ಅಖಂಡ ಜಿಲ್ಲೆಯ ಅಭಿವೃದ್ಧಿಯೇ ಮೂಲ ಗುರಿ: ತುಕಾರಾಂ

KannadaprabhaNewsNetwork |  
Published : Jul 01, 2025, 12:47 AM IST
ಹಗರಿಬೊಮ್ಮನಹಳ್ಳಿ ವಾಲ್ಮೀಕಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸಂಸದ ಈ.ತುಕಾರಾಂ ಪುರಸ್ಕರಿಸಿದರು. | Kannada Prabha

ಸಾರಾಂಶ

ವಾಲ್ಮೀಕಿ ಭವನದ ೨ನೇ ಮಹಡಿ ಪೂರ್ಣಗೊಳಿಸಲು ಕ್ರಿಯಾಯೋಜನೆ ಅನ್ವಯ ಅನುದಾನ ಒದಗಿಸಲಾಗುವುದು.

ವಾಲ್ಮೀಕಿ ಸಮಾಜದಿಂದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಸಂಸದ

ಕನ್ನಡಪ್ರಭ ವಾರ್ತೆ ಹಗರಿಬೊಮ್ಮನಹಳ್ಳಿವಾಲ್ಮೀಕಿ ಭವನದ ೨ನೇ ಮಹಡಿ ಪೂರ್ಣಗೊಳಿಸಲು ಕ್ರಿಯಾಯೋಜನೆ ಅನ್ವಯ ಅನುದಾನ ಒದಗಿಸಲಾಗುವುದು ಎಂದು ಸಂಸದ ಈ.ತುಕಾರಾಂ ಹೇಳಿದರು.ಪಟ್ಟಣದ ವಾಲ್ಮೀಕಿ ಭವನದಲ್ಲಿ ನಡೆದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು. ಪ್ರತಿಯೊಂದು ಸಮಾಜಗಳು ಶೈಕ್ಷಣಿಕ ಪ್ರಗತಿಗೆ ಆಧ್ಯತೆ ನೀಡಬೇಕು. ಸಂಸದನಾದ ನಂತರ ಅಖಂಡ ಜಿಲ್ಲೆಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಪ್ರತಿ ತಾಲೂಕುಗಳ ಅಭಿವೃದ್ಧಿಯ ಹಿನ್ನೆಲೆಯಲ್ಲಿ ದಿಶಾ ಸಭೆಗಳನ್ನು ಮಾಡಲಾಗಿದೆ. ವಿಶೇಷವಾಗಿ ಶಿಕ್ಷಣ, ರೈಲ್ವೆ, ಸಾರಿಗೆ, ಕೃಷಿಗೆ ಆದ್ಯತೆ ನೀಡಲಾಗುವುದು ಎಂದರು. ಶಾಸಕ ಕೆ.ನೇಮರಾಜ ನಾಯ್ಕ ಉದ್ಘಾಟಿಸಿ, ವಾಲ್ಮೀಕಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳು ಉತ್ತಮ ಸ್ಥಾನಕ್ಕೇರಿ ತಮ್ಮ ಪೋಷಕರಿಗೆ ಹೆಸರು ತರುವ ಕೆಲಸ ಮಾಡಲಿ. ಭವನದ ಮುಂದುವರಿದ ಕಾಮಗಾರಿಗೆ ₹೨೫ ಲಕ್ಷ ಅನುದಾನ ನೀಡಲಾಗುವುದು ಎಂದರು.