ಪತ್ರಕರ್ತರ ಭವನ ನಿರ್ಮಾಣಕ್ಕೆ ₹10 ಲಕ್ಷ ಅನುದಾನ

KannadaprabhaNewsNetwork |  
Published : Oct 26, 2025, 02:00 AM IST
ಹನೂರು ಪಟ್ಟಣದ ರೈತ ಸಂಪರ್ಕ ಕೇಂದ್ರದ ಸಮೀಪ ನಿರ್ಮಾಣ ಮಾಡುತ್ತಿರುವ ಪತ್ರಕರ್ತರ ಭವನ ಕಾಮಗಾರಿ ಪರಿಶೀಲನೆ | Kannada Prabha

ಸಾರಾಂಶ

ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ ತಾಲೂಕು ಕಾರ್ಯನಿರತ ಪತ್ರಕರ್ತರ ಭವನ ನಿರ್ಮಾಣ ಕಾಮಗಾರಿಗೆ 10 ಲಕ್ಷ ರು. ಅನುದಾನ ನೀಡುವುದಾಗಿ ಸಂಸದ ಸುನೀಲ್ ಬೋಸ್ ತಿಳಿಸಿದರು.

ಕನ್ನಡಪ್ರಭ ವಾರ್ತೆ, ಹನೂರು

ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ ತಾಲೂಕು ಕಾರ್ಯನಿರತ ಪತ್ರಕರ್ತರ ಭವನ ನಿರ್ಮಾಣ ಕಾಮಗಾರಿಗೆ 10 ಲಕ್ಷ ರು. ಅನುದಾನ ನೀಡುವುದಾಗಿ ಸಂಸದ ಸುನೀಲ್ ಬೋಸ್ ತಿಳಿಸಿದರು.

ಪಟ್ಟಣದ ರೈತ ಸಂಪರ್ಕ ಕೇಂದ್ರದ ಸಮೀಪ ನಿರ್ಮಾಣ ಮಾಡುತ್ತಿರುವ ಪತ್ರಕರ್ತರ ಭವನ ಕಾಮಗಾರಿ ಪರಿಶೀಲನೆ ನಡೆಸಿ ಮಾತನಾಡಿದರು.

ಹನೂರು ತಾಲೂಕು ಭೌಗೋಳಿಕವಾಗಿ ವಿಸ್ತೀರ್ಣ ಹೊಂದಿದೆ. ವಿವಿಧ ಗ್ರಾಮಗಳಿಂದ ಬರುವ ಪತ್ರಕರ್ತರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಭವನ ನಿರ್ಮಾಣ ಮಾಡುತ್ತಿರುವುದು ಸಂತಸದ ವಿಚಾರ. ಪತ್ರಕರ್ತರ ಭವನ ನಿರ್ಮಾಣ ಮಾಡಲು 10 ಲಕ್ಷ ರು.ಅನುದಾನ ನೀಡುತ್ತೇನೆ. ಮುಂದಿನ ವರ್ಷವೂ ಸಹ ಹೆಚ್ಚಿನ ಅನುದಾನ ನೀಡುವುದರ ಮೂಲಕ ಕಾಮಗಾರಿ ಪೂರ್ಣಗೊಳ್ಳಲು ಎಲ್ಲ ರೀತಿಯ ಸಹಕಾರ ನೀಡುತ್ತೇನೆ ಎಂದರು.

ತಾಲೂಕಿನಲ್ಲಿ ಕ್ರಿಯಾಶೀಲ ಯುವ ಪತ್ರಕರ್ತರಿರುವುದರಿಂದ ಕ್ಷೇತ್ರದ ಸಮಸ್ಯೆಗಳನ್ನು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಗಮನಕ್ಕೆ ತಂದು ಪರಿಹರಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಕೆಲವೊಮ್ಮೆ ನಮಗೂ ಕೂಡ ಸಮಸ್ಯೆಗಳು ಇರುವುದು ಗೊತ್ತಾಗುವುದಿಲ್ಲ. ಅಂತಹ ಸಮಸ್ಯೆಗಳನ್ನು ನಮ್ಮ ಗಮನಕ್ಕೆ ತಂದು ಬಗೆಹರಿಸುತ್ತಿದ್ದಾರೆ ಎಂದರು.ಇಂತಹ ಯುವ ಪತ್ರಕರ್ತರಿಗೆ ಪ್ರೋತ್ಸಾಹ ನೀಡಬೇಕಾಗಿರುವುದು ನಮ್ಮ ಪ್ರಮುಖ ಜವಾಬ್ದಾರಿ. ತಾಲೂಕಿನಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಯಶಸ್ವಿಯಾಗಿ ಮಾಡಿ ರಾಜ್ಯದಲ್ಲಿ ಮಾದರಿ ಸಂಘ ಎಂದು ಹೆಸರುವಾಸಿಯಾಗಿರುವುದು ಸಂತಸ ತಂದಿದೆ. ಮುಂದಿನ ದಿನಗಳಲ್ಲಿ ಪತ್ರಕರ್ತರಿಗೆ ಹೆಚ್ಚಿನ ಸೌಲಭ್ಯ ಕಲ್ಪಿಸಿ ಕೊಡುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ತಾಲೂಕು ಕಾರ್ಯನಿರತ ಸಂಘದ ಅಧ್ಯಕ್ಷ ಮಹಾದೇಶ್ ಮಾತನಾಡಿ, ತಾಲೂಕು ಕೇಂದ್ರದಲ್ಲಿ ಆರ್. ನರೇಂದ್ರ ಶಾಸಕರಾಗಿದ್ದಾಗ 40 ಲಕ್ಷ ರು. ವೆಚ್ಚದಲ್ಲಿ ಪತ್ರಿಕಾ ಭವನ ನಿರ್ಮಾಣ ಮಾಡಲು ಈ ಹಿಂದೆ ಕ್ರಿಯಾಯೋಜನೆ ಮಾಡಿ ₹5 ಲಕ್ಷ ಅನುದಾನ ನೀಡಿದ್ದರು. ಶಾಸಕ ಎಂ.ಆರ್. ಮಂಜುನಾಥ್ ಅನುದಾನ ನೀಡುವುದಾಗಿ ಹೇಳಿದ್ದಾರೆ ಎಂದರು.

