ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಂಘದ ಆದ್ಯತೆ

KannadaprabhaNewsNetwork |  
Published : Feb 04, 2026, 01:30 AM IST
ಫೋಟೋ: 3 ಹೆಚ್‌ಎಸ್‌ಕೆ 1ಹೊಸಕೋಟೆಯಲ್ಲಿ ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಶರಣ ಮೇಳದಲ್ಲಿ ಪ್ರತಿಬಾವಂತ ವಿದ್ಯಾರ್ಥಿಗಳಿಗೆ ಸಂಘದ ಅದ್ಯಕ್ಷ ಡಿ.ಎಸ್.ರಾಜ್‌ಕುಮಾರ್ ಪ್ರತಿಬಾ ಪುರಸ್ಕಾರ ನೀಡಿ ಗೌರವಿಸಿದರು. | Kannada Prabha

ಸಾರಾಂಶ

ಹೊಸಕೋಟೆ: ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘ ಕಳೆದ 15ವರ್ಷಗಳಿಂದ ಸಾಮಾಜಿಕ ಕಳಕಳಿ ಜೊತೆಗೆ ಸಮುದಾಯದ ಮಕ್ಕಳ ಶೈಕ್ಷಣಿಕ ಪ್ರಗತಿಗೆಪ್ರತಿಭಾ ಪುರಸ್ಕಾರವನ್ನು ಶರಣ ಮೇಳದ ಹೆಸರಲ್ಲಿ ಆಚರಿಸುತ್ತಿದ್ದೇವೆ ಎಂದು ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಡಿ.ಎಸ್.ರಾಜ್ ಕುಮಾರ್ ತಿಳಿಸಿದರು

ಹೊಸಕೋಟೆ: ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘ ಕಳೆದ 15ವರ್ಷಗಳಿಂದ ಸಾಮಾಜಿಕ ಕಳಕಳಿ ಜೊತೆಗೆ ಸಮುದಾಯದ ಮಕ್ಕಳ ಶೈಕ್ಷಣಿಕ ಪ್ರಗತಿಗೆಪ್ರತಿಭಾ ಪುರಸ್ಕಾರವನ್ನು ಶರಣ ಮೇಳದ ಹೆಸರಲ್ಲಿ ಆಚರಿಸುತ್ತಿದ್ದೇವೆ ಎಂದು ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಡಿ.ಎಸ್.ರಾಜ್ ಕುಮಾರ್ ತಿಳಿಸಿದರು.

ನಗರದ ಎಸ್‌ಜೆಆರ್‌ಎಸ್ ಶಾಲೆಯಲ್ಲಿ ಶ್ರೀ ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘ ಆಯೋಜಿಸಿದ್ದ ಶರಣ ಮೇಳ ಮತ್ತು ಎಸ್‌ಎಸ್‌ಎಲ್‌ಸಿ ಹಾಗು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವೀರಶೈವ ನೌಕರರ ಕ್ಷೇಮಾಭಿವೃದ್ದಿ ಸಂಘವು ದಿ.ಜಗದೀಶ್ ಕೆಂಗನಾಳ್ ಅವರ ಇಚ್ಚೆಯಂತೆ ೬ ಜನರಿಂದ ಪ್ರಾರಂಭಗೊಂಡು 16ನೇ ವರ್ಷಕ್ಕೆ ಕಾಳಿಟ್ಟಿದ್ದು ೬೫೦ಕ್ಕೂ ಹೆಚ್ಚಿನ ಸದಸ್ಯರನ್ನು ಹೊಂದಿದೆ. ಸಂಘದ ಮೂಲಕ ಸಮುದಾಯದ ಮಕ್ಕಳಿಗೆ ಶೈಕ್ಷಣಿಕ ಪ್ರಗತಿಗೆ ಉತ್ತೇಜನ ನೀಡಲಾಗುತ್ತಿದೆ. ಸದಸ್ಯರು ಸಂಘದ ಅಭಿವೃದ್ದಿಗೆ ಸಹಕಾರ ನೀಡುತ್ತಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಸಂಘಟಿತರಾಗಿ ಸಮುದಾಯದ ಅಭಿವೃದ್ಧಿಗೆ ಕೈ ಜೋಡಿಸಬೇಕು. ಪ್ರತಿ ವರ್ಷ ಕಾರ್ಯಕ್ರಮಕ್ಕೆ ಯಾರಿಂದಲೂ ನೆರವಿನ ಹಸ್ತ ಪಡೆಯದೆ ಸಂಘದ ಹಣದಿಂದಲೆ ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದರು.

