ಕನ್ನಡಪ್ರಭ ವಾರ್ತೆ ಮೈಸೂರು
ನಗರ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ತಮ್ಮ ತವರೂರಿನ ವಿಚಾರದಲ್ಲಿ ಎಷ್ಟು ಪ್ರೀತಿ ಇಟ್ಟಿದ್ದಾರೆ ಎಂಬುದು ಇದರಿಂದ ಗೊತ್ತಾಗುತ್ತಿದೆ. ಮೈಸೂರಲ್ಲಿ ಕಾನೂನು ಸುವ್ಯವಸ್ಥೆ ಕುಸಿದು ಹೋಗಿದೆ. ಮೈಸೂರಿನ ಹೆಸರು ಕೆಡುತ್ತಿದೆ ಎಂದು ದೂರಿದರು.
ಅರಮನೆ ಮುಂಭಾಗ ಮೊನ್ನೆ ಒಂದು ಕೊಲೆ ಆಗಿದೆ. ಮತ್ತೆ ಚಿಕ್ಕ ಮಗುವಿನ ಮೇಲೆ ಅತ್ಯಾಚಾರ ಕೊಲೆಯಾಗಿದೆ. ಬಲೂನ್ ಮಾರಾಟ ಮಾಡುವ ಮಗು ಮೇಲೆ ಹೀನ ಕೃತ್ಯ ಆಗಿದೆ. ಮೈಸೂರಿನಲ್ಲಿ ಇಂತಹ ಘಟನೆಗಳು ಈ ಹಿಂದೆ ಆಗಿಲ್ಲ. ನಗರದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ನಗರದ ಹೃದಯ ಭಾಗದಲ್ಲೇ ಇಂತಹ ಘಟನೆಗಳು ನಡೆದರೆ ಹೇಗೆ? ಕಿಡಿಗೇಡಿಗಳಿಗೆ ಯಾವುದೇ ರೀತಿಯ ಭಯ ಇಲ್ಲ. ಸಿಎಂ ಸಿದ್ದರಾಮಯ್ಯ ಚುನಾವಣೆಯಲ್ಲಿ ಇದು ನನ್ನ ತವರು ಅಂತಾರೆ. ಇಂತಹ ಘಟನೆಗಳನ್ನು ಆಗದಂತೆ ತಡೆಯಲು ಆಗುತ್ತಿಲ್ಲ ಎಂದು ಕಿಡಿಕಾರಿದರು.ದಸರಾ ಪಾಸ್ ಅವ್ಯವಸ್ಥೆ:
ದಸರಾ ಪಾಸ್ ವಿಚಾರದಲ್ಲಿ ಗೊಂದಲ ಆಯಿತು. ಆಸನ ವ್ಯವಸ್ಥೆ ಕಡಿಮೆ ಮಾಡಿ ಪಾಸ್ ಹೆಚ್ಚು ಕೊಟ್ಟರು. ಪಾಸ್ ಇರೋರಿಗೂ ಅರಮನೆ ಒಳಗಡೆ ಬಿಡಲಿಲ್ಲ. ಇದು ಕೇವಲ ಕಾಂಗ್ರೆಸ್ ನಾಯಕರ ದಸರಾ ಆಯಿತು. ಜನ ಸಾಮಾನ್ಯರ ದಸರಾ ಆಗಲಿಲ್ಲ. ನಾಗರಿಕರಿಗೆ ಅನುಕೂಲ ಮಾಡಲಿಲ್ಲ. ಕೇವಲ ಉಳ್ಳವರ ದಸರಾ ದರ್ಬಾರ್ ಆಯಿತು ಎಂದು ಅವರು ವಾಗ್ದಾಳಿ ನಡೆಸಿದರು.
ಸ್ಥಳೀಯ ಪ್ರಜಾಪ್ರಭುತ್ವವೇ ನಾಶವಾಗಿದೆ. ಮೈಸೂರು ಮಹಾನಗರ ಪಾಲಿಕೆ ಚುನಾವಣೆಯೂ ನಡೆದಿಲ್ಲ. ಸ್ಥಳೀಯ ಜನಪ್ರತಿನಿಧಿಗಳಿಗೆ ಅನ್ಯಾಯ ಆಗಿದೆ. ಪಾಲಿಕೆ ಚುನಾವಣೆ ನಡೆಸದೆ ಸರ್ಕಾರ ಕುಳಿತಿದೆ. ಕೇಂದ್ರದಿಂದ ಬಂದ ಹಣ ವಾಪಸ್ ಹೋಗಿದೆ. ಈ ರೀತಿ ಆದರೆ ಮೈಸೂರು ನಗರದ ಅಭಿವೃದ್ಧಿ ಹೇಗೆ ಸಾಧ್ಯ ಎಂದು ಅವರು ಪ್ರಶ್ನಿಸಿದರು.
ಶಾಸಕ ಟಿ.ಎಸ್. ಶ್ರೀವತ್ಸ, ಬಿಜೆಪಿ ನಗರಾಧ್ಯಕ್ಷ ಎಲ್. ನಾಗೇಂದ್ರ, ಹಿಂದುಳಿದ ಮೋರ್ಚಾ ರಾಜ್ಯಾಧ್ಯಕ್ಷ ಆರ್. ರಘು, ಮಾಜಿ ಮೇಯರ್ ಶಿವಕುಮಾರ್, ಮುಖಂಡರಾದ ಬಿ.ಎಂ. ರಘು, ಕೇಬಲ್ ಮಹೇಶ್, ಮಹೇಶ್ ರಾಜೇ ಅರಸ್, ಬಿ.ಎಂ. ಸಂತೋಷ್ ಕುಮಾರ್ ಇದ್ದರು.
- ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಸಂಸದರು