ಸೊರಬ ಸರ್ಕಾರಿ ಆಸ್ಪತ್ರೆ ಆಡಳಿತ ವ್ಯವಸ್ಥೆ ಸುಧಾರಣೆ ಆಗಲಿ

KannadaprabhaNewsNetwork |  
Published : Nov 19, 2026, 01:30 AM IST
ಫೋಟೊ:೧೮ಕೆಪಿಸೊರಬ-೦೨ : ಸೊರಬ ಪಟ್ಟಣದಲ್ಲಿ ಬಿಜೆಪಿ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ. ಹೆಚ್.ಇ. ಜ್ಞಾನೇಶ್ ಮಾತನಾಡಿದರು. | Kannada Prabha

ಸಾರಾಂಶ

The administrative system of the Soraba Government Hospital should be improved.

-ಸಮಸ್ಯೆಗಳ ಆಗರ

-ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಡಾ. ಹೆಚ್.ಇ. ಜ್ಞಾನೇಶ್ ಆಗ್ರಹ । ಆಸ್ಪತ್ರೆಯಲ್ಲಿ ಲಂಚಾವತಾರ ಆರೋಪಕನ್ನಡಪ್ರಭ ವಾರ್ತೆ ಸೊರಬ

ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಸೇರಿದಂತೆ ಹಲವು ಮೂಲ ಸೌಕರ್ಯಗಳ ಅಭಾವದಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಆಸ್ಪತ್ರೆಯ ಆಡಳಿತ ವ್ಯವಸ್ಥೆ ಸಂಪೂರ್ಣ ಸುಧಾರಣೆಯಾಗಬೇಕಿದೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಡಾ. ಹೆಚ್.ಇ. ಜ್ಞಾನೇಶ್ ಆಗ್ರಹಿಸಿದರು.

ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ದೊರೆಯುತ್ತಿಲ್ಲ. ವೈದ್ಯರ ಕೊರತೆ ಇದ್ದು, ಕೆಲವು ವೈದ್ಯರು ನಿಗದಿತ ಸಮಯಕ್ಕೆ ಆಸ್ಪತ್ರೆಗೆ ಹಾಜರಾಗುತ್ತಿಲ್ಲ. ಕರ್ತವ್ಯದ ಬಗ್ಗೆ ಸಮಯಪ್ರಜ್ಞೆ ಹಾಗೂ ರೋಗಿಗಳ ಬಗ್ಗೆ ಕಾಳಜಿ ತೋರುತ್ತಿಲ್ಲ. ವೈದ್ಯರು ಕೇವಲ ಸಂಬಳಕ್ಕೆ ಸೀಮಿತರಾಗಿದ್ದಾರೆ ಎಂಬ ಭಾವನೆ ಸಾರ್ವಜನಿಕರಲ್ಲಿ ಮೂಡಿದೆ. ಆಸ್ಪತ್ರೆಯಲ್ಲಿ ಹಣದ ವ್ಯವಹಾರಗಳ ಬಗ್ಗೆಯೂ ಸಾರ್ವಜನಿಕರಿಂದ ದೂರುಗಳು ಕೇಳಿಬರುತ್ತಿವೆ ಎಂದು ಆರೋಪಿಸಿದರು.

ಆಸ್ಪತ್ರೆಯಲ್ಲಿ ಆಲ್ಟ್ರಾಸೌಂಡ್‌ ಸೌಲಭ್ಯವಿಲ್ಲ, ರೇಡಿಯಾಲಜಿಸ್ಟ್ ಕೊರತೆ ಇದೆ. ಸಮರ್ಪಕ ಅಂಬುಲೆನ್ಸ್ ಸೇವೆ ಹಾಗೂ ವೆಂಟಿಲೇಟರ್ ವ್ಯವಸ್ಥೆಯೂ ಇಲ್ಲದಿರುವುದು ಆತಂಕಕಾರಿ ಸಂಗತಿಯಾಗಿದೆ.

ತಾಲೂಕಿನ ಪ್ರಮುಖ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯೂ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸಬೇಕಿದೆ. ಇಂತಹ ಪರಿಸ್ಥಿತಿಯಲ್ಲಿ ಬಡ ಹಾಗೂ ಗ್ರಾಮೀಣ ಭಾಗದ ರೋಗಿಗಳು ಚಿಕಿತ್ಸೆಗಾಗಿ ಬೇರೆಡೆಗೆ ಅಲೆಯುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕ್ಷೇತ್ರದ ಶಾಸಕರು ಪ್ರಭಾವಿ ಸಚಿವರಾಗಿದ್ದರೂ, ಒಂದು ವರ್ಷದಿಂದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಪರಿಶೀಲಿಸಿಲ್ಲ. ಆಸ್ಪತ್ರೆಯ ಇಂದಿನ ದುಸ್ಥಿತಿಗೆ ಕ್ಷೇತ್ರದ ಶಾಸಕರು ಹಾಗೂ ಆರೋಗ್ಯ ವ್ಯವಸ್ಥೆಯ ಮೇಲ್ವಿಚಾರಣೆ ಹೊತ್ತಿರುವ ಜನಪ್ರತಿನಿಧಿಗಳೇ ನೇರ ಹೊಣೆಗಾರರಾಗಿದ್ದಾರೆ. ತಾಲೂಕು ಆಡಳಿತವೂ ಈ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ದೂರಿದರು.

ಸಾರ್ವಜನಿಕರ ಆರೋಗ್ಯದ ವಿಚಾರದಲ್ಲಿ ರಾಜಕೀಯಕ್ಕಿಂತ ಜನಹಿತ ಮುಖ್ಯ. ಆಸ್ಪತ್ರೆಯ ಅವ್ಯವಸ್ಥೆಯನ್ನು ಗಮನಿಸಿದರೂ ಸುಮ್ಮನಿರಲು ಸಾಧ್ಯವಿಲ್ಲ. ಈ ಕುರಿತು ಸಾರ್ವಜನಿಕರ ಪರವಾಗಿ ಬಿಜೆಪಿ ಹೋರಾಟಕ್ಕೆ ಮುಂದಾಗಲಿದೆ. ಶೀಘ್ರದಲ್ಲಿಯೇ ಸಾರ್ವಜನಿಕ ಆಸ್ಪತ್ರೆಯ ಮುಂಭಾಗ ಧರಣಿ ನಡೆಸಲಾಗುವುದು. ಆದರೂ ವ್ಯವಸ್ಥೆಯಲ್ಲಿ ಸುಧಾರಣೆ ಕಂಡುಬರದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಪ್ರಕಾಶ್ ಅಗಸನಹಳ್ಳಿ, ಪ್ರಧಾನ ಕಾರ್ಯದರ್ಶಿ ಜಾನಕಪ್ಪ ಒಡೆಯರ್, ಪ್ರಭು, ಸಂದೀಪ್ ಮಳಲಗದ್ದೆ, ವಿನಯ್ ಶೆರ್ವಿ, ಬಸವರಾಜ, ತುಕಾರಾಂ, ಮಂಜಣ್ಣ, ವಿಕಾಸ್, ಮಹೇಶ್, ನಾಗರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

----

ಫೋಟೊ: ೧೮ಕೆಪಿಸೊರಬ-೦೨

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ. ಜ್ಞಾನೇಶ್ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉಡುಪಿ: ಕಿಶೋರ ಯಕ್ಷಗಾನ ಸಂಭ್ರಮಕ್ಕೆ ಚಾಲನೆ
ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮಕೈಗೊಳ್ಳಿ