ನಂದಗುಡಿ ಗ್ರಾಪಂ ಸದಸ್ಯ ವೀರರಾಜು ಮಾತನಾಡಿ, ಪೋಷಕರು ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ಕೊಡುವ ಮೂಲಕ ಸಮಾಜದ ಸತ್ಪ್ರಜೆಗಳಾಗಿ ರೂಪುಗೊಳ್ಳುವಂತೆ ಮಾಡಬೇಕು. ವೀರಶೈವ ಸಮುದಾಯದಲ್ಲಿ ಎಲೆಮರೆ ಕಾಯಿಯಂತೆ ಸಮುದಾಯದ ಅಭಿವೃದ್ಧಿಗೆ ಕೆಲಸ ಮಾಡುವವರು ಸಾಕಷ್ಟು ಜನರಿದ್ದಾರೆ. ಡಿಎಸ್.ರಾಜ್‌ಕುಮಾರ್ ಅವರು ಸಹ ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರ ಮಕ್ಕಳ ಶೈಕ್ಷಣಿಕ ಪ್ರಗತಿ ಜೊತೆಗೆ ಹಲವಾರು ರೀತಿಯಲ್ಲಿ ಸಮಾಜದ ಅಭಿವೃದ್ಧಿಗೆ ನಿರಂತರ ಶ್ರಮಿಸುತ್ತಿದ್ದಾರೆ. ಆದ್ದರಿಂದ ಸಮುದಾಯ ಸಂಘಟಿತರಾಗಿ ಪರಸ್ಪರ ಅಭಿವೃದ್ಧಿ ಹೊಂದಬೇಕು ಎಂದರು.

ನಗರಸಭೆ ಸದಸ್ಯೆ ಗಾಯತ್ರಿ ವಿಜಯ್ ಕುಮಾರ್, ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘದ ಉಪಾಧ್ಯಕ್ಷ ನಾಗರಾಜ್, ಕಾರ್ಯದರ್ಶಿ ಕುಮಾರ್, ಸಂಘದ ಹಿರಿಯ ಸದಸ್ಯರಾದ ಚಂದ್ರಶೇಖರ್ ಆರಾದ್ಯ, ಮಲ್ಲೆಶ್, ಬನಹಳ್ಳಿ ಶಿವಣ್ಣ, ತಾವರೆಕೆರೆ ನಂದಕುಮಾರ್, ಜನಪದರು ಶಿವಣ್ಣ, ಹಿರೇಮಠ್ ಸೇರಿದಂತೆ ಸಂಘದ ಸದಸ್ಯರು ಹಾಜರಿದ್ದರು.

ಫೋಟೋ: 1 ಹೆಚ್‌ಎಸ್‌ಕೆ 4

ಹೊಸಕೋಟೆಯಲ್ಲಿ ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಮ್ಮಿಕೊಂಡಿದ್ದ ಶರಣ ಮೇಳದಲ್ಲಿ ಪ್ರತಿಭಾ ವಿದ್ಯಾರ್ಥಿಗಳಿಗೆ ಸಂಘದ ಅಧ್ಯಕ್ಷ ಡಿ.ಎಸ್.ರಾಜ್‌ಕುಮಾರ್ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪುನೀತರಾಜಕುಮಾರ ಪುತ್ಥಳಿ ಅನಾವರಣ
ಬೆಂಗಳೂರು ನಗರದಲ್ಲಿ ಮತ್ತೊಂದು ಮೇಲ್ಸೇತುವೆ ನಿರ್ಮಾಣ