ತರೀಕೆರೆಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಈ ಯೋಜನೆಗಳಿಂದ ಅರ್ಹ ಕುಟುಂಬ ಗಳಿಗೆ ಆರ್ಥಿಕವಾಗಿ ನೆರವಾಗಿದ್ದು, ಜನರ ಜೀವನಮಟ್ಟ ಸುಧಾರಣೆಗೆ ಸಹಕಾರಿಯಾಗಿದೆ ಎಂದು ಶಾಸಕ ಜಿ.ಎಚ್. ಶ್ರೀನಿವಾಸ್ ಹೇಳಿದರು.
ಗ್ರಾಪಂ,ವಾರ್ಡ್ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರ ಕಾರ್ಯಾಗಾರ ಉದ್ಘಾಟನೆ
ಕನ್ನಡಪ್ರಭ ವಾರ್ತೆ, ತರೀಕೆರೆಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಈ ಯೋಜನೆಗಳಿಂದ ಅರ್ಹ ಕುಟುಂಬ ಗಳಿಗೆ ಆರ್ಥಿಕವಾಗಿ ನೆರವಾಗಿದ್ದು, ಜನರ ಜೀವನಮಟ್ಟ ಸುಧಾರಣೆಗೆ ಸಹಕಾರಿಯಾಗಿದೆ ಎಂದು ಶಾಸಕ ಜಿ.ಎಚ್. ಶ್ರೀನಿವಾಸ್ ಹೇಳಿದರು.ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಗ್ರಾಪಂ ಮತ್ತು ವಾರ್ಡ್ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಶಕ್ತಿ ಯೋಜನೆಯಿಂದ ಮಹಿಳೆಯರ ಪ್ರಯಾಣ ಹೆಚ್ಚಾಗಿ ಇದರಿಂದ ಆರ್ಥಿಕ ವಹಿವಾಟಿಗೂ ಉತ್ತೇಜನ ದೊರೆತಿದೆ. ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಒಂದಲ್ಲೊಂದು ರೀತಿಯಲ್ಲಿ ಜನರಿಗೆ ನೆರವು ತಲುಪುತ್ತಿದೆ. ತರೀಕೆರೆ ತಾಲೂಕಿನಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಸುಮಾರು 33 ಸಾವಿರ ಫಲಾನುಭವಿಗಳು ಸೌಲಭ್ಯ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಶಿವಾನಂದ ಸ್ವಾಮಿ ಮಾತನಾಡಿ ಸಮಿತಿ ಸದಸ್ಯರು ಪ್ರತಿ ಮನೆಗೆ ಭೇಟಿ ನೀಡಿ ಸರ್ಕಾರದ ಯೋಜನೆಗಳ ಕುರಿತು ಮಾಹಿತಿ ನೀಡಬೇಕು. ಅರ್ಹ ಫಲಾನುಭವಿಗಳಿಗೆ ಸೌಲಭ್ಯ ದೊರೆಯು ವಂತೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದರು.ತಾಲೂಕು ಸಮಿತಿ ಅಧ್ಯಕ್ಷೆ ಹೇಮಲತಾ ರೇವಣ್ಣ ಮಾತನಾಡಿ ಗ್ರಾಪಂ ಹಾಗೂ ವಾರ್ಡ್ ಮಟ್ಟದಲ್ಲಿ ಸಮಿತಿಗಳನ್ನು ರಚಿಸಲಾಗಿದೆ. ಅರ್ಹ ಪ್ರತಿಯೊಬ್ಬರಿಗೂ ಯೋಜನೆಗಳ ಸೌಲಭ್ಯ ತಲುಪಿಸುವುದು ಸರ್ಕಾರದ ಉದ್ದೇಶ ಎಂದು ಹೇಳಿದರು.ತಾಪಂ ಕಾರ್ಯನಿರ್ವಹಣಾಧಿಕಾರಿ ಡಾ. ಆರ್. ದೇವೇಂದ್ರಪ್ಪ ಮಾತನಾಡಿ ಸಮಿತಿ ಸದಸ್ಯರು ಗ್ರಾಪಂ ಪಿಡಿಒಗಳೊಂದಿಗೆ ಸಮನ್ವಯ ಸಾಧಿಸಿ ಯೋಜನೆಗಳ ಅನುಷ್ಠಾನಕ್ಕೆ ಶ್ರಮಿಸಬೇಕು. ಪ್ರತಿ ತಿಂಗಳು ಸಭೆ ನಡೆಸಿ ಪ್ರಗತಿ ಹಾಗೂ ಸಮಸ್ಯೆಗಳ ಕುರಿತು ಚರ್ಚಿಸಬೇಕು ಎಂದು ಸಲಹೆ ನೀಡಿದರು.ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಉಪಾಧ್ಯಕ್ಷ ಸಮಿವುಲ್ಲಾ ಶರೀಫ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.