ಕನ್ನಡಪ್ರಭ ವಾರ್ತೆ ಸಿರಿಗೆರೆ
ಸಮೀಪದ ಚಿಕ್ಕೇನಹಳ್ಳಿ ಗ್ರಾಮದಲ್ಲಿ ೩ ಕೋಟಿ ರು. ವೆಚ್ಚದ ಸಿಸಿ ರಸ್ತೆ, ಚರಂಡಿ, ಸೋಲಾರ್ ದೀಪಗಳ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ನೂರು ಕಿ.ಮೀ. ದೂರದಲ್ಲಿರುವ ಹಿರಿಯೂರಿನ ವಾಣಿವಿಲಾಸಸಾಗರದಿಂದ ನೀರು ತಂದು ಪ್ರತಿ ಮನೆ ಮನೆಗೂ ಶುದ್ದ ಕುಡಿಯುವ ನೀರು ಪೂರೈಕೆ ಮಾಡುವ ಯೋಜನೆ ಇದೆ. ನೀರು ಶುದ್ದೀಕರಣಕ್ಕೆ ಬೇಕಾದ ಯಂತ್ರಕ್ಕೆ ೬೦ ಕೋಟಿ ರು. ನಿಗದಿ ಮಾಡಲಾಗಿದೆ ಎಂದರು.ರಾಜ್ಯದಲ್ಲಿ ಸರ್ಕಾರ ಯಾವುದಿದ್ದರೇನು? ಇಲಾಖೆಗಳಲ್ಲಿ ಲಭ್ಯ ಇರುವ ಅನುದಾನಗಳನ್ನು ತಂದು ಕ್ಷೇತ್ರದ ಅಭಿವೃದ್ಧಿಯ ಕೆಲಸ ಮಾಡುತ್ತಿದ್ದೇನೆ. ಓಟು ಹಾಕಿಸಿಕೊಂಡು ಗೆದ್ದ ಜನಪ್ರತಿನಿಧಿಗೆ ಇರಬೇಕಾದ ಬದ್ಧತೆ ನನ್ನಲ್ಲಿ ಇರುವುದರಿಂದ ಜನರಿಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ಕೆಲಸಕ್ಕೆ ಮುಂದಾಗಿದ್ದೇನೆ. ಗ್ರಾಮಗಳಲ್ಲಿ ಶಾಲೆ, ದೇವಸ್ಥಾನ, ಸಿ.ಸಿ.ರಸ್ತೆ, ಕುಡಿಯುವ ನೀರಿನ ಸೌಲಭ್ಯ ಒದಗಿಸಿದ್ದೇನೆ. ಕ್ಷೇತ್ರದ ವ್ಯಾಪ್ತಿಯ ಹಳ್ಳಿಗಳಲ್ಲಿ ಇರುವ ಕುಡಿಯುವ ನೀರಿನ ಸಮಸ್ಯೆಯನ್ನು ತಿಳಿದು, 130 ಕೋಟಿ ರು. ಖರ್ಚು ಮಾಡಿ ವಾಣಿ ವಿಲಾಸದಿಂದ ನೀರು ತರುವ ಕೆಲಸ ಮಾಡಲಾಗುತ್ತಿದೆ. ಅದಕ್ಕಾಗಿ ಮೆಷಿನರಿ, ಪೈಪ್‍ಲೈನ್ ಅಳವಡಿಸಲಾಗಿದೆ ಎಂದರು.
ಸಿರಿಗೆರೆ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಕೆ.ಬಿ.ಮೋಹನ್, ಗ್ರಾಮದ ಮಾಲತೇಶ್, ಗೌಡ್ರ ಮಹದೇವಪ್ಪ, ಮುಶ್ರಫ್, ಷಣ್ಮುಖಪ್ಪ, ನಾಗರಾಜ್, ಸಿರಿಗೆರೆ ಪಂಚಾಕ್ಷರಿ, ಮಂಜಣ್ಣ, ರಾಜಣ್ಣ, ಪಿಡಿಒ ಬಸವರಾಜ್ ಮುಂತಾದವರು ಭಾಗವಹಿಸಿದ್ದರು.
ದಶಕಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿದ್ದ ನಾನು ಶಾಸಕ ಚಂದ್ರಪ್ಪನವರ ಕೆಲಸ ನೋಡಿ ಬಿಜೆಪಿಗೆ ಬಂದಿದ್ದೇನೆ. ಅವರು ಕಾಲಿಗೆ ಚಕ್ರ ಕಟ್ಟಿಕೊಂಡು ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದ್ದಾರೆ. ಮುಂದಿನ ಬಾರಿ ರಾಜ್ಯದಲ್ಲಿ ಬಿಜೆಪಿ ಆಡಳಿತಕ್ಕೆ ಬಂದು ಅವರು ಸಚಿವರಾಗಬೇಕು. ಆಗ ಈ ಕ್ಷೇತ್ರದ ಚಿತ್ರಣವೇ ಬದಲಾಗಲಿದೆ. ಆ ಹಿನ್ನೆಲೆಯಲ್ಲಿ ಕ್ಷೇತ್ರದ ಮತದಾರರು ಅವರನ್ನು ಬೆಂಬಲಿಸಬೇಕು ಎಂದು ಹಳವುದರದ ತಿಪ್ಪೇಸ್ವಾಮಿ ತಿಳಿಸಿದರು.
ಮುಂಬರುವ ಚುನಾವಣಾ ಸಂದರ್ಭದಲ್ಲಿ ಚಿಕ್ಕೇನಹಳ್ಳಿ, ಕೋಣನೂರು, ಬೊಮ್ಮವ್ವನಾಗತಿಹಳ್ಳಿ ಗ್ರಾಮಗಳನ್ನು ಸಿರಿಗೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಸೇರಿಸಬೇಕು ಎಂದು ಗ್ರಾಮಸ್ಥರು ಶಾಸಕ ಎಂ.ಚಂದ್ರಪ್ಪ ಅವರಲ್ಲಿ ಬೇಡಿಕೆ ಇಟ್ಟರು.