ಕನ್ನಡಪ್ರಭ ವಾರ್ತೆ ಅಥಣಿ
ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಶಿರೋಳ ತಾಲೂಕಿನ ಗಣೇಶವಾಡಿ ಗ್ರಾಮದ ಮಹೇಶ ಸುಭಾಷ ಗಾತಾಡೆ (30), ಶಿರೋಳ ತಾಲೂಕಿನ ಪುಡವಾಡ ಗ್ರಾಮದ ಶಿವಂ ಯುವರಾಜ್ ಚವ್ಹಾಣ (24) ಹಾಗೂ ಮಹಾರಾಷ್ಟ್ರ ಸಾಂಗ್ಲಿ ಜಿಲ್ಲೆಯ ಮಿರಜ್ ತಾಲೂಕಿನ ಕವಲಾಪುರ ಗ್ರಾಮದ ಸಚಿನ್ ವಿಲಾಸ್ ಮಾಳಿ (42) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅಥಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಅಥಣಿ ಠಾಣೆ ಪೊಲೀಸರು, ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ರಕ್ಷಿಸಲು ಹೋಗಿ ಹೆಣವಾದ:
ಕಾಗವಾಡ ಕಡೆಯಿಂದ ಅಥಣಿ ಕಡೆಗೆ ಕೆಂಪು ರತ್ನಗಿರಿ ಇಟ್ಟಿಗೆ ತುಂಬಿಕೊಂಡು ಬರುತ್ತಿದ್ದ ಲಾರಿ ಹಾಗೂ ಅಥಣಿಯಿಂದ ಕಾಗವಾಡಕ್ಕೆ ತೆರಳುತ್ತಿದ್ದ ಪಿಕಪ್ ವಾಹನದ ಮಧ್ಯೆ ಅಪಘಾತವಾಗಿದೆ. ಗಾಯಗೊಂಡ ಪಿಕಪ್ ವಾಹನ ಚಾಲಕ ಮತ್ತು ಕ್ಲೀನರ್ ಸಹಾಯಕ್ಕಾಗಿ ಅಂಗಲಾಚುತ್ತಿದ್ದರು. ಇದನ್ನು ಗಮನಿಸಿದ ಸ್ಕಾರ್ಪಿಯೋ ಚಾಲಕ ತನ್ನ ವಾಹನ ಸೈಡಿಗೆ ಹಾಕಿ, ರಕ್ಷಣೆಗೆ ಮುಂದಾಗಿದ್ದಾರೆ. ಈ ವೇಳೆ ಅಥಣಿ ಕಡೆಯಿಂದ ಬಂದ ಇನ್ನೋವಾ ಕಾರು ಸ್ಕಾರ್ಪಿಯೋ ಚಾಲಕನಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಸ್ಕಾರ್ಪಿಯೋ ಹಾಗೂ ಇನ್ನೋವಾ ವಾಹನಗಳ ಇಬ್ಬರೂ ಚಾಲಕರು ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೊದಲು ಅಪಘಾತವಾಗಿದ್ದ ಲಾರಿ ಹಾಗೂ ಪಿಕಪ್ ವಾಹನದ ಚಾಲಕ, ಕ್ಲೀನರ್ಗಳು ಗಾಯಗೊಂಡಿದ್ದು, ಪಿಕಪ್ ವಾಹನದಲ್ಲಿ ಕಬ್ಬು ಬೆಳೆಯ ಸಸಿಗಳು ಮತ್ತು ಅದರ ಟ್ರೇ ಬಾಕ್ಸಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಅಪಘಾತದಲ್ಲಿ ಒಟ್ಟು ನಾಲ್ಕು ವಾಹನಗಳು ಜಕಂಗೊಂಡಿದ್ದು, ಗಾಯಗೊಂಡವರಿಗೆ ಅಥಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.