ಕನ್ನಡಪ್ರಭ ವಾರ್ತೆ ಬಂಟ್ವಾಳ
ಬಂಟ್ವಾಳ ಮೂಡೂರು-ಪಡೂರು ಜೋಡುಕರೆ ಕಂಬಳ ಸಮಿತಿ ವತಿಯಿಂದ ನಾವೂರು ಗ್ರಾಮದ ಕೂಡಿಬೈಲಿನಲ್ಲಿ ನಡೆದ ೧೩ನೇ ವರ್ಷದ ಮೂಡೂರು -ಪಡೂರು ಬಂಟ್ವಾಳ ಕಂಬಳವನ್ನು ಸಮಿತಿಯ ಗೌರವಾಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು.ಬಳಿಕ ಮಾತನಾಡಿ, ಹೊಸ ಆವಿಷ್ಕಾರದ ಕಾವಳಕಟ್ಟೆ ಕಂಬಳ ವೈಭವವನ್ನು ನಾವೂರು ಕಂಬಳದ ಮೂಲಕ ಮತ್ತೆ ಕಾಣುವಂತಾಗಿದೆ. ಈ ಭಾಗದ ರೈತಾಪಿ ವರ್ಗದ ಸಹಕಾರದಿಂದ ಸಾಧ್ಯವಾಗಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶುಭಹಾರೈಸಿದರು. ಅಲ್ಲಿಪಾದೆ ಸಂತ ಅಂತೋನಿ ಚರ್ಚ್ ಧರ್ಮಗುರು ರೆ.ಫಾ. ಫೆಡ್ರಿಕ್ ಮೊಂತೆರೊ ದೀಪ ಬೆಳಗಿಸಿದರು.ಮಾಜಿ ಮೇಯರ್ ಎಂ.ಶಶಿಧರ ಹೆಗ್ಡೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ನಮ್ಮ ಕುಡ್ಲ ಮುಖ್ಯಸ್ಥ ಲೀಲಾಕ್ಷ ಕರ್ಕೇರ, ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಬಿ.ಎಚ್.ಖಾದರ್, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಕಂಬಳ ಕೋಣಗಳ ಯಜಮಾನರಾದ ಉಮೇಶ್ ಶೆಟ್ಟಿ ಮಾಣಿಸಾಗು, ಲಿಯೋ ಫರ್ನಾಂಡಿಸ್ ಸರಪಾಡಿ, ಉದ್ಯಮಿಗಳಾದ ರಘುನಾಥ ಸೋಮಯಾಜಿ, ಪುರುಷೋತ್ತಮ ಶೆಟ್ಟಿ, ಐತಪ್ಪ ಆಳ್ವ, ಎಂಆರ್‌ಜಿ ಗ್ರೂಪ್‌ನ ಬಾಲಕೃಷ್ಣ ಶೆಟ್ಟಿ, ತಾ.ಪಂ. ಮಾಜಿ ಸದಸ್ಯ ಪ್ರವೀಣ್ ಆಳ್ವ, ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ಅಧ್ಯಕ್ಷ ಅಬ್ಬಾಸ್ ಆಲಿ, ಪರಿಶಿಷ್ಟ ಪಂಗಡ ಘಟಕ ಅಧ್ಯಕ್ಷ ನಾರಾಯಣ ನಾಯ್ಕ್, ಸೇವಾದಳದ ಅಧ್ಯಕ್ಷ ಜೋಕಿಂ ಡಿಸೋಜ ಪುತ್ತೂರು, ಸುಳ್ಯ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಜಯಪ್ರಕಾಶ್ ರೈ, ಕಂಬಳ ಸಮಿತಿಯ ಸಂಚಾಲಕ ಬಿ.ಪದ್ಮಶೇಖರ್ ಜೈನ್, ಕಾರ್ಯಾಧ್ಯಕ್ಷ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪ್ರಧಾನ ಕಾರ್ಯದರ್ಶಿ ರಾಜೀವ ಶೆಟ್ಟಿ ಎಡ್ತೂರು, ಕೋಶಾಧಿಕಾರಿ ಪಿಲಿಫ್ ಫ್ರಾಂಕ್, ಉಪಾಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಸುದರ್ಶನ್ ಜೈನ್, ಅವಿಲ್ ಮಿನೇಜಸ್, ಬೇಬಿ ಕುಂದರ್, ಸುದೀಪ್‌ಕುಮಾರ್ ಶೆಟ್ಟಿ, ಎಂ.ಎಸ್.ಮಹಮ್ಮದ್ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.ಕಂಬಳ ಸಮಿತಿ ಅಧ್ಯಕ್ಷ ಪಿಯೂಸ್ ಎಲ್.ರಾಡ್ರಿಗಸ್ ಸ್ವಾಗತಿಸಿದರು. ಬಾಲಕೃಷ್ಣ ಆಳ್ವ ಕೊಡಾಜೆ ನಿರ್ವಹಿಸಿದರು.