ಕಾರ್ಮಿಕ ವಿರೋಧಿ 4 ಸಂಹಿತೆ ರದ್ದಾಗಲಿ

KannadaprabhaNewsNetwork |  
Published : Jul 10, 2025, 12:46 AM IST
ಕಂಪ್ಲಿಯ ಡಾ. ಬಿ. ಆರ್ ಅಂಬೇಡ್ಕರ್ ವೃತ್ತದ ಬಳಿ ಅಸಂಘಟಿತ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕರ ಸಂಘಟನೆಗಳ ಜಂಟಿ ಸಮಿತಿ (ಜೆಸಟಿಯು) ಹಾಗೂ ಸಂಯುಕ್ತ ಹೋರಾಟ ಕರ್ನಾಟಕ (ಎಸ್ ಕೆ ಎಂ) ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆ ಬುಧವಾರ ಜರುಗಿತು.  | Kannada Prabha

ಸಾರಾಂಶ

ಕಂಪ್ಲಿ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ಬಳಿ ಅಸಂಘಟಿತ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕರ ಸಂಘಟನೆಗಳ ಜಂಟಿ ಸಮಿತಿ (ಜೆಎಸ್‌ಟಿಯು) ಹಾಗೂ ಸಂಯುಕ್ತ ಹೋರಾಟ ಕರ್ನಾಟಕ (ಎಸ್‌ಕೆಎಂ) ಸಹಯೋಗದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಕಂಪ್ಲಿ: ಪಟ್ಟಣದ ಡಾ. ಬಿ. ಆರ್ ಅಂಬೇಡ್ಕರ್ ವೃತ್ತದ ಬಳಿ ಅಸಂಘಟಿತ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕರ ಸಂಘಟನೆಗಳ ಜಂಟಿ ಸಮಿತಿ (ಜೆಎಸ್‌ಟಿಯು) ಹಾಗೂ ಸಂಯುಕ್ತ ಹೋರಾಟ ಕರ್ನಾಟಕ (ಎಸ್‌ಕೆಎಂ) ಸಹಯೋಗದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಕರ್ನಾಟಕ ಜನ ಶಕ್ತಿ ರಾಜ್ಯ ಕಾರ್ಯದರ್ಶಿ ಕರಿಯಪ್ಪ ಗುಡಿಮನಿ ಮಾತನಾಡಿ, 8 ಗಂಟೆ ಕೆಲಸದ ಅವಧಿ, ಕಾಯಂ ಕೆಲಸ, ಕೆಲಸಕ್ಕೆ ತಕ್ಕ ವೇತನ, ಸುರಕ್ಷತೆ, ಮುಷ್ಕರದ ಹಕ್ಕು, ಸಂಘ ಕಟ್ಟುವ ಹಕ್ಕು, ಇನ್ನಿತರ ಹಕ್ಕುಗಳನ್ನು ಇಲ್ಲವಾಗಿಸಿ ಕಾರ್ಮಿಕರನ್ನು ಗುಲಾಮರನ್ನಾಗಿಸಲು ಕೇಂದ್ರ ಸರ್ಕಾರ ಕಾರ್ಪೊರೇಟ್ ಬಂಡವಾಳದ ಪರ ರೂಪಿಸಿರುವ ಕಾರ್ಮಿಕ ವಿರೋಧಿ 4 ಸಂಹಿತೆಗಳನ್ನು ರದ್ದುಪಡಿಸಬೇಕು. ಇವತ್ತಿನ ಬೆಲೆಗಳಿಗೆ ಅನುಗುಣವಾಗಿ ಎಲ್ಲ ಸಂಘಟಿತ, ಅಸಂಘಟಿತ, ಗುತ್ತಿಗೆ ಕಾರ್ಮಿಕರು ಮತ್ತು ಸ್ತ್ರೀ ನೌಕರರಿಗೂ ರಾಷ್ಟ್ರವ್ಯಾಪಿ ₹26 ಸಾವಿರ ಹಾಗೂ ರಾಜ್ಯವ್ಯಾಪಿ ₹36 ಸಾವಿರ ಕನಿಷ್ಠ ವೇತನ ನಿಗದಿಪಡಿಸಬೇಕು. ಗುತ್ತಿಗೆ, ಹೊರಗುತ್ತಿಗೆ, ನಿಗದಿತ ಅವಧಿಯ ಉದ್ಯೋಗ, ಅಪ್ರೆಂಟಿಸ್, ಟ್ರೈನಿ, ನ್ಯಾಪ್ಸ್ ಮುಂತಾದ ಹೆಸರಿನಲ್ಲಿ ಕಾರ್ಮಿಕರ ನೇಮಕ ನಿಲ್ಲಿಸಬೇಕು. ಗುತ್ತಿಗೆ, ಮುಂತಾದ ಕಾರ್ಮಿಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ತಕ್ಷಣ ಜಾರಿ ಮಾಡಬೇಕು. ಕಟ್ಟಡ ಕಾರ್ಮಿಕರು, ಆಟೋ-ಟ್ಯಾಕ್ಸಿ ಚಾಲಕರು, ಮನೆಕೆಲಸಗಾರರು. ಗಿಗ್ ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು, ಟೈಲರ್‌ಗಳು, ಫೋಟೋಗ್ರಾಫರ್ಸ್, ಮೆಕಾನಿಕ್ಸ್, ಬೀಡಿ-ಅಗರಬತ್ತಿ, ಹೆಂಚು ಕಾರ್ಮಿಕರು, ಮೀನುಗಾರರು, ಇನ್ನಿತರ ಎಲ್ಲ ಅಸಂಘಟಿತ ಕಾರ್ಮಿಕರು ಮತ್ತು ಕೃಷಿ-ತೋಟ ಕಾರ್ಮಿಕರು ಸೇರಿದಂತೆ ಎಲ್ಲ ವಿಭಾಗದ ಕಾರ್ಮಿಕರಿಗೆ ಕನಿಷ್ಠ ಮಾಸಿಕ ₹9 ಸಾವಿರ ಪಿಂಚಣಿ ಹಾಗೂ ಸಾಮಾಜಿಕ ಭದ್ರತೆ ಖಾತ್ರಿಪಡಿಸಬೇಕು ಎಂಬುದೂ ಸೇರಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.

ಗ್ರಾಪಂ ನೌಕರರ ಸಂಘದ ಜಿಲ್ಲಾ ಸಹ ಕಾರ್ಯದರ್ಶಿ ರಾಜಸಾಬ್, ಸಿಐಟಿಯು ಬಂಡಿ ಬಸವರಾಜ್, ವಸಂತರಾಜ್ ಕಹಳೆ, ಐ. ಹೊನ್ನೂರು ಸಾಬ್, ಆರ್. ನಾಗರಾಜ್, ಚಾಂದ್ ಬಾಷಾ, ತಿಪ್ಪಮ್ಮ, ಉಮಾದೇವಿ, ಅನುರಾಧಾ, ಮಾರುತಿ ಹಾಗೂ ಆಶಾ, ಅಂಗನವಾಡಿ, ಬಿಸಿಯೂಟ ನೌಕರರಿದ್ದರು.

PREV

Recommended Stories

ತಿಮರೋಡಿ ವಿರುದ್ಧದ ಕೇಸ್‌ಗೆ ಹೈಕೋರ್ಟ್‌ ತಡೆ
ಒತ್ತಡ ಹೇರಿ ಶಾಸಕರಿಂದ ರಸ್ತೆ ಅಗಲೀಕರಣ