ಹಿರಿಯ ಪತ್ರಕರ್ತ ಲಿಂಗರಾಜು ಮಾತನಾಡಿ, ನಮ್ಮ ಹನೂರು ತಾಲೂಕಿನ ಪತ್ರಕರ್ತರಿಗೆ ಭವನ ಇಲ್ಲದೆ ಇರುವುದರಿಂದ ತುಂಬಾ ಅನಾನುಕೂಲವಾಗಿದೆ. ನಾವು ಸಭೆ ಸಮಾರಂಭಗಳನ್ನು ಖಾಸಗಿ ಕಲ್ಯಾಣ ಮಂಟಪ ಅಥವಾ ಲೋಕೋಪಯೋಗಿ ಅತಿಥಿ ಗೃಹದಲ್ಲಿ ಮಾಡಬೇಕಿದೆ ತಾವು ತಮ್ಮ ಅನುದಾನದಿಂದ ಭವನ ನಿರ್ಮಾಣಕ್ಕೆ ಸಹಕಾರ ನೀಡಿದರೆ ಹೆಚ್ಚಿನ ಅನುಕೂಲವಾಗಲಿದೆ ಈ ನಿಟ್ಟಿನಲ್ಲಿ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡಿದರು.

ಕಳೆದ ತಿಂಗಳು ಹನೂರು ಪಟ್ಟಣದ ಗೌರಿಶಂಕರ ಕಲ್ಯಾಣ ಮಂಟಪದಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ ವೇಳೆ ಸಂಸದರು ಲೋಕಸಭಾ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಹಿನ್ನೆಲೆ ಗೈರು ಹಾಜರಾಗಿದ್ದರು. ಕಾರ್ಯಕ್ರಮ ನಿಮಿತ್ತ ಹನೂರು ಪಟ್ಟಣಕ್ಕೆ ಆಗಮಿಸಿದ ಸಂಸದರನ್ನು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮಹಾದೇಶ್ ,ಪದಾಧಿಕಾರಿಗಳು ಹಾಗೂ ಸದಸ್ಯರು ಸನ್ಮಾನಿಸಿ ಗೌರವಿಸಿದರು.

ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹ ಕಾರ್ಯದರ್ಶಿ ಗೋವಿಂದ್ .ಕೆ ಖಜಾಂಚಿ ಮಹದೇವಸ್ವಾಮಿ, ನಿರ್ದೇಶಕರಾದ ಲಿಂಗರಾಜು ಮಧು, ರಮೇಶ್, ಸದಸ್ಯರುಗಳಾದ ರಾಜೇಶ್, ಲಿಂಗರಾಜು, ನಿರಂಜನ್, ರವಿ, ವಿಜಯ್, ಮಹಾದೇವ, ನಾಗೇಂದ್ರ ಜಿಲ್ಲಾ ನಿರ್ದೇಶಕರಾದ ಸುರೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.

PREV

Recommended Stories

ಸ್ವಸ್ಥ ಶರದ್ ಋತು ಪ್ರಕೃತಿಯ ಲಯದಲ್ಲಿ ಸ್ವಸ್ಥತೆ ! ಶರದ್ ಋತುವಿನ ಆಹಾರ ಮತ್ತು ದಿನಚರ್ಯೆ
ನಟ ದರ್ಶನ್‌ಗೆ ಜೈಲಿನಲ್ಲಿ ಹರಿದ ಚಾದರ : ವಕೀಲರ ವಾದ