ಕನ್ನಡಪ್ರಭ ವಾರ್ತೆ ಉಡುಪಿ
ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ ವಿ. ಗಾಂವ್ಕರ, ವಿದ್ಯಾರ್ಥಿಗಳಿಗೆ ಪಠ್ಯ, ಸಹಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಿಗೆ ವಿಶೇಷ ಅವಕಾಶ ಕಲ್ಪಿಸಿ ಕೊಡುವ ಮೂಲಕ ಕಡಿಮೆ ವೆಚ್ಚದ ಶಿಕ್ಷಣದೊಂದಿಗೆ ವೃತ್ತಿಪರ ಹಾಗೂ ವಿದ್ಯಾರ್ಥಿಗಳ ಕೌಶಲ್ಯ ಅಭಿವೃದ್ಧಿ ಹೆಚ್ಚಿನ ಆದ್ಯತೆಯನ್ನು ಸಂಸ್ಥೆಯಲ್ಲಿ ನೀಡಲಾಗುತ್ತದೆ. ಪ್ರಸ್ತುತ ಸ್ಪರ್ಧಾತ್ಮಕ ಜಗತ್ತಿನ ಅವಶ್ಯಕತೆಗಳಿಗೆ ಅನುಗುಣವಾಗಿ ಪ್ಲೇಸ್ಮೆಂಟ್ ಸೆಲ್ ನಿರಂತರವಾಗಿ ವೃತ್ತಿ ಮಾರ್ಗದರ್ಶನ ಮತ್ತು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ತರಬೇತಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸುತ್ತಿದೆ. ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದರು.
ಮಂಗಳೂರಿನ ಟೈಮ್ ಕೋಚಿಂಗ್ ಸೆಂಟರ್‌ನ ಮಾರ್ಕೆಟಿಂಗ್ ಮ್ಯಾನೇಜರ್ ಆಶಿತ್ ಪೂಜಾರಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು. ಪದವಿ ನಂತರ ಮುಂದೇನು ಮತ್ತು ಸರಕಾರಿ ಮತ್ತು ಖಾಸಗಿ ವಲಯದ ಉದ್ಯೋಗಾವಕಾಶಗಳ ಸಮಗ್ರ ಮಾಹಿತಿ ನೀಡಿದರು.ಅಂತಿಮ ಪದವಿ ವಿಭಾಗದ ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎ., ಬಿ.ಎಸ್.ಡಬ್ಲ್ಯೂ ಹಾಗೂ ಬಿ.ಎಸ್ಸಿ. ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ಪದವಿ ವಿಭಾಗದ ಪ್ಲೇಸ್ಮೆಂಟ್ ಆಫೀಸರ್ ದಿನೇಶ್ ಎಂ. ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಸಂಘಟಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.