ಆಹಾರಧಾನ್ಯಗಳ ಬೆಲೆ ಏರಿಕೆಗೆ ಕೇಂದ್ರದ ಬಿಜೆಪಿ ಸರ್ಕಾರ ಕಾರಣ: ವೆಂಕಟ್

KannadaprabhaNewsNetwork |  
Published : Nov 03, 2026, 01:45 AM IST
2ಕೆಎಂಎನ್ ಡಿ13 | Kannada Prabha

ಸಾರಾಂಶ

ದೇಶದಲ್ಲಿ 26 ದಶಲಕ್ಷ ಮೆಟ್ರಿಕ್ ಟನ್ ಆಹಾರ ಉತ್ಪಾದನೆಯಾಗುತ್ತಿದ್ದರೂ ಬೆಲೆ ಹೆಚ್ಚಳವಾಗುತ್ತಲೇ ಇದೆ. ಪ್ರಸ್ತುತ ದೇಶದಲ್ಲಿ ಬರ ಆವರಿಸಿದೆ. ಆದರೆ, ಸರ್ಕಾರ ರೈತರ ನೆರವಿಗೆ ಬರುತ್ತಿಲ್ಲ. ಪಡಿತರ ವಿತರಣೆ ಹೆಚ್ಚು ಮಾಡುತ್ತಿಲ್ಲ. ಈ ಬಾರಿ ಆಹಾರ ಧಾನ್ಯಗಳನ್ನು ಹೆಚ್ಚು ವಿತರಿಸದಿದ್ದಲ್ಲಿ ಡಿಸೆಂಬರ್‌ನಲ್ಲಿ ನಾವು ಗೋದಾಮುಗಳಿಗೆ ದಾಳಿ ಮಾಡಿ ಆಹಾರ ಧಾನ್ಯಗಳನ್ನು ಬಡಜನರಿಗೆ ವಿತರಿಸುತ್ತೇವೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಮಧ್ಯವರ್ತಿಗಳು ಹಾಗೂ ಉದ್ಯಮಿಗಳ ಬೆನ್ನಿಗೆ ಬಿಜೆಪಿ ನಿಂತಿರುವ ಕಾರಣ ಆಹಾರ ಧಾನ್ಯಗಳ ಬೆಲೆ ಹೆಚ್ಚಳವಾಗಿ ಬಡವರು ತೀವ್ರ ಸಂಕಷ್ಟಕ್ಕೆ ಸಿಲುಕುವಂತಾಗಿದೆ ಎಂದು ಕೃಷಿ ಕೂಲಿಕಾರರ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವೆಂಕಟ್ ಆರೋಪಿಸಿದರು.

ನಗರದ ಕರ್ನಾಟಕ ಸಂಘದ ಕೆವಿಎಸ್ ಭವನದಲ್ಲಿ ಸಂಘದಿಂದ ಫೆ.14ರಿಂದ 17ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ 11ನೇ ಅಖಿಲ ಭಾರತ ಸಮ್ಮೇಳನದ ಅಂಗವಾಗಿ ನಡೆದ ವಿಭಾಗೀಯ ಮಟ್ಟದ ಕಾರ್ಯಾಗಾರದಲ್ಲಿ ಮಾತನಾಡಿದರು.

ಈ ಹಿಂದೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರಕ್ಕೆ ಬಹುಮತವಿತ್ತು. ಈಗ ಇತರೆ ಪಕ್ಷಗಳೊಂದಿಗೆ ಸೇರಿ ಆಡಳಿತ ಮಾಡುತ್ತಿದೆ. ಜೊತೆಗೆ ಎಸ್‌ಐಆರ್ ಹೋರಾಟದಿಂದ ಅವರ ಬಲ ಕುಸಿದಿದೆ. ಮುಂದಿನ ಚುನಾವಣೆಯಲ್ಲಿ ಸೋಲುವ ಆತಂಕದಿಂದ ಚುನಾವಣಾ ಆಯೋಗವನ್ನೇ ದುರುಪಯೋಗ ಪಡಿಸಿಕೊಂಡಿದೆ ಎಂದು ದೂರಿದರು.

