ದೇವಸ್ಥಾನಗಳು ಸಮಾಜ ಒಗ್ಗೂಡಿಸುವ ಶಕ್ರಿ ಕೇಂದ್ರ: ಶಾಸಕ ಮಾನೆ

KannadaprabhaNewsNetwork |  
Published : Oct 01, 2026, 02:30 AM IST
ಕತ್ರಿಕೊಪ್ಪ ಗ್ರಾಮದಲ್ಲಿ ೫ ಲಕ್ಷ ರು. ವೆಚ್ಚದಲ್ಲಿ ದೇವಸ್ಥಾನದ ಆವರಣದಲ್ಲಿ ನೂತನ ಸಭಾಭವನ ನಿರ್ಮಾಣ ಕಾಮಗಾರಿಗೆ ಶಾಸಕ, ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು. | Kannada Prabha

ಸಾರಾಂಶ

ತಾಲೂಕಿನ ಕತ್ರಿಕೊಪ್ಪ ಗ್ರಾಮದಲ್ಲಿ ೨೦೨೫-೨೬ನೇ ಸಾಲಿನ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ೫ ಲಕ್ಷ ರು. ವೆಚ್ಚದಲ್ಲಿ ಚೌಡೇಶ್ವರಿ ದೇವಸ್ಥಾನದ ಆವರಣದಲ್ಲಿ ನೂತನ ಸಭಾಭವನ ನಿರ್ಮಾಣ ಕಾಮಗಾರಿಗೆ ಇತ್ತೀಚಿಗೆ ಶಾಸಕ, ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.

ಚೌಡೇಶ್ವರಿ ದೇವಸ್ಥಾನದ ಸಭಾಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ

ಕನ್ನಡಪ್ರಭ ವಾರ್ತೆ ಹಾನಗಲ್ಲ

ತಾಲೂಕಿನ ಕತ್ರಿಕೊಪ್ಪ ಗ್ರಾಮದಲ್ಲಿ ೨೦೨೫-೨೬ನೇ ಸಾಲಿನ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ೫ ಲಕ್ಷ ರು. ವೆಚ್ಚದಲ್ಲಿ ಚೌಡೇಶ್ವರಿ ದೇವಸ್ಥಾನದ ಆವರಣದಲ್ಲಿ ನೂತನ ಸಭಾಭವನ ನಿರ್ಮಾಣ ಕಾಮಗಾರಿಗೆ ಇತ್ತೀಚಿಗೆ ಶಾಸಕ, ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.

ದೇವಸ್ಥಾನಗಳು ಕೇವಲ ಧಾರ್ಮಿಕ ಕೇಂದ್ರಗಳಾಗಿರದೆ ಸಮಾಜದ ಜನರನ್ನು ಒಗ್ಗೂಡಿಸುವ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ವೇದಿಕೆಯಾಗುವ ಪ್ರಮುಖ ಸ್ಥಳಗಳಾಗಿವೆ. ಸಭಾಭವನ ನಿರ್ಮಾಣದಿಂದ ಧಾರ್ಮಿಕ, ಸಾಮಾಜಿಕ ಹಾಗೂ ಸಮುದಾಯದ ವಿವಿಧ ಕಾರ್ಯಕ್ರಮಗಳನ್ನು ನಡೆಸಲು ಅನುಕೂಲವಾಗಲಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದ ಶಾಸಕ ಮಾನೆ, ಗ್ರಾಮದ ಅಭಿವೃದ್ಧಿಗೆ ಶೀಘ್ರ ಇನ್ನಷ್ಟು ಅನುದಾನ ದೊರಕಿಸುವ ಭರವಸೆ ನೀಡಿದರು.

ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕಾಧ್ಯಕ್ಷ ವೀರಪ್ಪ ಬೈಲವಾಳ, ತಾಪಂ ಮಾಜಿ ಅಧ್ಯಕ್ಷ ಸಿದ್ದನಗೌಡ ಪಾಟೀಲ, ಕೆಪಿಸಿಸಿ ಸದಸ್ಯ ಟಾಕನಗೌಡ ಪಾಟೀಲ, ಜಿಪಂ ಕೆಡಿಪಿ ಸದಸ್ಯ ಶಿವಣ್ಣ ಗೊಲ್ಲರ, ಮುಖಂಡರಾದ ಫಕ್ಕೀರಪ್ಪ ಪೂಜಾರ, ರಾಜೂ ಯಾಧವ, ಮಂಜುನಾಥ ಗೊಲ್ಲರ, ಪರಶುರಾಮ ಗೊಲ್ಲರ, ಮಾಲತೇಶ ಗೊಲ್ಲರ, ವಿಜಯ ಗೊಲ್ಲರ, ನಾಗಪ್ಪ ಗೊಲ್ಲರ, ಶಿವಕುಮಾರ ಗೊಲ್ಲರ, ರಾಜಕುಮಾರ ಜೋಗಪ್ಪನವರ ಸೇರಿದಂತೆ ಇನ್ನೂ ಹಲವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೂತನ ಜಿಲ್ಲಾಡಳಿತ ಭವನ ನಿರ್ಮಾಣಕ್ಕೆ ಒತ್ತಾಯ
ಡಾ. ಐ.ಆರ್. ಭಟ್ಟರ ಮಾನವೀಯ ಗುಣ ಸ್ಮರಿಸಿದ ಒಡನಾಡಿಗಳು