ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯವನ್ನು ಅತಂತ್ರ

KannadaprabhaNewsNetwork |  
Published : Sep 04, 2025, 02:00 AM IST
ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲಗಳನ್ನು ನಿವಾರಿಸಲು ಆಗ್ರಹಿಸಿ ಬುಧವಾರ ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಪದವಿ ವಿದ್ಯಾರ್ಥಿಗಳು ಚಿತ್ರದುರ್ಗದ ಡಿ.ಸಿ ಸರ್ಕಲ್ ಬಳಿ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲಗಳನ್ನು ನಿವಾರಿಸಲು ಆಗ್ರಹಿಸಿ ಬುಧವಾರ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಪದವಿ ವಿದ್ಯಾರ್ಥಿಗಳು ಚಿತ್ರದುರ್ಗದ ಡಿ.ಸಿ ಸರ್ಕಲ್ ಬಳಿ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾತರ್ಡ ಚಿತ್ರದುರ್ಗ

ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲಗಳನ್ನು ನಿವಾರಿಸಲು ಆಗ್ರಹಿಸಿ ಬುಧವಾರ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಪದವಿ ವಿದ್ಯಾರ್ಥಿಗಳು ಚಿತ್ರದುರ್ಗದ ಡಿ.ಸಿ ಸರ್ಕಲ್ ಬಳಿ ಪ್ರತಿಭಟನೆ ನಡೆಸಿದರು.

ಎಐಡಿಎಸ್‌ಒ ರಾಜ್ಯ ಕಚೇರಿ ಕಾರ್ಯದರ್ಶಿ ಮಹಾಂತೇಶ್ ಬಿಳೂರು ಮಾತನಾಡಿ, ರಾಜ್ಯಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಲ್ಲ. ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಭಿತವಾಗಿದ್ದು ಇಲ್ಲಿಯವರೆಗೂ ತರಗತಿಗಳು ಸರಿಯಾಗಿ ನಡೆಯದೆ ಇರುವುದರಿಂದ ವಿದ್ಯಾರ್ಥಿಗಳು ಸಾಕಷ್ಟು ಆತಂಕದಲ್ಲಿದ್ದಾರೆ. ಇದು ಅವರ ಶೈಕ್ಷಣಿಕ ಭವಿಷ್ಯವನ್ನು ಅತಂತ್ರವನ್ನಾಗಿಸಿದೆ. ಸೆಪ್ಟೆಂಬರ್ ನಲ್ಲಿ ಪದವಿ ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆ ನಡೆಯಬೇಕಿದ್ದು ಪಾಠಗಳು ಇನ್ನೂ ಆರಂಭವಾಗಿಲ್ಲ ಎಂದು ದೂರಿದರು.

ಯುಜಿಸಿಯ ಹೊಸ ನಿರ್ದೇಶನಗಳು ಹಾಗೂ ಕೋರ್ಟ್‌ನಲ್ಲಿ ನಡೆಯುತ್ತಿರುವ ಮೊಕದ್ದಮೆಯಿಂದ ಅತಿಥಿ ಉಪನ್ಯಾಸಕರ ನೇಮಕಾತಿಯು ನೆನೆಗುದಿಗೆ ಬಿದ್ದಿದೆ. ಖಾಸಗಿ ಕಾಲೇಜುಗಳಲ್ಲಿ ಪಾಠಗಳು ನಡೆಯುತ್ತಿದ್ದರೆ, ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು ಮಾತ್ರ ದಿನವೂ ಕಾಲೇಜಿಗೆ ಬಂದು ತರಗತಿಗಳು ನಡೆಯದೇ ಮನೆಗಳಿಗೆ ಹಿಂದಿರುಗುವಂತಾಗಿದೆ. ಈ ಮೂಲಕ ಸರ್ಕಾರವು ಬಡವಿದ್ಯಾರ್ಥಿಗಳಿಗೆ ಅನ್ಯಾಯವೆಸಗುತ್ತಿದೆ. ಶೈಕ್ಷಣಿಕ ವಿಷಯಗಳಲ್ಲಿ ರಾಜ್ಯ ಸರ್ಕಾರವು ಕೇಂದ್ರದ ನಿರ್ಧಾರಗಳನ್ನು ಪಾಲಿಸವುದು ಕಡ್ಡಾಯವಲ್ಲ ಎಂದು ಸರ್ವೋಚ್ಚ ನ್ಯಾಯಾಲಯದ ನಿರ್ದೇಶನವಿದೆ. ಇದಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಪೂರಕವಾದ ಸ್ಪಷ್ಟ ನಿಲುವು ತಾಳಬೇಕು. ಇಂತಹ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರವು ಶೈಕ್ಷಣಿಕ ಚಟುವಟಿಕೆಗಳು ಸರಾಗವಾಗಿ ನಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತುರ್ತಾಗಿ ಕೈಗೊಂಡು ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಪರಿಹರಿಸಬೇಕೆಂದು ಹೇಳಿದರು.

ಈ ವೇಳೆ ಎಐಡಿಎಸ್ಓ ಜಿಲ್ಲಾ ಸಂಚಾಲಕ ಕೆ ಈರಣ್ಣ ಮತ್ತು ವಿದ್ಯಾರ್ಥಿಗಳು ಗಜೇಂದ್ರ , ಮೌನೇಶ್, ಸ್ವಪ್ನ, ಸಾನಿಯಾ, ಭಾರ್ಗವಿ, ದ್ಯಾನೇಶ್ ಹಾಗೂ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಹಿಳೆಯರ ಬಡತನ ನಿರ್ಮೂಲನೆಗೆ ಸಂಜೀವಿನಿ ಸಹಕಾರಿ
ರೈತರು ಸರ್ಕಾರದ ಸೌಕರ್ಯ ಪಡೆಯಲು ಎಫ್‌ಐಡಿ ಮಾಡಿಸಲಿ: ಚೇತನಾ ಪಾಟೀಲ