- ದಾವಣಗೆರೆ ಲೋಕಸಭಾ ಕ್ಷೇತ್ರ ಅಭಿವೃದ್ಧಿಗೆ ಪ್ರಾಮಾಣಿಕ ಶ್ರಮದ ಭರವಸೆ
ದಾವಣಗೆರೆ ಅಭಿವೃದ್ಧಿಗೆ ಕಳೆದ 25 ವರ್ಷದಿಂದ ಕಂಡಿದ್ದ ಕನಸ್ಸನ್ನು ಈಗ ನಿಜವಾಗಿಸಲು ಕ್ಷೇತ್ರದ ಮತದಾರರು ನನಗೆ ಗೆಲ್ಲಿಸಿದ್ದಾರೆ. ಹಲವಾರು ತಿಂಗಳಿನಿಂದ ಪಟ್ಟ ಶ್ರಮವನ್ನು ಅರ್ಥ ಮಾಡಿಕೊಂಡು ಸ್ಪಂದಿಸಿದ ಸಮಸ್ತ ಮತದಾರರಿಗೆ ಕೃತಜ್ಞತೆ ಅರ್ಪಿಸುವೆ ಎಂದು ದಾವಣಗೆರೆ ಕ್ಷೇತ್ರದ ಪ್ರಥಮ ಮಹಿಳಾ ಸಂಸದೆಯಾಗಿ ಆಯ್ಕೆಯಾದ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದರು.
ತಾಲೂಕಿನ ಶಿವಗಂಗೋತ್ರಿಯ ದಾವಿವಿಯ ಚುನಾವಣಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಮಧ್ಯಾಹ್ನ ಫಲಿತಾಂಶ ಪ್ರಕಟಗೊಂಡ ನಂತರ ವಿಜಯಿ ಅಭ್ಯರ್ಥಿಯಾಗಿ ಪ್ರಮಾಣಪತ್ರ ಸ್ವೀಕರಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ಕ್ಷೇತ್ರದ ಜನರ ವಿಶ್ವಾಸಕ್ಕೆ ತಕ್ಕಂತೆ ಮುಂದಿನ 5 ವರ್ಷಗಳ ಕಾಲ ಪ್ರಾಮಾಣಿಕವಾಗಿ ಕೆಲಸ ಮಾಡುವ ಜವಾಬ್ದಾರಿ ನನ್ನ ಮೇಲಿದೆ ಎಂದರು.ಜನರ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ಕೆಲಸ ಮಾಡುತ್ತೇವೆ. ಇಡೀ ಕ್ಷೇತ್ರದ ಅಭಿವೃದ್ಧಿ ಚಿಂತನೆಯೇ ನನ್ನ ಗೆಲುವಿಗೆ ಕಾರಣವಾಗಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್‌ನ ಕೈ ಹಿಡಿದಿವೆ. ಜೊತೆ ಎಂಟೂ ವಿಧಾನಸಭಾ ಕ್ಷೇತ್ರಗಳ ಶಾಸಕರ ಶ್ರಮ, ನಮ್ಮೆಲ್ಲಾ ಮುಖಂಡರು, ಕಾರ್ಯಕರ್ತರು, ಹಿತೈಷಿಗಳು, ಅಭಿಮಾನಿಗಳ ಶ್ರಮವೂ ಗೆಲುವಿಗೆ ಕಾರಣವಾಗಿದೆ. ಈ ಎಲ್ಲರ ಶ್ರಮವೂ ಸಾರ್ಥಕವಾಗಿದೆ ಎಂದು ತಿಳಿಸಿದರು.
- - - -(ಫೋಟೋ ಬರಲಿದೆ)