ನಮೋ ಪ್ರಧಾನಿಯಾದರೆ ಭಯೋತ್ಪಾದನೆ ಮುಕ್ತ ಭಾರತ

KannadaprabhaNewsNetwork |  
Published : May 03, 2024, 01:02 AM IST
(ಪೋಟೊ2 ಬಿಕೆಟಿ 4, ನಗರದಲ್ಲಿ  ಪಾದಯಾತ್ರೆ ) | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಸರ್ಜಿಕಲ್ ಸ್ಟ್ರೈಕ್, ಏರ್ ಸ್ಟ್ರೈಕ್ ಮೂಲಕ ಪಾಕಿಸ್ತಾನದಿಂದ ನುಸುಳಿ ಬರುತ್ತಿದ್ದ ಭಯೋತ್ಪಾದಕರಿಗೆ ಪ್ರಧಾನಿ ಮೋದಿ ತಕ್ಕ ಶಾಸ್ತಿ ಮಾಡಿದ್ದಾರೆ. ಮೋದಿ ಪ್ರಧಾನಿಯಾದರೆ ಭಯೋತ್ಪಾದನೆ ಮುಕ್ತ ಭಾರತ ನಿರ್ಮಾಣಗೊಳ್ಳುತ್ತದೆ. ದೇಶ ವಿಶ್ವದ 3ನೇ ಆರ್ಥಿಕ ಶಕ್ತಿಯಾಗಲಿದೆ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಭರವಸೆ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಸರ್ಜಿಕಲ್ ಸ್ಟ್ರೈಕ್, ಏರ್ ಸ್ಟ್ರೈಕ್ ಮೂಲಕ ಪಾಕಿಸ್ತಾನದಿಂದ ನುಸುಳಿ ಬರುತ್ತಿದ್ದ ಭಯೋತ್ಪಾದಕರಿಗೆ ಪ್ರಧಾನಿ ಮೋದಿ ತಕ್ಕ ಶಾಸ್ತಿ ಮಾಡಿದ್ದಾರೆ. ಮೋದಿ ಪ್ರಧಾನಿಯಾದರೆ ಭಯೋತ್ಪಾದನೆ ಮುಕ್ತ ಭಾರತ ನಿರ್ಮಾಣಗೊಳ್ಳುತ್ತದೆ. ದೇಶ ವಿಶ್ವದ 3ನೇ ಆರ್ಥಿಕ ಶಕ್ತಿಯಾಗಲಿದೆ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಭರವಸೆ ವ್ಯಕ್ತಪಡಿಸಿದರು.

ನಗರದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಚುನಾವಣಾ ಪಾದಯಾತ್ರೆಯಲ್ಲಿ ಮನೆ ಮನೆ ತೆರಳಿ ಮತಯಾಚನೆ ಮಾಡುವ ವೇಳೆ ಮಾತನಾಡಿದ ಅವರು, 70 ವರ್ಷಗಳಿಂದ ಓಟ್‌ ಬ್ಯಾಂಕ್‌ಗಾಗಿ ಒಂದು ಕೋಮಿನ ಜನರನ್ನು ಓಲೈಕೆ ಮಾಡುತ್ತಾ ಬಂದಿರುವ ಕಾಂಗ್ರೆಸ್ ರಾಜಕಾರಣವನ್ನು ನರೇಂದ್ರ ಮೋದಿ ಪ್ರಧಾನಿಯಾದ ನಂತರ ಸಮಾಪ್ತಿಗೊಳಿಸಿದ್ದಾರೆ ಎಂದು ಟೀಕಿಸಿದರು.

ಪ್ರಧಾನಿ ಮೋದಿ ಅವರಿಂದ ಶಂಕುಸ್ಥಾಪನೆ ಮಾಡಿ ಶ್ರೀರಾಮನ ಮೂರ್ತಿ ಪ್ರಾಣಪ್ರತಿಷ್ಟಾಪನೆಯನ್ನೂ ಮಾಡಲಾಯಿತು, ಕಾಶ್ಮೀರ ಮತ್ತು ಸಕ್ಸಲ್ವಾ ಪ್ರದೇಶಗಳಲ್ಲಿ ಶಾಂತಿ ಸ್ಥಾಪನೆಯಾಗುತ್ತಿದೆ, ಚಂದ್ರಯಾನ, ಮಂಗಳಯಾನ, ಆದಿತ್ಯಯಾನಗಳನ್ನು ನಮ್ಮ ವಿಜ್ಞಾನಿಗಳು ಯಶಸ್ವಿಯಾಗಿ ನಡೆಸಿದರು. ಮೋದಿಯಿಂದಾಗಿ ಭಾರವನ್ನು ಜಗತ್ತೆ ತಿರುಗಿ ನೋಡುತ್ತಿದೆ, ವಿಶ್ವದಲ್ಲಿ ಭಾರತದ ವರ್ಚಸ್ಸು ಇಮ್ಮಡಿಗೊಂಡಿದೆ, ಭಾರತದ ಸರ್ವಾಂಗೀಣ ಅಭಿವೃದ್ಧಿಗೆ ಮೋದಿ ಅವಶ್ಯವಾಗಿದ್ದು, ಎಲ್ಲರೂ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರಗೆ ಮತ ನೀಡುವ ಮೂಲಕ ಮೋದಿಯವರ ಕೈ ಬಲಪಡಿಸೋಣ ಎಂದರು.

ನಗರದ ಹಳೆ ಪ್ರವಾಸಿ ಮಂದಿಂದ ಪ್ರಾರಂಭವಾದ ನಗರ ಪಾದಯಾತ್ರೆಯಲ್ಲಿ ಲಕ್ಷ್ಮೀ ನಾರಾಯಣ ಕಾಸಟ, ಸಿ.ವ್ಹಿ.ಕೋಟಿ, ಕೇಶವ ಭಜಂತ್ರಿ, ಕುಮಾರ ಯಳ್ಳಿಗುತ್ತಿ, ನಗರಸಭೆ ಸದಸ್ಯ ಶ್ರೀಹರಿ ಟಿಕಾರಿ,ಮುತ್ತಣ್ಣ ಬೆಣ್ಣೂರ, ಶಿವಾನಂದ ಟವಳಿ, ಸಲಿಂ ಮೋಮಿನ್, ವಿರೇಶ ಮಾಯಾಚಾರಿ, ರಾಜು ಗಾಣಗೇರ, ಬಸವರಾಜ ಹುನಗುಂದ, ಉಮೇಶ ಹಂಚಿನಾಳ ಸೇರಿದಂತೆ ಕಾರ್ಯಕರ್ತರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