ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ

KannadaprabhaNewsNetwork |  
Published : Oct 07, 2024, 01:38 AM IST
6ಶಿರಾ4: ಶಿರಾ ತಾಲೂಕಿನ ಗೌಡಗೆರೆ ಹೋಬಳಿಯ ತಾವರೆಕೆರೆ ಗ್ರಾಮದಲ್ಲಿ ಭಾನುವಾರ ನಡೆದ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ ಗೌಡ ಚಾಲನೆ ನೀಡಿದರು. ಮಧುಗಿರಿ ವಲಯ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಕೆ.ಮಂಜುನಾಥ್ ಸೇರಿದಂತೆ ಹಲವರು ಹಾಜರಿದ್ದರು. | Kannada Prabha

ಸಾರಾಂಶ

ಶಿರಾ: ಭ್ರಷ್ಟಾಚಾರದಲ್ಲಿ ತೊಡಗಿರುವ ಕಾಂಗ್ರೆಸ್ ಸರ್ಕಾರ ಐದು ವರ್ಷ ಪೂರ್ಣಾವಧಿ ಅಧಿಕಾರ ನಡೆಸುವುದಿಲ್ಲ, ಈ ನಿಟ್ಟಿನಲ್ಲಿ ಬಿಜೆಪಿ ಪಕ್ಷ ಮತ್ತಷ್ಟು ಬಲ ಹೆಚ್ಚಿಸಿಕೊಂಡು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರುವ ಸಂಕಲ್ಪದೊಂದಿಗೆ ಕಾರ್ಯಕರ್ತರು ಹೆಚ್ಚು ಸಕ್ರಿಯವಾಗಿ ಸದಸ್ಯತ್ವ ನೋಂದಣಿ ಮಾಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ. ಗೌಡ ಹೇಳಿದರು.

ಶಿರಾ: ಭ್ರಷ್ಟಾಚಾರದಲ್ಲಿ ತೊಡಗಿರುವ ಕಾಂಗ್ರೆಸ್ ಸರ್ಕಾರ ಐದು ವರ್ಷ ಪೂರ್ಣಾವಧಿ ಅಧಿಕಾರ ನಡೆಸುವುದಿಲ್ಲ, ಈ ನಿಟ್ಟಿನಲ್ಲಿ ಬಿಜೆಪಿ ಪಕ್ಷ ಮತ್ತಷ್ಟು ಬಲ ಹೆಚ್ಚಿಸಿಕೊಂಡು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರುವ ಸಂಕಲ್ಪದೊಂದಿಗೆ ಕಾರ್ಯಕರ್ತರು ಹೆಚ್ಚು ಸಕ್ರಿಯವಾಗಿ ಸದಸ್ಯತ್ವ ನೋಂದಣಿ ಮಾಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ. ಗೌಡ ಹೇಳಿದರು.

ತಾಲೂಕಿನ ಗೌಡಗೆರೆ ಹೋಬಳಿಯ ತಾವರೆಕೆರೆ ಗ್ರಾಮದಲ್ಲಿ ಭಾನುವಾರ ನಡೆದ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಕೇಂದ್ರ ಸರ್ಕಾರದ ಜನಪರ ಮತ್ತು ರೈತ ಪರ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಮೂಲಕ ಬಿಜೆಪಿ ಸದಸ್ಯತ್ವ ನೋಂದಣಿಯಲ್ಲಿ ಪಾಲ್ಗೊಂಡು ಅತಿ ಹೆಚ್ಚು ನೋಂದಣಿ ಮಾಡಿಸುವಂತೆ ಗ್ರಾಮದ ಯುವಕರಿಗೆ ಶಕ್ತಿ ತುಂಬುವಂತ ಕೆಲಸವನ್ನು ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರು ಮಾಡುವ ಮೂಲಕ ರಾಜ್ಯದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರ ಸಂಖ್ಯೆ ಹೆಚ್ಚಾಗುವಂತೆ ನೋಡಿಕೊಳ್ಳಬೇಕು ಎಂದರು.

ಮಧುಗಿರಿ ವಲಯ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಕೆ.ಮಂಜುನಾಥ್ ಮಾತನಾಡಿ, ಬಿಜೆಪಿ ಪಕ್ಷಕ್ಕೆ ಕಾರ್ಯಕರ್ತರೇ ದೊಡ್ಡ ಶಕ್ತಿ, ನಿಷ್ಠಾವಂತ ಕಾರ್ಯಕರ್ತರು ಬಿಜೆಪಿ ಪಕ್ಷದ ಬೆನ್ನೆಲುಬು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನಪ್ರಿಯ ಕಾರ್ಯಕ್ರಮಗಳ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸಿ ಬಿಜೆಪಿ ಪಕ್ಷಕ್ಕೆ ಸದಸ್ಯರಾಗುವಂತೆ ಮನವೊಲಿಸಬೇಕು. ಇಂದಿನಿಂದಲೇ ಬಿಜೆಪಿ ಕಾರ್ಯಕರ್ತರು ಹೆಚ್ಚು ಕ್ರಿಯಾಶೀಲರಾಗಿ ಪಕ್ಷವನ್ನು ಬಲಪಡಿಸಬೇಕು ಎಂದರು.

ಶಿರಾ ಗ್ರಾಮಾಂತರ ಮಂಡಲ ಅಧ್ಯಕ್ಷ ಹೊನ್ನಗೊಂಡನಹಳ್ಳಿ ಚಿಕ್ಕಣ್ಣ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮುದಕ್ಕನಹಳ್ಳಿ ಗೊಲ್ಲರಹಟ್ಟಿ ಗೌಡಪ್ಪ, ತಾವರೆಕೆರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಶಿವು ಸ್ನೇಹಪ್ರಿಯ, ಗ್ರಾಪಂ ಸದಸ್ಯರಾದ ಈಶ್ವರಪ್ಪ, ಮಧುಸೂಧನ್ ಯಾದವ್, ರಾಜು, ಸಂತೆಪೇಟೆ ನಟರಾಜು, ಮಾರನಗೆರೆ ಕೃಷ್ಣಪ್ಪ, ಡಿ.ರಾಮಪ್ಪ, ಸಿದ್ದೇಶ್, ಕೃಷ್ಣಪ್ಪ, ಗ್ರಾಪಂ ಮಾಜಿ ಅಧ್ಯಕ್ಷ ಈರಣ್ಣ ಸೇರಿದಂತೆ ಹಲವರು ಹಾಜರಿದ್ದರು.

PREV

Recommended Stories

ಸಾಂಬ್ರಾ ವಿಮಾನ ನಿಲ್ದಾಣದವರೆಗೆ ಚತುಷ್ಪಥ ರಸ್ತೆ
ಮುಷ್ಕರಕ್ಕೆ ನೌಕರರಿಂದ ಮಿಶ್ರ ಪ್ರತಿಕ್ರಿಯೆ