ಟೀಕೆ ಮಾಡುವವರಿಗೆ ನನ್ನ ಕ್ಷೇತ್ರದ ಅಭಿವೃದ್ಧಿ, ಸಾಧನೆಯೇ ಉತ್ತರ: ಪಿ.ಎಂ.ನರೇಂದ್ರಸ್ವಾಮಿ

KannadaprabhaNewsNetwork |  
Published : Jun 08, 2025, 01:34 AM IST
7ಕೆಎಂಎನ್ ಡಿ12 | Kannada Prabha

ಸಾರಾಂಶ

ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಒಂದು ನೀಲನಕ್ಷೆ ತಯಾರಿಸಿ, ಜನರಿಗೆ ಮೂಲ ಸೌಕರ್ಯಗಳನ್ನು ಒದಗಿಸಿಕೊಡುವ ಜವಾಬ್ದಾರಿ ನನ್ನ ಮೇಲಿದೆ. ಮುಂದಿನ ದಿನಗಳಲ್ಲಿ ಟೆಂಡರ್ ನಲ್ಲಿರುವ ಯೋಜನೆಗಳ ಕಾಮಗಾರಿ ಜೊತೆ ಬರುತ್ತೇನೆ. ಟೀಕೆ ಟಿಪ್ಪಣಿಗಳನ್ನು ಮಾಡುವವರಿಗೆ ನನ್ನ ಕ್ಷೇತ್ರದ ಅಭಿವೃದ್ಧಿ ಕೆಲಸಗಳು, ನನ್ನ ಸಾಧನೆಗಳು ಉತ್ತರವಾಗಲಿದೆ.

ಕನ್ನಡಪ್ರಭ ವಾರ್ತೆ ಹಲಗೂರು

ಕ್ಷೇತ್ರದ ಅಭಿವೃದ್ಧಿಗೆ ನಾನು ಹಗಲು ರಾತ್ರಿ ಎನ್ನದೆ ಶ್ರಮಿಸುತ್ತಿದ್ದೇನೆ. ಟೀಕೆ ಮಾಡುವವರಿಗೆ ನನ್ನ ಅಭಿವೃದ್ಧಿ, ಸಾಧನೆಯೇ ಉತ್ತರವಾಗಲಿದೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ , ಶಾಸಕ ಪಿ.ಎಂ.ನರೇಂದ್ರಸ್ವಾಮಿ ಹೇಳಿದರು.

ಹಲಗೂರು, ದಳವಾಯಿ ಕೋಡಿಹಳ್ಳಿ, ಬ್ಯಾಡರಹಳ್ಳಿ, ತೊರೆಕಾಡನಹಳ್ಳಿ ,ಎತ್ತಂಬಾಡಿ, ಡಿ. ಹಲಸಹಳ್ಳಿ, ಅಗಸನಪುರ, ಹುಸ್ಕೂರು, ಹಾಡ್ಲಿ, ಗ್ರಾಪಂಗೆ ಬರುವ ಹಲವು ಗ್ರಾಮಗಳಲ್ಲಿ ಎಸ್ಟಿಟಿಪಿ ಯೋಜನೆ ಅಡಿಯಲ್ಲಿ ಮಂಜೂರಾಗಿದ್ದ ಸುಮಾರು 5 ಕೋಟಿ ರು. ಹೆಚ್ಚು ವೆಚ್ಚದ ಪರಿಶಿಷ್ಟ ಜಾತಿ ಕಾಲೋನಿ ರಸ್ತೆ ಅಭಿವೃದ್ಧಿ ಕಾಮಗಾರಿ ಮತ್ತು ಗ್ರಾಮಗಳ ರಸ್ತೆ ಸಂಪರ್ಕ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಒಂದು ನೀಲನಕ್ಷೆ ತಯಾರಿಸಿ, ಜನರಿಗೆ ಮೂಲ ಸೌಕರ್ಯಗಳನ್ನು ಒದಗಿಸಿಕೊಡುವ ಜವಾಬ್ದಾರಿ ನನ್ನ ಮೇಲಿದೆ. ಮುಂದಿನ ದಿನಗಳಲ್ಲಿ ಟೆಂಡರ್ ನಲ್ಲಿರುವ ಯೋಜನೆಗಳ ಕಾಮಗಾರಿ ಜೊತೆ ಬರುತ್ತೇನೆ. ಟೀಕೆ ಟಿಪ್ಪಣಿಗಳನ್ನು ಮಾಡುವವರಿಗೆ ನನ್ನ ಕ್ಷೇತ್ರದ ಅಭಿವೃದ್ಧಿ ಕೆಲಸಗಳು, ನನ್ನ ಸಾಧನೆಗಳು ಉತ್ತರವಾಗಲಿದೆ ಎಂದರು.

ಈ ವೇಳೆ ಮನ್ಮುಲ್ ನಿರ್ದೇಶಕರಾದ ಕೃಷ್ಣೆಗೌಡ, ವಿಶ್ವಾಸ್, ಮಳವಳ್ಳಿ ತಾಲೂಕು ಕಾಂಗ್ರೆಸ್ ಅಧ್ಯಕ್ಷ ಸಿ.ಪಿ.ರಾಜು, ಗ್ರಾಪಂ ಅಧ್ಯಕ್ಷೆ ಶಶಿಕಲಾ ಶ್ರೀನಿವಾಸಚಾರಿ, ದಳವಾಯಿ ಕೋಡಿಹಳ್ಳಿ ಗ್ರಾಪಂ ಅಧ್ಯಕ್ಷೆ ಪಾರ್ವತಿ, ಪಿಎಲ್ ಡಿ ಬ್ಯಾಂಕಿನ ನಿರ್ದೇಶಕಿ ಶ್ವೇತ ಕುಮಾರ್, ಮುಖಂಡರಾದ ಜಿಪಂ ಮಾಜಿ ಸದಸ್ಯ ಚಂದ್ರಕುಮಾರ್, ಕುಂತೂರ್ ಗೋಪಾಲ್, ಎಚ್.ವಿ.ರಾಜು, ಕೆಂಪಯ್ಯನ ದೊಡ್ಡಿ ಮೋಹನ್ ಕುಮಾರ್, ಜೀವನ್ ಕುಮಾರ್, ರವೀಶ, ಪದ್ಮನಾಭ, ಪ್ರಕಾಶ್, ಕುಮಾರ್, ಮಾದೇಗೌಡ, ದೇವಿರಳ್ಳಿ ಕುಮಾರ್, ಶಿವನಂಜೇಗೌಡ, ಮರಿಸ್ವಾಮಿ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!