ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
29 ರಂದು ಪೂರ್ವಾಹ್ನ ಗಣಪತಿ ಹೋಮ ಮತ್ತು ಕೊಡಿ ಏರಿಸುವುದರೊಂದಿಗೆ ಪೂಜಾ ಕಾರ್ಯಕ್ರಮಗಳು ಚಾಲನೆ ನೀಡಲಾಯಿತು. ಅನಂತರ ಸಂಜೆ 7 ಗಂಟೆಯಿಂದ ದೀಪರಾಧನೆ ಏಳು ಸುತ್ತಿನ ಪ್ರದಕ್ಷಿಣೆ ಹಾಗೂ ಶ್ರೀ ಚಾಮುಂಡಿ ತಂಡದಿಂದ ಚಂಡೆ ಮೇಳ ಜರುಗಲಿದೆ. ಮಂಗಳವಾರ ಶ್ರೀ ಚಾಮುಂಡೇಶ್ವರಿ ದೇವಿಯ ಅಭಿಷೇಕ ಪೂಜೆ ನಡೆಯಲಿದೆ. ಗ್ರಾಮದ ಮಂಗಳವಾರ ರಾತ್ರಿಯಿಂದ ವಿವಿಧ ದೈವಗಳ ಕೋಲ ನಡೆಯಲ್ಲಿದ್ದು 30 ರಂದು ಪೂರ್ವಾಹ್ನ ಅಜ್ಜಪ್ಪ ಕೋಲ ವಿಷ್ಣುಮೂರ್ತಿ ಕೋಲ, ರಕ್ತೇಶ್ವರಿ ಹಾಗೂ ಚಾಮುಂಡೇಶ್ವರಿ ಕೋಲದೊಂದಿಗೆ ರಾತ್ರಿ 8 ಗಂಟೆಗೆ ಶ್ರೀದೇವಿ ನೈವೇದ್ಯದೊಂದಿಗೆ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ ಎಂದು ಶ್ರೀಕುಂದುರುಮೊಟ್ಟೆ ಚಾಮುಂಡೇಶ್ವರಿ ದೇವಾಲಯ ಸಮಿತಿ ತಿಳಿಸಿದೆ.