರವೇರಿತು. ಚಿಕ್ಕರಸ ಪೂಜಾರ ನೇತೃತ್ವದ ಋತ್ವಿಜರ ಬಳಗ ವಾಸ್ತು ಹೋಮ, ಪ್ರತಿಷ್ಠಾಪನೆ ಹೋಮ ನೆರವೇರಿಸಿತು. ಪುರೋಹಿತರ ವೇದ-ಘೋಷಗಳ ಮಧ್ಯೆ ನೂತನ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆ ಕಾರ್ಯ ಯಶಸ್ವಿಯಾಗಿ ಜರುಗಿತು.

ಕಾಂಗ್ರೆಸ್ ಮುಖಂಡ ಆನಂದ ಗಡ್ಡದೇವರಮಠ ಮತ್ತು ದೀಪಾ ಗಡ್ಡದೇವರಮಠ ದಂಪತಿ, ರಮೇಶ ನವಲೆ ದಂಪತಿ ಪೂಜಾ ಕಾರ್ಯಗಳಲ್ಲಿ ಪಾಲ್ಗೊಂಡು, ಹೋಮದಲ್ಲಿ ಪೂರ್ಣಾಹುತಿ ಅರ್ಪಿಸಿದರು.

ಪಂಢರಪುರದ ಚೈತನ್ಯ ಸದ್ಗುರು ಗೋಪಾಲ ಮಹಾರಾಜ ಮಾತನಾಡಿ, ದೇವಸ್ಥಾನಗಳು ನಮ್ಮ ಪರಂಪರೆ, ಸಂಸ್ಕೃತಿ, ಸಂಪ್ರದಾಯಗಳ ದ್ಯೋತಕವಾಗಿದೆ. ದೇವಸ್ಥಾನಗಳ ನಿರ್ಮಾಣಕ್ಕೆ ಆದ್ಯತೆ ನೀಡಿದಂತೆ ಅಲ್ಲಿ ನಿರಂತರ ಧಾರ್ಮಿಕ ಚಟುವಟಿಕೆ ನಡೆಯುವಂತೆ ನೋಡಿಕೊಳ್ಳುವುದೂ ಅವಶ್ಯವಾಗಿದೆ. ಹೋಮ-ಹವನಗಳಿಂದ ವಾತಾವರಣದಲ್ಲಿ ಧನಾತ್ಮಕ ಕ್ರಿಯೆಗಳು ನಿರ್ಮಾಣವಾಗುತ್ತಿದ್ದು, ಅವುಗಳಿಂದ ಮನಸ್ಸಿಗೆ, ನೆಮ್ಮದಿ, ಶಾಂತಿ ಲಭಿಸುತ್ತದೆ ಎಂದರು.

ಬಸವೇಶ ಮಹಾಂತಶೆಟ್ಟರ, ಸುನೀಲ ಮಹಾಂತಶೆಟ್ಟರ, ಗಿರೀಶ ತಟ್ಟಿ, ಗಿರೀಶ ಅಗಡಿ, ಲೋಹಿತ್ ನೆಲವಿಗಿ, ವಿಜಯ ಹತ್ತಿಕಾಳ ಆಗಮಿಸಿ, ದರ್ಶನಾಶೀರ್ವಾದ ಪಡೆದುಕೊಂಡರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

2028ರಲ್ಲಿ ಉಡುಪಿಯಲ್ಲಿ ವಿಶ್ವ ತುಳುವ ಮಹಾಸಭೆ
ಪತ್ರಕರ್ತರ ಮೇಲೆ ಹಲ್ಲೆ ಖಂಡನೀಯ: ಸುಧೀರ್‌ ಕುಮಾರ್‌