ಸಚಿವ ಜಮೀರ್ ಕ್ಷೇತ್ರದಲ್ಲಿ ಭಯೋತ್ಪಾದಕ ಚಟುವಟಿಕೆ: ಹರಿಪ್ರಕಾಶ ಕೋಣೆಮನೆ

KannadaprabhaNewsNetwork |  
Published : Jan 14, 2025, 01:01 AM IST
ಪೊಟೋ೧೩ಎಸ್.ಆರ್.ಎಸ್೧ (ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ ಮಾತನಾಡಿದರು.) | Kannada Prabha

ಸಾರಾಂಶ

ಚಾಮರಾಜಪೇಟೆ ಸಾಂಸ್ಕೃತಿಕ ಕಾರಣಕ್ಕಾಗಿ ಪ್ರಸಿದ್ಧಿ ಪಡೆದಿತ್ತು. ಜಮೀರ್ ಖಾನ್ ಆಡಳಿತದಲ್ಲಿ ಭಯೋತ್ಪಾದಕರ ತಾಣವಾಗಿ ಮಾರ್ಪಟ್ಟಿದೆ ಎಂದು ಬಿಜೆಪಿ ವಕ್ತಾರ ಹರಿಪ್ರಕಾಶ ಕೋಣೆಮನೆ ಆರೋಪಿಸಿದರು.

ಶಿರಸಿ: ಬೆಂಗಳೂರಿನ ಹೃದಯ ಭಾಗವಾದ ಚಾಮರಾಜಪೇಟೆಯ ಜಮೀರ್ ಅಹಮ್ಮದ್ ಖಾನ್ ಕ್ಷೇತ್ರದಲ್ಲಿ ಭಯೋತ್ಪಾದಕ ಚಟುವಟಿಕೆ ಮೀತಿ ಮೀರುತ್ತಿದೆ ಎಂದು ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ ಗಂಭೀರ ಆರೋಪ ಮಾಡಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಚಾಮರಾಜಪೇಟೆ ಸಾಂಸ್ಕೃತಿಕ ಕಾರಣಕ್ಕಾಗಿ ಪ್ರಸಿದ್ಧಿ ಪಡೆದಿತ್ತು. ಜಮೀರ್ ಖಾನ್ ಆಡಳಿತದಲ್ಲಿ ಭಯೋತ್ಪಾದಕರ ತಾಣವಾಗಿ ಮಾರ್ಪಟ್ಟಿದೆ ಎಂದರು.

