ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿ ಉಚ್ಚಾಟಿಸಿರುವುದನ್ನು ಖಂಡಿಸಿ ಶುಕ್ರವಾರ ಅಖಿಲ ಭಾರತ ಲಿಂಗಾಯತ ತಾಲೂಕು ಪಂಚಮಸಾಲಿ ಸಮಾಜದ ವತಿಯಿಂದ ಪಟ್ಟಣದ ಕಿತ್ತೂರ ರಾಣಿ ಚೆನ್ನಮ್ಮ ವೃತ್ತದ ಹತ್ತಿರ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಪಂಚಮಸಾಲಿ ಸಮಾಜದ ತಾಲೂಕಾಧ್ಯಕ್ಷ ಕೆ.ಜಿ. ಪಲ್ಲೇದ, ಪಪಂ ಮಾಜಿ ಅಧ್ಯಕ್ಷ ಸುರೇಶಗೌಡ ಶಿವನಗೌಡ್ರ ಹಾಗೂ ದಾನನಗೌಡ ತೊಂಡಿಹಾಳ ಮಾತನಾಡಿ, ಪಕ್ಷಕ್ಕಾಗಿ ಹಗಲಿರುಳು ಶ್ರಮಿಸಿದವರನ್ನು ಏಕಾಏಕಿ ಉಚ್ಚಾಟಿಸಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಖಂಡರಾದ ಶಿವಕುಮಾರ ನಾಗನಗೌಡ್ರ, ಸಿದ್ರಾಮೇಶ ಬೇಲೇರಿ ಹಾಗೂ ಈರಣ್ಣ ಬಳೂಟಗಿ ಮಾತನಾಡಿ, ಬಿಜೆಪಿಯಲ್ಲಿ ನಿಷ್ಠಾವಂತರಿಗೆ ಬೆಲೆಯಿಲ್ಲ. ಕುಟುಂಬ ರಾಜಕಾರಣ ಮಾಡುವವರಿಗೆ ಹೆಚ್ಚು ಸ್ಥಾನಮಾನವಿದೆ. ಯತ್ನಾಳರ ಉಚ್ಚಾಟನೆಯನ್ನು ಪಕ್ಷ ಮತ್ತೊಮ್ಮೆ ಪರಿಶೀಲಿಸಿ ಅವಕಾಶ ಕಲ್ಪಿಸಿಕೊಡಬೇಕು. ಇಲ್ಲದಿದ್ದರೆ ಬಿಜೆಪಿಗೆ ಉಳಿಗಾಲವಿಲ್ಲ ಎಂದು ಕಿಡಿಕಾರಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.