ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಈ ಘಟನೆ ನಡೆದಾಗ ಸರ್ಕಾರ ಕೂಡಲೇ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಬೇಕಿತ್ತು. ಮುಖ್ಯಮಂತ್ರಿ ಅವರು ಕೂಡಲೇ ಈ ಘಟನೆಗೆ ಸಂಬಂಧಿಸಿದಂತೆ ವಿಶೇಷ ಸಭೆ ಕರೆದು ತಪ್ಪಿತಸ್ಥರ ಮೇಲೆ ಕಠಿಣ ಕ್ರಮಕೈಗೊಳ್ಳಬೇಕಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಇದಕ್ಕೂ ನಮಗೂ ಸಂಬಂಧ ಇಲ್ಲ ಎಂಬಂತೆ ವರ್ತಿಸುತ್ತಿದೆ. ಕೇಂದ್ರದಿಂದ ಘಟನೆಯ ಸತ್ಯ ಪರಿಶೀಲನೆಗೆ ಸತ್ಯಶೋಧನ ತಂಡ ಬಂದಿದೆ. ಮುಖ್ಯಮಂತ್ರಿ ಅವರಿಗೂ ಅಕ್ಕ ತಂಗಿಯರಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಏನು ಬೇಕಾದರೂ ಮಾಡಬಹುದು ಎಂಬ ಸ್ಥಿತಿಯಲ್ಲಿ ಕೀಡಿಗೇಡಿಗಳಿದ್ದಾರೆ ಎಂದು ಕಿಡಿಕಾರಿದರು.
ಶಾಸಕ ಚನ್ನಬಸಪ್ಪ ಮಾತನಾಡಿ, ಅಧಿವೇಶದಲ್ಲಿ ಈ ಘಟನೆ ಬಗ್ಗೆ ಚರ್ಚೆಗೆ ಸಭಾಧ್ಯಕ್ಷರು ಅವಕಾಶ ನೀಡಲಿಲ್ಲ. ಬೆಳಗಾವಿ ಅಧಿವೇಶನ ನಡೆಯುತ್ತಿರುವಾಗಲೇ ಈ ಘಟನೆ ನಡೆದಿದ್ದು, ಸಭಾಧ್ಯಕ್ಷರು ಚರ್ಚೆಗೆ ಅವಕಾಶ ನೀಡಬೇಕಿತ್ತು. ಅದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕ್ಷೇತ್ರವಾಗಿದೆ. ಅವರಾದರೂ ಸದನದಲ್ಲಿ ಈ ವಿಚಾರವನ್ನೆತ್ತಿ ಖಂಡನೆ ವ್ಯಕ್ತಪಡಿಸಬೇಕಿತ್ತು. ಈ ಸರ್ಕಾರ ಮಹಿಳೆಯನ್ನು ಗೌರವಿಸುವುದಿಲ್ಲ ಎನ್ನುವುದಕ್ಕೆ ಈ ಪ್ರಕರಣ ಸಾಕ್ಷಿಯಾಗಿದೆ ಎಂದು ಹರಿಹಾಯ್ದರು.ಕಾಂಗ್ರೆಸ್ ಇಂತಹ ದುಷ್ಟ ಶಕ್ತಿಗಳಿಗೆ ಶಕ್ತಿಕೊಡುತ್ತ ಬಂದಿದೆ. ಮಹಿಳೆಯರ ಮೇಲೆ ಅಪಮಾನ ಯಾವುದೇ ಕಾರಣಕ್ಕೂ ಬಿಜೆಪಿ ಸಹಿಸುವುದಿಲ್ಲ. ಸಚಿವರು ಕೂಡ ಚಕಾರ ಎತ್ತಲಿಲ್ಲ. ಲಜ್ಜೆಗೆಟ್ಟ ಭಂಡ ಸರ್ಕಾರವಿದು. ಮಹಿಳೆಯರ ಮತ್ತು ಸಂಸ್ಕೃತಿಯ ರಕ್ಷಣೆ ಮಾಡದ ಇಂತಹ ಸರ್ಕಾರ ಇರಬಾರದು ಎಂದರು.
ಪ್ರತಿಭಟನೆಯಲ್ಲಿ ಮಹಿಳಾ ಮೋರ್ಚಾದ ಸುನೀತ ಅಣ್ಣಪ್ಪ, ರಶ್ಮಿ ಶ್ರೀನಿವಾಸ್, ಲಕ್ಷ್ಮೀ ಶಂಕರ್‌ನಾಯಕ್, ಸುವರ್ಣ ಶಂಕರ್, ಅನಿತಾ ರವಿಶಂಕರ್, ಆರತಿ ಅ.ಮಾ.ಪ್ರಕಾಶ್, ನಗರಾಧ್ಯಕ್ಷ ಜಗದೀಶ್, ಎನ್.ಡಿ.ಸತೀಶ್, ಜ್ಞಾನೇಶ್ವರ್ ಮತ್ತಿತರರು ಇದ್ದರು.---------------------------------------ಪೋಟೋ: 16ಎಸ್‌ಎಂಜಿಕೆಪಿ05ಬೆಳಗಾವಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿರುವ ಘಟನೆ ಖಂಡಿಸಿ ಶಿವಮೊಗ್ಗ ಬಿಜೆಪಿ ಮಹಿಳಾ ಮೋರ್ಚಾದಿಂದ ಶನಿವಾರ ನಗರದ ಶಿವಪ್ಪನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.