ಚಾಮರಾಜಪೇಟೆಯ ಗೌರಿ ಪಾಳ್ಯವು ಗೋರಿ ಪಾಳ್ಯವಾಗಿ ಬದಲಾಗಿದೆ. ಗೌರಿ ಪಾಳ್ಯದಲ್ಲಿ ಶೇ. ೯೫ರಷ್ಟು ಮುಸ್ಲಿಮರಿದ್ದು, ಪಾದಯರಾಯಪುರದಲ್ಲಿಯೂ ಶೇ. ೯೫ರಷ್ಟು ಮುಸ್ಲಿಂ ಸಾಮ್ರಾಜ್ಯವಾಗಿದ್ದು, ಇರುವ ಹಿಂದೂಗಳು ತಮ್ಮ ಆಸ್ತಿಪಾಸ್ತಿಗಳನ್ನು ಮಾರಾಟ ಮಾಡಬೇಕು ಎಂದು ಹಿಂದೂಗಳ ಭಾವನೆಯನ್ನು ಕೆರಳಿಸಿದ್ದಾರೆ. ಹಸುವಿನ ಕೆಚ್ಚಲು ಕೊಯ್ದ ಪ್ರಕರಣವನ್ನು ಕ್ಷುಲ್ಲಕ ಘಟನೆ ಎಂದು ಪರಿಗಣಿಸಬಾರದು. ಅಲ್ಪಸಂಖ್ಯಾತ ಹಿಂದೂಗಳು ಅಲ್ಲಿಂದ ಪಲಾಯನ ಮಾಡಬೇಕು ಎಂಬ ಬೆದರಿಕೆ ಹಾಕಲು ಈ ಕೃತ್ಯ ಮಾಡಿದ್ದಾರೆ. ಹಿಂದೂಗಳ ಭಾವನೆಯನ್ನು ಘಾಸಿಗೊಳಿಸಬೇಕು. ಆದರೆ ರಾಜ್ಯ ಸರ್ಕಾರ ಕ್ರಮ ತೆಗೆದುಕೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಿರಸಿ ಪ್ರತ್ಯೇಕ ಜಿಲ್ಲೆಯ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಹರಿಪ್ರಕಾಶ, ಉತ್ತರ ಕನ್ನಡ ಅಖಂಡ ಜಿಲ್ಲೆಯ ಅಭಿವೃದ್ಧಿಗೆ ಬಿಜೆಪಿ ಬದ್ಧವಾಗಿದೆ ಮತ್ತು ಆಡಳಿತಾತ್ಮಕ ತೀರ್ಮಾನಕ್ಕೂ ಬಿಜೆಪಿ ಬೆಂಬಲವಿದೆ ಎಂದರು.ಬಿಜೆಪಿ ಜಿಲ್ಲಾ ವಕ್ತಾರ ಸದಾನಂದ ಭಟ್ಟ ಮಾತನಾಡಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ, ಗುರುಪ್ರಸಾದ ಹೆಗಡೆ, ಆನಂದ ಸಾಲೇರ, ಉಷಾ ಹೆಗಡೆ, ಪ್ರಸಾದ ಹೆಗಡೆ, ಮಂಜುನಾಥ ಪಾಟೀಲ, ತಿಮ್ಮಪ್ಪ ಮಡಿವಾಳ, ರವಿ ಶೆಟ್ಟಿ ಮತ್ತಿತರರು ಇದ್ದರು.6ನೇ ತರಗತಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಕಾರವಾರ: ಕುಮಟಾ ತಾಲೂಕಿನ ಗೋಕರ್ಣ ಸಮೀಪದ ಗಂಗೆಕೊಳ್ಳದ ಕಿತ್ತೂರು ರಾಣಿ ಚೆನ್ನಮ್ಮ ವಸತಿ (ಆಂಗ್ಲ ಮಾಧ್ಯಮ) ಶಾಲೆಗೆ 2025-26ನೇ ಸಾಲಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ 6ನೇ ತರಗತಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಫೆ. 15ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರವೇಶಾತಿ ಪರೀಕ್ಷೆ ನಡೆಸಲಿದೆ.ಆಸಕ್ತ ವಿದ್ಯಾರ್ಥಿಗಳು ಆನ್‌ಲೈನ್ ನಲ್ಲಿ ಅರ್ಜಿಯನ್ನು ಭರ್ತಿ ಮಾಡಲು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಗಂಗೆಕೊಳ್ಳ ಮಜರೆ, ಗೋಕರ್ಣ ಹೋಬಳಿ ವಸತಿ ಶಾಲೆಗೆ ಸಂಪರ್ಕಿಸಬಹುದು. ಅರ್ಜಿ ಸಲ್ಲಿಸುವ ವಿಧಾನ, ಹಾಗೂ “ಮಾಹಿತಿ ಪುಸ್ತಕ-2025”ವನ್ನು ಪ್ರಾಧಿಕಾರದ ವೆಬ್ ಸೈಟ್ https://kea.kar.nic.inನಲ್ಲಿ ಮತ್ತು ವಸತಿ ಶಿಕ್ಷಣ ಸಂಸ್ಥೆಗಳ ವೆಬ್‌ಸೈಟ್: https://kreis.kar.nic.inನಲ್ಲಿ ಪ್ರಚುರ ಪಡಿಸಲಾಗಿದೆ. ಪರೀಕ್ಷೆಗೆ ಪ್ರವೇಶ ಪತ್ರಗಳನ್ನು ಫೆ.6 ರಿಂದ ವಸತಿ ಶಾಲೆಗಳಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9480143053 ಸಂಪರ್ಕಿಸುವಂತೆ ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನರೇಗಾ ಮರುಜಾರಿವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ
ಡ್ರಗ್ಸ್‌ ವಿರುದ್ಧ ಸಿಎಂ ತವರಿಂದಲೇ ಹೋರಾಟ : ವಿಜಯೇಂದ್ರ