ಕುರಡಿಕೇರಿ ಗ್ರಾಮೀಣ ಮಕ್ಕಳ ಸಾಧನೆ ಪ್ರಶಂಸನೀಯ

KannadaprabhaNewsNetwork |  
Published : Jan 26, 2024, 01:49 AM IST
ಕಾರ್ಯಕ್ರಮದಲ್ಲಿ ಶಾಸಕ ಎಂ.ಆರ್‌. ಪಾಟೀಲ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು. | Kannada Prabha

ಸಾರಾಂಶ

ಸರ್ಕಾರಿ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ಮುಂದೊಂದು ದಿನ ದೊಡ್ಡ ವ್ಯಕ್ತಿಗಳಾಗಿ ಹೊರಹೊಮ್ಮಬಹುದು, ಈಗಿನಿಂದಲೇ ಅಂತಹ ಶಕ್ತಿ ಇರುವಂತಹ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ,ಅವರ ಪ್ರತಿಭೆಗೆ ಪ್ರೋತ್ಸಾಹ ನೀಡುತ್ತಿರುವುದು, ವೈಜ್ಞಾನಿಕ ಸಂಶೋಧನಾ ಮನೋಭಾವ, ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸುತ್ತಿರುವುದು ನಿಜಕ್ಕೂ ಹೆಮ್ಮೆಯ ಸಂಗತಿ

ಹುಬ್ಬಳ್ಳಿ: ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳು ವಿಜ್ಞಾನ ಕ್ಷೇತ್ರದಲ್ಲಿ ಹಲವಾರು ಬಾರಿ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ್ದು ಹೆಮ್ಮೆಯ ಸಂಗತಿ ಎಂದು ಶಾಸಕ ಎಂ.ಆರ್. ಪಾಟೀಲ ಹೇಳಿದರು.

ಅವರು ಕುಂದಗೋಳ ವಿಧಾನಸಭಾ ವ್ಯಾಪ್ತಿಗೆ ಬರುವ ಕುರಡಿಕೇರಿ ಪ್ರೌಢಶಾಲೆಯಲ್ಲಿ ಸಾಧಕ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಗ್ರಾಮೀಣ ಭಾಗದ ವಿದ್ಯಾರ್ಥಿಗಳು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುವ ಮೂಲಕ ಕ್ಷೇತ್ರದ ಮೆರಗು ಹೆಚ್ಚಿಸಿದ್ದಾರೆ. ಸಾಧನೆ ತೋರಿದ ಪ್ರತಿ ವಿದ್ಯಾರ್ಥಿಗೆ ಎರಡುವರೆ ಸಾವಿರ ನಗದು ಬಹುಮಾನ, ಅಷ್ಟೇ ಅಲ್ಲದೆ ವಿಜ್ಞಾನ ಪ್ರಯೋಗಾಲಯಕ್ಕೆ ₹5 ಲಕ್ಷ ಅನುದಾನ ಮಂಜೂರು ಮಾಡುವುದಾಗಿ ತಿಳಿಸಿದರು.

ಹುಬ್ಬಳ್ಳಿ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಬಮ್ಮಕ್ಕನವರ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ಮುಂದೊಂದು ದಿನ ದೊಡ್ಡ ವ್ಯಕ್ತಿಗಳಾಗಿ ಹೊರಹೊಮ್ಮಬಹುದು, ಈಗಿನಿಂದಲೇ ಅಂತಹ ಶಕ್ತಿ ಇರುವಂತಹ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ,ಅವರ ಪ್ರತಿಭೆಗೆ ಪ್ರೋತ್ಸಾಹ ನೀಡುತ್ತಿರುವುದು, ವೈಜ್ಞಾನಿಕ ಸಂಶೋಧನಾ ಮನೋಭಾವ, ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸುತ್ತಿರುವುದು ನಿಜಕ್ಕೂ ಹೆಮ್ಮೆಯ ಸಂಗತಿ ಎಂದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಲು ಪರಿಶ್ರಮ, ಪ್ರೇರಣೆ ನೀಡಿದಂತಹ ಹಾಗೂ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪುರಸ್ಕೃತ ರಾಜಶ್ರೀ ಬೀಡಿ ಹಾಗೂ ವಿದ್ಯಾರ್ಥಿಗಳಾದ ಕವಿತಾ ಕಮಡೊಳ್ಳಿ, ವಿಜಯಗೌಡ ಪಾಟೀಲ, ಮೇಘಾ ದೊಡ್ಡಮನಿ, ಪೃಥ್ವಿ ಹುಬ್ಬಳ್ಳಿ, ಜ್ಯೋತಿ ಅಂಗಡಿ, ಅನಿತಾ ಉಣಕಲ್, ಮಾಸುದ್ದೀನ್ ಅಣ್ಣಿಗೇರಿ ಅವರನ್ನು ಶಾಸಕರು ಸನ್ಮಾನಿಸಿದರು.

ಈ ವೇಳೆ ಗ್ರಾಪಂ ಹಾಗೂ ಎಸ್‌ಡಿಎಂಸಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಮುಖ್ಯೋಪಾಧ್ಯಾಯರು, ಕುರಡಿಕೇರಿ, ಕರಡಿಕೊಪ್ಪ, ಕಂಪ್ಲಿಕೊಪ್ಪ ಇನಾಂವೀರಾಪೂರ ಗ್ರಾಮಸ್ಥರು ಪಾಲ್ಗೊಂಡಿದ್ದರು. ಶಿಕ್ಷಣ ಸಂಯೋಜಕ ಮೃತ್ಯುಂಜಯ ಜಡಿಮಠ ನಿರೂಪಿಸಿದರು.

PREV

Recommended Stories

ರೈತರ ಅನುಕೂಲಕ್ಕೆ ಶ್ರಮಿಸಿದ್ದ ದಿ.ಸಿದ್ದು ನ್ಯಾಮಗೌಡ
ಮುಧೋಳದಲ್ಲಿ ಮುಷ್ಕರಕ್ಕೆ ನೋ ರಿಸ್ಪಾನ್ಸ್‌