ದೇಶದಲ್ಲಿ 26 ದಶಲಕ್ಷ ಮೆಟ್ರಿಕ್ ಟನ್ ಆಹಾರ ಉತ್ಪಾದನೆಯಾಗುತ್ತಿದ್ದರೂ ಬೆಲೆ ಹೆಚ್ಚಳವಾಗುತ್ತಲೇ ಇದೆ. ಪ್ರಸ್ತುತ ದೇಶದಲ್ಲಿ ಬರ ಆವರಿಸಿದೆ. ಆದರೆ, ಸರ್ಕಾರ ರೈತರ ನೆರವಿಗೆ ಬರುತ್ತಿಲ್ಲ. ಪಡಿತರ ವಿತರಣೆ ಹೆಚ್ಚು ಮಾಡುತ್ತಿಲ್ಲ. ಈ ಬಾರಿ ಆಹಾರ ಧಾನ್ಯಗಳನ್ನು ಹೆಚ್ಚು ವಿತರಿಸದಿದ್ದಲ್ಲಿ ಡಿಸೆಂಬರ್‌ನಲ್ಲಿ ನಾವು ಗೋದಾಮುಗಳಿಗೆ ದಾಳಿ ಮಾಡಿ ಆಹಾರ ಧಾನ್ಯಗಳನ್ನು ಬಡಜನರಿಗೆ ವಿತರಿಸುತ್ತೇವೆಂದು ಎಚ್ಚರಿಸಿದರು.

ಫೆ.14 ರಿಂದ 17ರವರೆಗೆ ಬೆಂಗಳೂರಿನಲ್ಲಿ ಸುಮಾರು 20 ಸಾವಿರ ಕಾರ್ಯಕರ್ತರು ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ರ್‍ಯಾಲಿ, ವಿಚಾರ ಸಂಕಿರಣ, ಊಟ ವಸತಿ ಎಲ್ಲ ಸೇರಿ 3 ಕೋಟಿ ರು. ವೆಚ್ಚದ ಅಂದಾಜು ಮಾಡಲಾಗಿದೆ. ಕಾರ್ಮಿಕರಿಂದಲೇ ಸಂಗ್ರಹ ಮಾಡಿ ಸಮ್ಮೇಳನ ನಡೆಸಲಾಗುತ್ತಿದೆ ಎಂದರು.

ಕೃಷಿ ಕೂಲಿಕಾರರ ಸಂಘದ ರಾಜ್ಯ ಉಪಾಧ್ಯಕ್ಷ ಜಿ.ಎನ್.ನಾಗರಾಜು ಮಾತನಾಡಿ, ರಾಷ್ಟ್ರದಲ್ಲಿ ಕಾರ್ಮಿಕರ ಮೇಲೆ ಕಾರ್ಮೋಡ ಕವಿದಿದೆ. ಕೇಂದ್ರ ಬಿಜೆಪಿ ಸರ್ಕಾರ ಕೃಷಿ ಕೂಲಿಕಾರರ ಮನೆ, ಬದುಕನ್ನು ಕತ್ತರಿಸುತ್ತಿದ್ದಾರೆ. ಕೆಜಿ ಅಕ್ಕಿ ನೂರು ರು. ದಾಟುತ್ತಿದೆ. ಅನ್ನಭಾಗ್ಯ ಯೋಜನೆ ಇಲ್ಲದಿದ್ದರೆ ಬಡವರ ಬದುಕು ಬಹಳ ಸಂಕಷ್ಟಕ್ಕೆ ಸಿಲುಕುತ್ತಿತ್ತು. ಹೀಗಾಗಿ ನಾವು ಮೋದಿ ವಿರುದ್ಧ ತೊಡೆತಟ್ಟಿ ನಿಲ್ಲಬೇಕಿದೆ ಎಂದರು.

ಕಾರ್ಯಾಗಾರದಲ್ಲಿ ಕೃಷಿ ಕೂಲಿಕಾರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಪುಟ್ಟಮಾದು, ಸಿ.ಕುಮಾರಿ, ಜಿಲ್ಲಾಧ್ಯಕ್ಷ ಶಿವಮಲ್ಲಯ್ಯ, ಉಪಾಧ್ಯಕ್ಷ ಕೆ.ಬಸವರಾಜು, ಸಂಘಟನಾ ಕಾರ್ಯದರ್ಶಿ ಪುಟ್ಟಮಾದೇಗೌಡ, ಉಪಾಧ್ಯಕ್ಷೆ ಮಂಜುಳಾ, ಜಿಲ್ಲಾ ಪ್ರ.ಕಾರ್ಯದರ್ಶಿ ಹನುಮೇಶ್, ಮಳವಳ್ಳಿ ಆನಂದ್, ಕೊಡಗು ರಮೇಶ್, ಉಡುಪಿಯ ಕವಿರಾಜ್ ಮತ್ತಿತರರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭುಗಿಲೆದ್ದ ಸರ್ಕಾರ ವರ್ಸಸ್‌ ಕುಮಾರಸ್ವಾಮಿ ಸ್ಟಿಂಗ್‌ ಫೈಟ್‌ - ಈಗ ಎಚ್‌ಡಿಕೆ ಚಾರ್ಜ್‌ಶೀಟ್‌
ಅರಬ್ಬಿ ಸಮುದ್ರದಲ್ಲಿ ಚಂಡಮಾರುತ - ಇನ್ನೂ 3 ದಿನ ರಾಜ್ಯದೆಲ್ಲೆಡೆ ಮಳೆ