ಎನ್‌ ಆರ್‌ಬಿಸಿ 5ಎ ಯೋಜನೆಗೆ ಶೀಘ್ರದಲ್ಲಿ ಟೆಂಡರ್: ಶಾಸಕ

KannadaprabhaNewsNetwork |  
Published : Dec 20, 2025, 01:15 AM IST
19ಕೆಪಿಎಂಎಸ್ಕೆ01:  | Kannada Prabha

ಸಾರಾಂಶ

ರೈತರ ಬಹು ದಿನಗಳ ಬೇಡಿಕೆಯಾಗಿರುವ ಎನ್‌ಆರ್‌ಬಿಸಿ 5ಎ ಪಾಮನಕೆಲ್ಲೂರು ಶಾಖ ಕಾಲುವೆ ಯೋಜನೆ ಅನುಷ್ಠಾನಕ್ಕೆ ಸಚಿವ ಸಂಪುಟದಲ್ಲಿ 990 ಕೋಟಿಗೆ ಅನುಮೋದನೆ ದೊರೆತಿದ್ದು, ಟೆಂಡರ್ ಕರೆಯುವ ಹಂತದಲ್ಲಿದೆ ಎಂದು ಖಾದಿ ಮತ್ತು ಗ್ರಾಮದ್ಯೋಗ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು.

ಮಸ್ಕಿ: ರೈತರ ಬಹು ದಿನಗಳ ಬೇಡಿಕೆಯಾಗಿರುವ ಎನ್‌ಆರ್‌ಬಿಸಿ 5ಎ ಪಾಮನಕೆಲ್ಲೂರು ಶಾಖ ಕಾಲುವೆ ಯೋಜನೆ ಅನುಷ್ಠಾನಕ್ಕೆ ಸಚಿವ ಸಂಪುಟದಲ್ಲಿ 990 ಕೋಟಿಗೆ ಅನುಮೋದನೆ ದೊರೆತಿದ್ದು, ಟೆಂಡರ್ ಕರೆಯುವ ಹಂತದಲ್ಲಿದೆ ಎಂದು ಖಾದಿ ಮತ್ತು ಗ್ರಾಮದ್ಯೋಗ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು.

ಪಟ್ಟಣದ ಬಸವೇಶ್ವರ ನಗರದಲ್ಲಿರುವ ಶಾಸಕರ ಕಾರ್ಯಾಲದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮಸ್ಕಿ ಕ್ಷೇತ್ರದಲ್ಲಿ ಈ ಹಿಂದೆ ಅಧಿಕಾರ ನಡೆಸಿದವರು ರೈತರ ಪರ ಕಾಳಜಿ ವಹಿಸದೆ ನಿರ್ಲಕ್ಷ್ಯ ಮಾಡಿದ್ದರಿಂದ ನಿಮ್ಮನ್ನು ಕ್ಷೆತ್ರದ ಜನರು ವಿರೋಧ ಪಕ್ಷದಲ್ಲಿ ಕೂಡಿಸಿದ್ದಾರೆ. ಜನರಿಗೆ ದಾರಿ ತಪ್ಪಿಸುವ ಕೆಲಸ ಬಿಡಬೇಕು ನಾವು ಕ್ಷೆತ್ರದ ಜನತೆಗೆ ಕೊಟ್ಟ ಮಾತಿನಂತೆ ಯೋಜನೆ ಜಾರಿ ಮಾಡಿದ್ದೇವೆ. ಕೆಲ ತಾಂತ್ರಿಕ ಸಮಸ್ಯೆಯಿಂದ ನಾಲ್ಕೇದು ತಿಂಗಳು ವಿಳಂಬ ವಾಗಿತ್ತು ಇದೀಗ ಎಲ್ಲ ಸಮಸ್ಯೆಗಳು ಸರಿಯಾಗಿದೆ ಆದ್ದರಿಂದ ಬೇಗ ಟೆಂಡರ್ ಪ್ರಕ್ರಿಯೆ ಮುಗಿಯಲಿದೆ ಎಂದರು.

ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶದಲ್ಲಿ ಉತ್ತರ ಕರ್ನಾಟಕದ ಹಲವಾರು ಸಮಸ್ಯೆಗಳಿಗೆ ಸ್ಪಂಧಿಸಿರುವ ಮುಖ್ಯಮಂತ್ರಿಗಳು ಈ ಭಾಗದ ಬಹುದಿನ ದ ರೈತರ ಬೇಡಿಕೆಯಾದ ಎನ್‌ಆರ್‌ಬಿಸಿ 5ಎ ಕಾಲುವೆ ಯೋಜನೆ ಚಾಲನೆಗೆ ಅನುಮೋದನೆ ನೀಡಿದ್ದಾರೆ. ಒಂದು ತಿಂಗಳೊಳಗೆ ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿ ಆರಂಭವಾಗಲಿದೆ ಎಂದರು.

