ದಾಬಸ್‍ಪೇಟೆ: ದೇವಾಲಯಗಳ ನಿರ್ಮಾಣದಿಂದ ಧಾರ್ಮಿಕ ಶ್ರದ್ಧೆ, ಭಕ್ತಿ ಮತ್ತು ಸಂಸ್ಕೃತಿ ಬೆಳೆಯುತ್ತದೆ. ಪೂರ್ವಿಕರು ಆಚರಿಸುತ್ತಿದ್ದ ಧಾರ್ಮಿಕ ಕಾರ್ಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಎಸ್.ರವಿ ಹೇಳಿದರು.
ಶಾಸಕ ಶ್ರೀನಿವಾಸ್ ಮಾತನಾಡಿ, ಸನಾತನ ಧರ್ಮ, ಸಂಸ್ಕೃತಿಯ ಪ್ರತೀಕವಾದ ಮಠಮಾನ್ಯಗಳು ಹಾಗೂ ದೇವಾಲಯಗಳು, ಮನುಷ್ಯನಿಗೆ ಶಾಂತಿ, ನೆಮ್ಮದಿ ಕರುಣಿಸುವ ಶ್ರದ್ಧಾ ಕೇಂದ್ರಗಳಾಗಿವೆ. ದೇವಾಲಯಗಳಲ್ಲಿ ಧನಾತ್ಮಕ ಶಕ್ತಿ ಅಡಗಿದ್ದು, ನಂಬಿಕೆಗೆ ಶಕ್ತಿ, ಶ್ರದ್ಧೆ, ಭಕ್ತಿಯಿಂದ ನಿರ್ವಹಿಸಿದ ಪ್ರತಿ ಕಾರ್ಯ ದೇವರಿಗೆ ಸಲ್ಲುತ್ತದೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಡಿ.ಸಿ.ಗೌರಿಶಂಕರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಆರ್.ಗೌಡ, ಮುಖಂಡರಾದ ಅಗಳಕುಪ್ಪೆ ಗೋವಿಂದರಾಜು, ಗ್ರಾಪಂ ಮಾಜಿ ಉಪಾಧ್ಯಕ್ಷ ರಾಜೇಶ್ ಕುಮಾರ್, ನಾರಾಯಣಸ್ವಾಮಿ, ಮನೋಹರ್, ಚಂದ್ರಶೇಖರ್, ಗಿರೀಶ್ ಗ್ರಾಮಸ್ಥರು, ಭಕ್ತರು ಉಪಸ್ಥಿತರಿದ್ದರು.ಪೋಟೋ 1 : ಸೋಂಪುರ ಹೋಬಳಿಯ ಹುಚ್ಚುವೀರಯ್ಯನಪಾಳ್ಯದಲ್ಲಿ ಗ್ರಾಮದೇವತೆಗಳಾದ ಪಳೇಕಮ್ಮ ದೇವಿ, ಮಾರಮ್ಮದೇವಿ ದೇವಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಎಸ್.ರವಿ, ಶಾಸಕ ಶ್ರೀನಿವಾಸ್, ಮಾಜಿ ಶಾಸಕ ಗೌರಿಶಂಕರ್ ಪಾಲ್ಗೊಂಡಿದ್ದರು.