ತೆಂಕನಿಡಿಯೂರು: ಅಂತರ್‌ ಕಾಲೇಜು ಮಟ್ಟದ ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟನೆ

KannadaprabhaNewsNetwork |  
Published : May 23, 2025, 12:36 AM IST
22ತೆಂಕ | Kannada Prabha

ಸಾರಾಂಶ

ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ವತಿಯಿಂದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್‌ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ಐಸಿರಿ - ೨೦೨೫ ಇತ್ತೀಚೆಗೆ ಸಂಪನ್ನಗೊಂಡಿತು.

ಕನ್ನಡಪ್ರಭ ವಾರ್ತೆ ಉಡುಪಿ

ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳ ಮೂಲಕ ಸದೃಢ ವ್ಯಕ್ತಿತ್ವ, ಸಮಾಜ ಮತ್ತು ರಾಷ್ಟ್ರ ನಿರ್ಮಾಣ ಸಾಧ್ಯ. ಜಿಲ್ಲೆಯ ಶಿಕ್ಷಣ ಸಂಸ್ಥೆಗಳ ಪ್ರಗತಿಗೆ ಮತ್ತು ದೇಶದ ರಕ್ಷಣೆಗೆ ದುಡಿಯುವ ಕೈಗಳು ಇನ್ನಷ್ಟು ಬಲಗೊಳ್ಳಲಿ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಹೇಳಿದ್ದಾರೆ. ಇಲ್ಲಿನ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಆಯೋಜಿಸಿದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್‌ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ಐಸಿರಿ - ೨೦೨೫ನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಂತರ ಕಾರ್ಯಕ್ರಮದ ಸಂಚಾಲಕ. ಕಾಲೇಜಿನ ಗ್ರಂಥಪಾಲಕ ಕೃಷ್ಣ ಸಾಸ್ತಾನ ಸಂಪಾದಿಸಿದ ಕಾಲೇಜು ವಾರ್ಷಿಕಾಂಕ ಸುದರ್ಶನವನ್ನು ಬಿಡುಗಡೆಗೊಳಿಸಿದರು.

ಸಭಾ ಕಾರ್ಯಕ್ರಮದಲ್ಲಿ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ ಗಣೇಶ್ ಪ್ರಸಾದ್ ಅವರನ್ನು ಸನ್ಮಾನಿಸಲಾಯಿತು. ಉಡುಪಿ ಮತ್ತು ದಕ್ಷಿಣಕನ್ನಡ ಜಿಲ್ಲೆಯ 10ಕ್ಕೂ ಅಧಿಕ ಕಾಲೇಜುಗಳು ಐಸಿರಿ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಐಸಿರಿ ಪ್ರಥಮ ಸ್ಥಾನವನ್ನು ಕುಂದಾಪುರದ ಭಂಡಾರ್‌ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು, ದ್ವಿತೀಯ ಸ್ಥಾನವನ್ನು ಕಾರ್ಕಳದ ಮಂಜುನಾಥ ಪೈ ಸ್ಮಾರಕ ಸಪ್ರದ ಕಾಲೇಜು ಹಾಗೂ ತೃತೀಯ ಸ್ಥಾನವನ್ನು ಉಡುಪಿಯ ಎಂಜಿಎಂ ಕಾಲೇಜು ಗೆದ್ದುಕೊಂಡವು

ವಿಶ್ರಾಂತ ಪ್ರಾಂಶುಪಾಲ ಎಂ ಎಲ್ ಸಾಮಗ, ಉದ್ಯಮಿಗಳಾದ ಅಜಯ್ ಪಿ ಶೆಟ್ಟಿ, ಮುನಿಯಾಲು ಉದಯ್‌ಕುಮಾರ್ ಶೆಟ್ಟಿ, ದಿನೇಶ್ ಹೆಗಡೆ ಮೊಳಹಳ್ಳಿ, ಪ್ರಖ್ಯಾತ್ ಶೆಟ್ಟಿ, ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಹರಿಯಪ್ಪ ಕೋಟ್ಯಾನ್, ಸುಹಾಸ್ ಹೆಗ್ಡೆ, ಲಯನ್ಸ್‌ಕ್ಲಬ್ ಅಮೃತ್‌ನ ಅಧ್ಯಕ್ಷ ಭಾರತಿ ಹೆಚ್. ಎಸ್, ಕಾಪು ಶಾಸಕ ಸುರೇಶ್ ಶೆಟ್ಟಿ, ಮಾಜಿ ಲಯನ್ ಗವರ್ನರ್ ವಿಜಿ ಶೆಟ್ಟಿ, ನಗರಸಭಾ ಸದಸ್ಯ ವಿಜಯ್ ಕೊಡವೂರು, ಉಡುಪಿ ತುಳು ಕೂಟದ ಸಂಘಟನಾ ಕಾರ್ಯದರ್ಶಿ ವಿದ್ಯಾ ಸರಸ್ವತಿ, ಕಾಲೇಜಿನ ಐ.ಕ್ಯೂ.ಎ.ಸಿ. ಸಂಚಾಲಕ ಡಾ. ಮೇವಿ ಮಿರಾಂದ, ಶೈಕ್ಷಣಿಕ ಸಲಹೆಗಾರಾÉಶ ಶ್ರೀಧರ್ ಭಟ್, ಡಾ. ಉದಯಶೆಟ್ಟಿ ಕೆ., ಸುಷ್ಮಾ ಟಿ., ವಿದ್ಯಾರ್ಥಿ ಸಂಘದ ನಾಯಕರಾದ ರಿಶಿತ್ ಸಾಲಿಯಾನ್ ಮತ್ತು ನೈನಾ ಶೆಟ್ಟಿ ಉಪಸ್ಥಿತರಿದ್ದರು.ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ ವಿ ಗಾಂವಕರ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ರಘು ನಾಯ್ಕ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರಶಾಂತ್ ನೀಲಾವರ ವಂದಿಸಿದರು. ಡಾ. ರೋಶನ್‌ಕುಮಾರ್ ಶೆಟ್ಟಿ ನಿರೂಪಿಸಿದರು.

PREV

Recommended Stories

‘ಫಾರಿನ್‌ ಅನ್ನಭಾಗ್ಯ’ ಕೊಟ್ಟವರಿಗೆ ಹವಾಲಾ ಮೂಲಕ ಹಣ ಪಾವತಿ?
ಬಸವಣ್ಣ ಅಧ್ಯಯನ ಪೀಠ ಸ್ಥಾಪನೆ ಮಾಡಿ : ಮೊಯ್ಲಿ