ಟೆಂಪೊ ಡಿಕ್ಕಿ: ಸ್ಕೂಟರ್ ಸವಾರ ಸಾವು

KannadaprabhaNewsNetwork |  
Published : Mar 31, 2026, 03:00 AM IST
ವಿಶ್ವ ರಂಗಭೂಮಿ ದಿನಾಚರಣೆಯಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ತಾಲೂಕಿನ ಸಾಣೂರು ಪ್ರದೇಶದಲ್ಲಿ ಟೆಂಪೋ ಡಿಕ್ಕಿಯಾಗಿ ಸ್ಕೂಟರ್ ಸವಾರ ಮೃತಪಟ್ಟ ದುರ್ಘಟನೆ ಭಾನುವಾರ ಸಂಭವಿಸಿದೆ.

ಕಾರ್ಕಳ: ತಾಲೂಕಿನ ಸಾಣೂರು ಪ್ರದೇಶದಲ್ಲಿ ಟೆಂಪೋ ಡಿಕ್ಕಿಯಾಗಿ ಸ್ಕೂಟರ್ ಸವಾರ ಮೃತಪಟ್ಟ ದುರ್ಘಟನೆ ಭಾನುವಾರ ಸಂಭವಿಸಿದೆ.

ಕೆರ್ವಾಶೆ ನಿವಾಸಿ ಜಯಾನಂದ ಶೆಟ್ಟಿ ( 60) ಮೃತರು. ಜಯಾನಂದ ಶೆಟ್ಟಿ ಅವರು ತಮ್ಮ ಸ್ಕೂಟರ್‌ನಲ್ಲಿ ಸಾಣೂರಿನಿಂದ ಕಾರ್ಕಳದತ್ತ ಪ್ರಯಾಣಿಸುತ್ತಿದ್ದರು. ಈ ವೇಳೆ ಚಿಲಿಂಬಿ ಕಡೆಯಿಂದ ಕಾರ್ಕಳದತ್ತ ಬರುತ್ತಿದ್ದ ಟೆಂಪೋ ಹಿಂಬದಿಯಿಂದ ಅವರ ಸ್ಕೂಟರ್‌ಗೆ ಬಲವಾಗಿ ಡಿಕ್ಕಿ ಹೊಡೆದು ಅವರು ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸ್ಥಳೀಯರು ತಕ್ಷಣವೇ ಗಾಯಾಳುವನ್ನು ರಕ್ಷಿಸಿ ಚಿಕಿತ್ಸೆಗಾಗಿ ಕಾರ್ಕಳದ ಸಿಟಿ ಆಸ್ಪತ್ರೆಗೆ ಸಾಗಿಸಿದರು. ಆದರೆ ಮಾರ್ಗ ಮಧ್ಯೆಯೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೇವರ ನಾಡಿನಲ್ಲಿ ಮಹಾ ಸಮರಕ್ಕೆ ಅಖಾಡ ಸಿದ್ಧ
ಉದ್ಯೋಗ ಸ್ಥಳದಲ್ಲಿ ಮಹಿಳೆಯರಿಗೆ ಸುರಕ್ಷಿತ ವಾತಾವರಣ ಅಗತ್ಯ: ಪಲ್ಲವಿ