ಉಪ ಚುನಾವಣೆ ಮತ್ತು 2023 ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ 5ಎ ಕಾಲುವೆ ಯೋಜನೆಯನ್ನು ಜಾರಿಗೊಳಿಸುತ್ತೇ ವೆಂದು ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಕ್ಷೇತ್ರದ ಜನಕ್ಕೆ ಮಾತು ಕೊಟ್ಟಿದ್ದರು. ಕೊಟ್ಟ ಮಾತಿನಂತೆ ಇಂದು ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿನಡೆದುಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದೆ ಎಂದು ಹೇಳಿದರು.

ಸಮುದಾಯ ಆರೋಗ್ಯ ಕೇಂದ್ರದ ಜಾಗದ ಸಮಸ್ಯೆ ಇತ್ತು ಇದೀಗ ಅದು ಬಗೆಹರಿಯುವ ಅಂತಕ್ಕೆ ಬಂದಿದೆ. ಆರೋಗ್ಯ ಮಂತ್ರಿಗಳ ಜತೆ ಚರ್ಚಿಸಲಾಗಿದ್ದು, ಮುಂದಿನ ದಿನಗಳಲ್ಲಿ ಸರ್ಕಾರ ಜಾಗ ವಶಕ್ಕೆ ಪಡೆಯಲಿದೆ. ನಂತರ ಆಸ್ಪತ್ರೆಗೆ ಬೇಕಾದ ಸಕಲ ಸೌಲಭ್ಯಗಳು ಕಲ್ಪಿಸಲಾಗುವುದು ಎಂದು ಆರೋಗ್ಯ ಸಚಿವರು ಭರವಸೆ ನೀಡಿದ್ದಾರೆ.

ಮಸ್ಕಿ ತಾಲೂಕಿಗೆ ಪೂರ್ಣ ಪ್ರಮಾಣದಲ್ಲಿ ಕೋರ್ಟ್ ಕಲಾಪ ನಡೆಸಲು ಒತ್ತಾಯಿಸಲಾಗಿದ್ದು, ಆರ್ಥಿಕ ಇಲಾಖೆಯಲ್ಲಿ ಪೈನಲ್ ಹಂತಕ್ಕೆ ಇದೆ. ಹೊಸ ಕೋರ್ಟ್ ಕಟ್ಟಡಕ್ಕೆ ಸ್ಥಳ ಗುರುತಿಸಲಾಗಿದೆ ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ ಮಾತನಾಡಿ, ಉಪ ಚುನಾವಣೆ ವೇಳೆ ರೈತರಿಗೆ ಕೊಟ್ಟ ಭರವಸೆಯನ್ನು ಶಾಸಕರು, ಸರ್ಕಾರ ಈಡೇರಿಸಿದೆ ಎಂದರು.

ಈ ಸಂದರ್ಭದಲ್ಲಿ ಗ್ರಾಮಿಣ ಘಟಕದ ಅಧ್ಯಕ್ಷ ಹನುಮಂತಪ್ಪ ಮುದ್ದಾಪೂರು, ನಿರುಪಾದೆಪ್ಪ ವಕೀಲರು ಗುಡಿಹಾಳ, ಅಂದಾನಪ್ಪ ಗುಂಡಳ್ಳಿ, ಮೈಬುಸಾಬ ಮುದ್ದಾಪೂರ, ಪಂಪಾಪತಿ ಗುಡದೂರು, ಬಸನಗೌಡ ಪೊಲೀಸ್ ಪಾಟೀಲ್, ಎಂ. ಅಮರೇಶ ಮಸ್ಕಿ, ನಾಗಭೂಷಣ್, ಮಲ್ಲಯ್ಯ ಮುರಾರಿ, ಕೃಷ್ಣ ಚಿಗರಿ, ಆನಂದ, ನಾಗರಾಜ ಗುಡಿಸಲಿ ಸೇರಿದಂತೆ ಇನ್ನಿತರರಿದ್ದರು.

ಸಿಹಿ ತಿನ್ನಿಸಿ ಸಂಭ್ರಮ

ಮಸ್ಕಿ ವಿಧಾನ ಸಭಾ ಕ್ಷೆತ್ರಕ್ಕೆ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಂಡು 5ಎ ನಾಲೆ ಯೋಜನೆ ಅನುಮೋದನೆ ನೀಡಿದ್ದರಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಹಾಗೂ ಇನ್ನಿತರ ಕಾಂಗ್ರೆಸ್ ಮುಖಂಡರು ಶಾಸಕ ಆರ್. ಬಸನಗೌಡ ಅವರಿಗೆ ಸಿಹಿ ತಿನ್ನಿಸಿ ಸಂಭ್ರಮಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಣಸೆ, ಹಲಸು, ನೇರಳೆಗೆ ಮಂಡಳಿ ರಚಿಸಿ: ದೇವೇಗೌಡ
ಗುಮ್ಮ ಬಂದ ಗುಮ್ಮ, ಮಕ್ಕಳಿಗೆ ಹೊಡೆಯೋ ಗುಮ್ಮ!