ಟೆಂಪೋ ಪಲ್ಟಿ: ೩೦ಕ್ಕೂ ಅಧಿಕ ಜನರಿಗೆ ಗಾಯ

KannadaprabhaNewsNetwork |  
Published : Jul 30, 2024, 12:37 AM IST
29ಎಸ್ ಎನ್ ಡಿ04 | Kannada Prabha

ಸಾರಾಂಶ

ವಾಹನ ಚಾಲಕನ ನಿರ್ಲಕ್ಷತನದಿಂದ ಟೆಂಪೋ ಪಲ್ಟಿಯಾದ ಪರಿಣಾಮ ಮಹಿಳೆಯರು, ಮಕ್ಕಳು ಸೇರಿದಂತೆ ೩೦ಕ್ಕೂ ಅಧಿಕ ಜನರು ಗಾಯಗೊಂಡು ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಅದೃಷ್ಟವಶಾತ್‌ ಅಪಘಾತದಲ್ಲಿ ಯಾವುದೇ ಪ್ರಾಣಹಾನಿಯಾಗದಿರುವ ಘಟನೆ ತಾಲೂಕಿನ ಮನ್ನಾಪುರ ಗ್ರಾಮದ ಬಳಿ ನಡೆದಿದೆ.

ಕನ್ನಡಪ್ರಭ ವಾರ್ತೆ ಸಿಂದಗಿ

ವಾಹನ ಚಾಲಕನ ನಿರ್ಲಕ್ಷತನದಿಂದ ಟೆಂಪೋ ಪಲ್ಟಿಯಾದ ಪರಿಣಾಮ ಮಹಿಳೆಯರು, ಮಕ್ಕಳು ಸೇರಿದಂತೆ ೩೦ಕ್ಕೂ ಅಧಿಕ ಜನರು ಗಾಯಗೊಂಡು ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಅದೃಷ್ಟವಶಾತ್‌ ಅಪಘಾತದಲ್ಲಿ ಯಾವುದೇ ಪ್ರಾಣಹಾನಿಯಾಗದಿರುವ ಘಟನೆ ತಾಲೂಕಿನ ಮನ್ನಾಪುರ ಗ್ರಾಮದ ಬಳಿ ನಡೆದಿದೆ.

ತಾಲೂಕಿನ ಹಿಕ್ಕಣಗುತ್ತಿ ಗ್ರಾಮಸ್ಥರು ಗೋಲಗೇರಿ ಗೊಲ್ಲಾಳೇಶ್ವರ ದೇವಸ್ಥಾನಕ್ಕೆ ಜವಳ ಕಾರ್ಯಕ್ರಮಕ್ಕೆ ಹೊರಟಿರುವ ಸಂದರ್ಭದಲ್ಲಿ ಸಿಂದಗಿ ಶಹಾಪೂರ ಹೆದ್ದಾರಿಯ ಮಾರ್ಗದಲ್ಲಿ ಬರುವ ಮನ್ನಾಪುರ ಗ್ರಾಮದ ಹತ್ತಿರ ಈ ಅಪಘಾತ ಸಂಭವಿಸಿದೆ. ತಕ್ಷಣದಲ್ಲಿ ಗಾಯಾಳುಗಳನ್ನು ಪ್ರಥಮ ಚಿಕಿತ್ಸೆಗೆ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಥಮ ಚಿಕಿತ್ಸೆ ನೀಡಲಾಗಿದೆ. ಈ ಅಪಘಾತದ ವಿಷಯ ತಿಳಿಯುತ್ತಿದ್ದಂತೆ ಶಾಸಕ ಅಶೋಕ ಮನಗೂಳಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿ ಗಂಭೀರ ಸ್ಥಿತಿಯಲ್ಲಿದ್ದವರಿಗೆ ಜಿಲ್ಲಾಸ್ಪತ್ರೆಗೆ ರವಾನಿಸುವಂತೆ ಸೂಚಿಸಿದರು. ಇದೇ ಸಂದರ್ಭದಲ್ಲಿ ಮಾಜಿ ಶಾಸಕ ರಮೇಶ ಭೂಸನೂರ ಕೂಡಾ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಅಪಘಾತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು. ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ವೈದ್ಯರಿಗೆ ತಿಳಿಸಿದ್ದಾರೆ. ಈ ಘಟನೆಯು ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ಆಸ್ಪತ್ರೆಗೆ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು. ಬಿಜೆಪಿ ಮಂಡಲ ಕೋಶಾಧ್ಯಕ್ಷ ಶ್ರೀಶೈಲಗೌಡ ಬಿರಾದಾರ, ಮಂಡಲ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ, ಕುಮಾರ ದೇಸಾಯಿ ಒಳಗೊಂಡಂತೆ ಅನೇಕ ಗಣ್ಯರು ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳನ್ನು ವಿಚಾರಿಸಿ ಆತ್ಮಸ್ಥೈರ್ಯ ತುಂಬಿದರು.

ಅಪಘಾತದಲ್ಲಿ ಗಾಯವಾದ ಜನರಿಗೆ ಸೂಕ್ತ ರೀತಿಯ ಚಿಕಿತ್ಸೆ ನೀಡುವಂತೆ ಸ್ಥಳೀಯ ವೈದ್ಯರಿಗೆ ಸೂಚಿಸಿದ್ದೇನೆ. ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ದಾಖಲಿಸಲು ಹೋಗಲು ಹೇಳಿದ್ದು, ಈಗಾಗಲೇ ಜಿಲ್ಲಾಸ್ಪತ್ರೆಯವರ ಜೊತೆಗೆ ದೂರವಾಣಿ ಮೂಲಕ ಸರಿಯಾದ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದೇನೆ.

-ಅಶೋಕ ಮನಗೂಳಿ, ಶಾಸಕರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ 2026ಕ್ಕೆ ಅದ್ಧೂರಿ ಸ್ವಾಗತ
ನಗುವ ಜಗದ ಅಳುವ ಬಯಸಿದ ಚಿರಕವಿ ಸಣಕಲ್ಲ