ವಿಶೇಷ ಚೇತನ ವಿದ್ಯಾರ್ಥಿಗಳ ಕ್ರೀಡಾಕೂಟ ಸಂಪನ್ನ

KannadaprabhaNewsNetwork |  
Published : Nov 13, 2026, 02:45 AM IST
ವಿಶೇಷ ಕ್ರೀಡಾಕೂಟವನ್ನು ಹರಿಪ್ರಸಾದ್ ರೈ ಉದ್ಘಾಟಿಸಿದರು | Kannada Prabha

ಸಾರಾಂಶ

ಉಡುಪಿ ಜಿಪಂ, ಮಂಗಳೂರು ವಿವಿ ಹಾಗೂ ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರಗಳ ಸಹಯೋಗಕದಲ್ಲಿ ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟವು 11ರಂದು ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆಯಿತು.

ಉಡುಪಿ: ಉಡುಪಿ ಜಿಪಂ, ಮಂಗಳೂರು ವಿವಿ ಹಾಗೂ ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರಗಳ ಸಹಯೋಗಕದಲ್ಲಿ ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟವು 11ರಂದು ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆಯಿತು.

ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಹರಿಪ್ರಸಾದ್ ರೈ ಕ್ರೀಡಾಕೂಟ ಉದ್ಘಾಟಿಸಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ನಿತ್ಯಾನಂದ ವಿ ಗಾಂವ್ಕರ್, ವಿಶೇಷ ಚೇತನ ಮಕ್ಕಳನ್ನು ಸ್ವಂತ ಮಕ್ಕಳಂತೆ ನೋಡಿಕೊಳ್ಳುವ ವಿಶೇಷ ಶಿಕ್ಷಕರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿದರು.

ಲಯನ್ಸ್ ಕ್ಲಬ್ ಉಡುಪಿ ಅಮೃತ್ ಅಧ್ಯಕ್ಷೆ ಚಂದ್ರಿಕಾ ಜೆ.ಪಿ., ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರ ಸಂಘದ ಕಾರ್ಯಾಧ್ಯಕ್ಷೆ ಡಾ. ಕಾಂತಿ ಹರೀಶ್, ಗೌರವಾಧ್ಯಕ್ಷೆ ಆಗ್ನೇಸ್ ಕುಂದರ್, ಜಿಲ್ಲಾ ಪಾಲಕರ ಸಂಘದ ಅಧ್ಯಕ್ಷ ಜೈವಿಠ್ಠಲ್, ಕಾರ್ಯದರ್ಶಿ ಶಶಿಕಲಾ ಕೋಟ್ಯಾನ್ ಇದ್ದರು.

ದೈಹಿಕ ಶಿಕ್ಷಣ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ರವೀಂದ್ರ ಎಚ್. ನಿರೂಪಿಸಿ ವಂದಿಸಿದರು.

ಪಥಸಂಚಲನ ಫಲಿತಾಂಶ: ಕಾರ್ಕಳ ವಿಜೇತ ಶಾಲೆ ಪ್ರಥಮ, ಉಡುಪಿ ಮಾನಸಾ ವಿಶೇಷ ಶಾಲೆ ದ್ವಿತೀಯ ಹಾಗೂ ಕಾರುಣ್ಯ ವಿಶೇಷ ಶಾಲೆ ತೃತೀಯ ಬಹುಮಾನಗಳನ್ನು ಗೆದ್ದುಕೊಂಡವು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು ಗುಲಾಬಿ ಮೆಟ್ರೋ ಮಾರ್ಗ ಉದ್ಘಾಟನೆ- ಮಾರ್ಗದಲ್ಲಿರುವ 6 ನಿಲ್ದಾಣಗಳು
ಚಲ್ಲಘಟ್ಟ ಮೆಟ್ರೋ ಡಿಪೋ ಬಳಿ ಅಂಡರ್‌ಪಾಸ್‌