ಟಿಟಿ ವಾಹನ, ಕಾರಿನ ಮಧ್ಯ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ಸಾವು

KannadaprabhaNewsNetwork |  
Published : Aug 30, 2024, 01:02 AM IST
ಅ | Kannada Prabha

ಸಾರಾಂಶ

ಟಿಟಿ ವಾಹನ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಟಿಟಿ ವಾಹನವು ನೆರೆಯ ಆಂಧ್ರಪ್ರದೇಶ ಬಾಯಿಕೊಂಡದಿಂದ ಚಿಂತಾಮಣಿ ಕಡೆಗೆ ಬರುತ್ತಿದ್ದು, ಬೆಂಗಳೂರಿನಿಂದ ಕಡಪ ಹೆದ್ದಾರಿಯ ರಸ್ತೆಯ ಮುಖಾಂತರ ಆಂಧ್ರಪ್ರದೇಶದ ಕಡೆಗೆ ಹೋಗುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ.

ಚಿಂತಾಮಣಿ: ತಾಲೂಕಿನ ದಂಡುಪಾಳ್ಯ ಗೇಟ್ ಸಮೀಪ ಟಿಟಿ ವಾಹನ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ೧೨ ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಟಿಟಿ ವಾಹನ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಟಿಟಿ ವಾಹನವು ನೆರೆಯ ಆಂಧ್ರಪ್ರದೇಶ ಬಾಯಿಕೊಂಡದಿಂದ ಚಿಂತಾಮಣಿ ಕಡೆಗೆ ಬರುತ್ತಿದ್ದು, ಬೆಂಗಳೂರಿನಿಂದ ಕಡಪ ಹೆದ್ದಾರಿಯ ರಸ್ತೆಯ ಮುಖಾಂತರ ಆಂಧ್ರಪ್ರದೇಶದ ಕಡೆಗೆ ಹೋಗುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಕಾರಿನಲ್ಲಿನ ನೆಲ್ಲೂರು ಜಿಲ್ಲೆಯ ಶ್ರೀಕಾಂತ, ಶ್ರೀನಿವಾಸಲು ಹಾಗೂ ಪುಷ್ಪ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದು,ಗಾಯಗೊಂಡ ನಾಗೇಂದ್ರ, ಕಿಶೋರ್ ಕುಮಾರ್, ಗುರುಸ್ವಾಮಿ, ಬಿಂದು, ಆದ್ಯ, ಮನು, ತೇಜಸ್, ಹಿಮಶ್ರೀ, ಲವಕುಶ, ವಿ ವಿಹಾನ್, ರಮ್ಯಾ, ಜಗದೀಶ್ವರಿ, ಸೋಮೇಶ್ವರರಾವ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಜಿಲ್ಲಾ ಎಸ್‌ಪಿ ಕುಶಾಲ್ ಚೌಕ್ಷಿ, ಎಎಸ್‌ಪಿ ಖಾಸೀಂ ರಾಜ್ ಇಮಾಮ್, ಡಿವೈಎಸ್ಪಿ ಮುರಳೀಧರ್, ಸರ್ಕಲ್ ಇನ್ಸ್ಪೆಕ್ಟರ್ ಶಿವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಾರ್ಥಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಲು ಇಷ್ಟವಿಲ್ಲ: ಡಿಸಿಎಂ
ಒಪಿಎಸ್‌ ಜಾರಿಗೆ ಸರ್ಕಾರಕ್ಕೆ ಒತ್ತಾಯಿಸುವೆ-ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಒತ್ತಾಯ