ರಾಜನಳ್ಳಿ ವಾಲ್ಮೀಕಿ ಪೀಠದ ಡಾ. ಪ್ರಸನ್ನಾನಂದಪುರಿ ಸ್ವಾಮೀಜಿ ಸಾನ್ನಿಧ್ಯವಹಿಸಿ ಮಾತನಾಡಿ, ನಾಡು ಕಟ್ಟವಲ್ಲಿ ಸಮಾಜದ ಕೊಡುಗೆ ಅನನ್ಯ. ಮಕ್ಕಳು ಶಿಕ್ಷಣದಲ್ಲಿ ಪ್ರತಿಭಾವಂತರಾಗುವುದರ ಜೊತೆಗೆ ಸಂಸ್ಕಾರ ಮತ್ತು ಮೌಲ್ಯಯುತ ಶಿಕ್ಷಣ ಕಲಿಯಬೇಕು. ಹೆತ್ತ ತಂದೆ-ತಾಯಿಗಳ ಪಾಲನೆ ಪೋಷಣೆ ಮಾಡಬೇಕು ಎಂದರು.ಸಂಡೂರು ಶಾಸಕಿ ಅನ್ನಪೂರ್ಣ ತುಕಾರಾಂ ಮಾತನಾಡಿದರು. ವಾಲ್ಮೀಕಿ ನೌಕರರ ಸಂಘದ ಅಧ್ಯಕ್ಷ ಸಿದ್ರಾಮಪ್ಪ ಪ್ರಾಸ್ತಾವಿಕ ಮಾತನಾಡಿದರು. ಇದೇ ವೇಳೆ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಶೇ.೯೦ ಅಂಕ ಪಡೆದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಾಲ್ಮೀಕಿ ಮಹಾಸಭಾದ ತಾಲೂಕು ಅಧ್ಯಕ್ಷ ಟಿ.ವೆಂಕೋಬಪ್ಪ, ಸರ್ಕಾರಿ ನೌಕರರ ಸಂಘದ ನಿರ್ದೇಶಕ ಡಾ. ಸೂರಪ್ಪ, ಸಮಾಜದ ಮಾಜಿ ಅಧ್ಯಕ್ಷ ಡಿಶ್ ಮಂಜುನಾಥ, ಪುರಸಭೆ ಉಪಾಧ್ಯಕ್ಷೆ ಅಂಬಿಕಾ ದೇವೇಂದ್ರಪ್ಪ, ಸದಸ್ಯರಾದ ಪವಾಡಿ ಹನುಮಂತಪ್ಪ, ಜೋಗಿ ಹನುಮಂತಪ್ಪ, ಆರ್‌ಎಸ್‌ಎಸ್‌ಎನ್ ಅಧ್ಯಕ್ಷ ದಾದಮ್ಮನವರ ಬಸವರಾಜ, ಗ್ರಾಪಂ ಸದಸ್ಯ ಸೆರೆಗಾರ ಹುಚ್ಚಪ್ಪ, ಪ್ರಾಂಶುಪಾಲರಾದ ಯಮನೂರಸ್ವಾಮಿ, ಟಿ.ರಾಮಪ್ಪ, ಮುಖಂಡರಾದ ಕನ್ನಿಹಳ್ಳಿ ಚಂದ್ರಶೇಖರ, ಬ್ಯಾಟಿ ನಾಗರಾಜ, ನೌಕರರ ಸಂಘದ ನಿರ್ದೇಶಕರಾದ ಬಿ.ಹಾಲಪ್ಪ, ಟಿ.ಅಡಿವೆಪ್ಪ, ಕೆ.ಬಾಬು, ಟಿ.ಮಾರುತಿ, ಎನ್.ಸುರೇಶ್, ಮಾಳಗಿ ಕವಿತಾ, ಮಲ್ಲಿಕಾರ್ಜುನ, ವಟ್ಟಮ್ಮನಹಳ್ಳಿ ಮಲ್ಲಪ್ಪ ಇದ್ದರು. ಸರ್ಕಾರಿ ನೌಕರರ ಸಂಘದ ತಾಲೂಕು ಕಾರ್ಯದರ್ಶಿ ಟಿ.ಸೋಮಶೇಖರ, ರಾಮಕೃಷ್ಣ, ಮೋಹನ ಅಣಜಿ ನಿರ್ವಹಿಸಿದರು.

PREV

Recommended Stories

ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಎಸ್ಸೆಸ್ಸೆಲ್ಸಿ- ಪಿಯು : ಈ ವರ್ಷವೂ 3 ಪರೀಕ್ಷೆ ಉದ್ದೇಶ ಫೇಲ್‌