ಯಲಬುರ್ಗಾ:
ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕಾಡಳಿತ ಏರ್ಪಡಿಸಿದ್ದ ೭೯ನೇ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸ್ವಾತಂತ್ರ‍್ಯಕ್ಕಾಗಿ ತ್ಯಾಗ, ಬಲಿದಾನಗೈದ ಮಹನೀಯರನ್ನು ಸ್ಮರಿಸಬೇಕು. ಅವರ ತ್ಯಾಗದ ಫಲದಿಂದ ಸ್ವಾತಂತ್ರ‍್ಯ ಸಿಕ್ಕಿದೆ ಎನ್ನುವುದನ್ನು ಮರೆಯಬಾರದು. ಮುಸ್ಲಿಂರಿಗೆ ಪ್ರತ್ಯೇಕ ರಾಷ್ಟ್ರದ ಸಲುವಾಗಿ ಬ್ರಿಟಿಷರಿಂದ ದೇಶ ವಿಭಜನೆ ಆಗಿದೆ ಹೊರತು ಭಾರತೀಯರಿಂದಲ್ಲ ಎನ್ನುವ ಇತಿಹಾಸ ತಿಳಿದು ಮಾತನಾಡಬೇಕು ಎಂದರು.
ದೇಶದಲ್ಲಿ ದಲಿತರಿಗೆ ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಸೌಲಭ್ಯ ದೊರೆಯಲು ಒಳ ಮೀಸಲಾತಿ ಸಿಗಬೇಕು. ಈ ಬಗ್ಗೆ ಜಸ್ಟಿಸ್ ನಾಗಮೋಹನದಾಸ್ ಸಮಿತಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ ವರದಿ ವೈಜ್ಞಾನಿಕವಾಗಿದೆ. ಸಿಎಂ ಸಿದ್ದರಾಮಯ್ಯ, ಸಂಪುಟದ ಮಂತ್ರಿಮಂಡಲ ಅದನ್ನು ಶೀಘ್ರ ಜಾರಿಗೊಳಿಸಲಿದೆ ಎಂದರು.ಎಂಬಿಬಿಎಸ್ ಮಾಡಿದವರು ಗ್ರಾಮಾಂತರ ಪ್ರದೇಶದ ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಲು ಕಾನೂನು ಜಾರಿಗೆ ತರಲಾಗುತ್ತದೆ. ಜನರಿಗೆ ಒಳ್ಳೆಯದಾಗುತ್ತೆ ಎಂದರೆ ನಾನು ಯಾರಿಗೂ ಹೆದರದೆ ಕೆಲಸ ಮಾಡಲು ಸಿದ್ಧನಿದ್ದೇನೆ ಎಂದ ಅವರು, ಓಡಿಸ್ಸಾ ರಾಜ್ಯದಲ್ಲಿರುವ ಸ್ಕಿಲ್ ಡೆವೆಲಪ್ಮೆಂಟ್ ಸೆಂಟರ್‌ಗಿಂತ ನನ್ನ ಕ್ಷೇತ್ರದಲ್ಲಿ ದೇಶದ ಗಮನ ಸೆಳೆಯುವಂತಹ ಕೌಶಲ್ಯ ಅಭಿವೃದ್ಧಿ ಕೇಂದ್ರ ಮಾಡುತ್ತೇನೆ. ಅಭಿವೃದ್ಧಿ ಕೆಲಸಗಳಿಗೆ ರಾಜಕಾರಣಿಗಳು ಸಹಕಾರ ನೀಡಬೇಕು. ನಾನು ಅಭಿವೃದ್ಧಿ ಕೆಲಸದಲ್ಲಿ ಯಾವುದೇ ರಾಜಿ ಆಗುವುದಿಲ್ಲ ಎಂದು ತಿಳಿಸಿದರು.