ತಿರಂಗಾ ಯಾತ್ರೆಯಿಂದ ಐಕ್ಯತೆ ಸಾರುವ ಕಾರ್‍ಯ

KannadaprabhaNewsNetwork |  
Published : Aug 15, 2024, 01:47 AM IST
ಚಿತ್ರದುರ್ಗ ಮೂರನೇ ಪುಟದ ಕಟ್  ಲೀಡ್  | Kannada Prabha

ಸಾರಾಂಶ

ಹರ್ ಘರ್ ತಿರಂಗಾ ಯಾತ್ರೆ ಅಂಗವಾಗಿ ಅಂಗನವಾಡಿ ಕಾರ್ಯಕರ್ತೆಯರು ಬುಧವಾರ ಚಿತ್ರದುರ್ಗದ ಒನಕೆ ಓಬವ್ವ ವೃತ್ತದಲ್ಲಿ ರಾಷ್ಟ್ರಧ್ವಜ ಕೈಲಿಡಿದು ಐಕ್ಯತೆ ಪ್ರದರ್ಶಿಸಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಹರ್ ಘರ್ ತಿರಂಗಾ ಅಭಿಯಾನದಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರು ತ್ರಿವರ್ಣ ಧ್ವಜ ಹಿಡಿದು ನಗರದಲ್ಲಿ ಬುಧವಾರ ತಿರಂಗಾ ಯಾತ್ರೆ ನಡೆಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ತಿರಂಗಾ ಯಾತ್ರೆಗೆ ನಗರದ ಒನಕೆ ಓಬವ್ವ ವೃತ್ತದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಹಾಗೂ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಭಾರತದಲ್ಲಿ ಯಾವುದಾದರೂ ಒಂದು ದಿನವನ್ನು ಸುವರ್ಣ ಅಕ್ಷರಗಳಿಂದ ದಾಖಲಿಸುವುದಾದರೆ ಅದು 1947 ಆಗಸ್ಟ್ 15. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳ ಪ್ರತೀಕವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ. ಹರ್ ಘರ್ ತಿರಂಗಾ ಅಭಿಯಾನದಡಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ವಿವಿಧ ರೀತಿ ಕಾರ್ಯಕ್ರಮಗಳನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ತಿರಂಗಾ ಯಾತ್ರೆಯು ರಾಷ್ಟ್ರೀಯ ಐಕ್ಯತೆ ಮತ್ತು ಭಾವೈಕ್ಯತೆ ಸಾರುವ ಕೆಲಸ ಮಾಡುತ್ತಿದೆ. ದೇಶದ ತ್ರಿವರ್ಣ ಧ್ವಜವು ಕೇಸರಿ ಬಣ್ಣ ತ್ಯಾಗ ಶೌರ್ಯಗಳ ಸಂಕೇತವಾದರೆ, ಬಿಳಿ ಶಾಂತಿ ಸಂಕೇತ ಹಾಗೂ ಹಸಿರು ಸಮೃದ್ಧಿ ಸಂಕೇತ ಸೂಚಿಸುತ್ತದೆ ಎಂದ ಅವರು, ರಾಷ್ಟ್ರೀಯ ಹಬ್ಬಗಳನ್ನು ಅರ್ಥಪೂರ್ಣವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಗುತ್ತದೆ ಎಂದು ಹೇಳಿದರು.

ತಿರಂಗಾ ಯಾತ್ರೆ ಜಾಥಾವು ನಗರದ ಒನಕೆ ಓಬವ್ವ ವೃತ್ತದಿಂದ ಪ್ರಾರಂಭವಾಗಿ ಮದಕರಿ ವೃತ್ತ, ಅಂಬೇಡ್ಕರ್ ವೃತ್ತದ ಮಾರ್ಗವಾಗಿ ನಗರದ ಹೊಳಲ್ಕೆರೆ ರಸ್ತೆಯ ನೀಲಕಂಠೇಶ್ವರ ದೇಗುಲದವರೆಗೆ ಸಾಗಿ ತದನಂತರ ಪುನಃ ಒನಕೆ ಓಬವ್ವ ವೃತ್ತದಲ್ಲಿ ಅಂತ್ಯಗೊಂಡಿತು. ಜಾಥಾದಲ್ಲಿ ದೇಶ ಭಕ್ತಿ ಘೋಷಣೆಗಳು ಹಾಗೂ ಸ್ವಾತಂತ್ರ್ಯ ಸೇನಾನಿಗಳಿಗೆ ಜೈಕಾರ ಕೂಗಿದರು.

ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಕೆ.ತಿಮ್ಮಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸವಿತಾ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಂ.ವಿ.ವೀಣಾ, ಸುಧಾ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಕನಿಷ್ಠ ಆದಾಯ ಮಿತಿ 3 ಲಕ್ಷ ರು.ಗೆ ಏರಿಕೆ: ಮುನಿಯಪ್ಪ
ಏ.1ರಿಂದ ರಾಜ್ಯದ ರಾಷ್ಟ್ರೀಯ ಹೆದ್ದಾರಿ ಟೋಲ್‌ ಶುಲ್ಕ ಹೆಚ್ಚಳ