ಸರ್ಕಾರಿ ಶಾಲೆಯ ಮಕ್ಕಳ ಸಾಧನೆ ಶ್ಲಾಘನೀಯ

KannadaprabhaNewsNetwork |  
Published : May 04, 2025, 01:31 AM IST
ಸವದತ್ತಿಯ ಹಿಂದುಳಿದ ವರ್ಗಗಳ ಇಲಾಖೆಯ ಕಚೇರಿಯಲ್ಲಿ ಎಸ್.ಎಸ್.ಎಲ್.ಸಿಯಲ್ಲಿ ಶೇ.೯೦ಕ್ಕಿಂತ ಹೆಚ್ಚು ಅಂಕ ಪಡೆದ ಮೆಟ್ರಿಕ್ ಪೂರ್ವ ವಸತಿ ನಿಲಯಗಳ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ತಹಸೀಲ್ದಾರ ಮಲ್ಲಿಕಾರ್ಜುನ ಹೆಗ್ಗಣ್ಣವರ, ರತ್ನಾ ಕದಮ, ಆನಂದ ಬಡಕುಂದರಿ ಇತರರು ಉಪಸ್ಥಿತರಿದ್ದರು. | Kannada Prabha

ಸಾರಾಂಶ

ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ಮೆಟ್ರಿಕ ಪೂರ್ವ ಬಾಲಕರ/ಬಾಲಕಿಯರ ವಿವಿಧ ವಸತಿ ನಿಲಯಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ರ‍್ಯಾಂಕ್ ಪಡೆದುಕೊಂಡಿರುವುದು ಹೆಮ್ಮೆಯ ವಿಷಯ ಎಂದು ತಹಸೀಲ್ದಾರ್‌ ಮಲ್ಲಿಕಾರ್ಜುನ ಹೆಗ್ಗನ್ನವರ ಹೇಳಿದರು.

ಕನ್ನಡಪ್ರಭ ವಾರ್ತೆ ಸವದತ್ತಿ

ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ಮೆಟ್ರಿಕ ಪೂರ್ವ ಬಾಲಕರ/ಬಾಲಕಿಯರ ವಿವಿಧ ವಸತಿ ನಿಲಯಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ರ‍್ಯಾಂಕ್ ಪಡೆದುಕೊಂಡಿರುವುದು ಹೆಮ್ಮೆಯ ವಿಷಯ ಎಂದು ತಹಸೀಲ್ದಾರ್‌ ಮಲ್ಲಿಕಾರ್ಜುನ ಹೆಗ್ಗನ್ನವರ ಹೇಳಿದರು.

ಪಟ್ಟಣದ ಹಿಂದುಳಿದ ವರ್ಗಗಳ ಇಲಾಖೆಯ ಕಚೇರಿಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.೯೦ಕ್ಕಿಂತ ಹೆಚ್ಚು ಅಂಕ ಪಡೆದ ಮೆಟ್ರಿಕ್ ಪೂರ್ವ ವಸತಿ ನಿಲಯಗಳ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದ ಅವರು, ಖಾಸಗಿ ಶಾಲೆಗಳನ್ನು ಮೀರಿಸಿ ಇಂದು ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳು ಹೆಚ್ಚಿನ ಸಾಧನೆಗಳನ್ನು ಮಾಡುತ್ತಿರುವುದು ಶ್ಲಾಘನೀಯ ಕಾರ್ಯ ಎಂದರು.ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಲ್ಯಾಣಾಧಿಕಾರಿ ರತ್ನಾ ಕದಮ ಮಾತನಾಡಿ, ಇಲಾಖೆಯಡಿ ಬರುವ ೧೬ ಮೆಟ್ರಿಕ್ ಪೂರ್ವ ಬಾಲಕರ ಮತ್ತು ಬಾಲಕಿಯರ ವಸತಿ ಶಾಲೆಯಲ್ಲಿ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ೧೬೩ ವಿದ್ಯಾರ್ಥಿಗಳಲ್ಲಿ ೧೪೦ ವಿದ್ಯಾರ್ಥಿಗಳು ಉತ್ತೀರ್ಣರಾಗುವುದರೊಂದಿಗೆ ತಾಲೂಕಿನ ಫಲಿತಾಂಶವು ಶೇ.೮೬ರಷ್ಟಾಗಿದೆ. ವಸತಿ ಶಾಲೆಯಲ್ಲಿ ಓದಿ ಪರೀಕ್ಷೆಯಲ್ಲಿ ಶೇ.೯೦ಕ್ಕೂ ಅಧಿಕ ಅಂಕಗಳನ್ನು ವಿದ್ಯಾರ್ಥಿಗಳು ಪಡೆಯುವ ಮೂಲಕ ಇಲಾಖೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಎಂದರು.ತಾಪಂ ಇಓ ಆನಂದ ಬಡಕುಂದರಿ, ಸಿಂಗಾರಗೊಪ್ಪ, ಎಮ್.ಎನ್.ತಹಸೀಲ್ದಾರ, ವೆಂಕಟೇಶ ಜಾಧವ ಹಾಗೂ ಇಲಾಖೆಯ ಸಿಬ್ಬಂದಿಯವರು ಉಪಸ್ತಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಾಸಕ ಎಂ.ಚಂದ್ರಪ್ಪರಿಂದ ಸರ್ಕಾರಿ ಗುಡ್ಡ ಕಬಳಿಕೆ
ಇಂದು ಸ್ತುತಿ ಶಂಕರ- ಸ್ತೋತ್ರ ಮಹಾ ಸಮರ್ಪಣೆ