ಸ್ಟೇರಿಂಗ್ ಕಟ್ ಆಗಿ ಹಳ್ಳಕ್ಕೆ ಉರುಳಿದ ಬಸ್..!

KannadaprabhaNewsNetwork |  
Published : Jun 30, 2024, 12:46 AM IST
೨೯ಕೆಎಂಎನ್‌ಡಿ-೩ಮಂಡ್ಯ ತಾಲೂಕು ರಾಗಿ ಮುದ್ದನಹಳ್ಳಿ ಬಳಿ ಸಾರಿಗೆ ಬಸ್ ಹಳ್ಳಕ್ಕೆ ಉರುಳಿರುವ ದೃಶ್ಯ. | Kannada Prabha

ಸಾರಾಂಶ

ಬಸ್ ನುಗ್ಗಿದ ರಭಸಕ್ಕೆ ಮುಂದೆ ಸಾಗುತ್ತಿದ್ದ ಕಾರು, ಮೂರು ಬೈಕ್‌ಗಳೂ ಜಖಂ ಆಗಿವೆ, ಅಲ್ಲೇ ಪಕ್ಕದಲ್ಲಿ ಅಂಗಡಿ ಹೋಟೆಲ್ ಬಳಿ ನಿಂತಿದ್ದ ರಾಗಿಮುದ್ದನಹಳ್ಳಿ ಗ್ರಾಮದ ಕೆಂಪೇಗೌಡ, ಕೋಡಿಶೆಟ್ಟಿಪುರದ ಕುಮಾರ ಅವರ ಬೈಕ್‌ಗಳಿಗೂ ಬಸ್ ಡಿಕ್ಕಿ ಹೊಡೆದು ಹಳ್ಳಕ್ಕೆ ಹೋಗಿ ನಿಂತಿದೆ. ಈ ಎಲ್ಲ ಘಟನೆ ಪಕ್ಕದಲ್ಲಿದ್ದ ಕಾರದ ಪುಡಿ ಕಾರ್ಖಾನೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಮಂಡ್ಯ: ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್, ಟೋಲ್ ಹೆದ್ದಾರಿಯಿಂದ ಸರ್ವೀಸ್ ರಸ್ತೆಗೆ ನುಗ್ಗಿ, ಹಳ್ಳಕ್ಕೆ ಬಿದ್ದಿರುವ ಘಟನೆ ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದ ಬಳಿ ನಡೆದಿದೆ.

ಮಂಡ್ಯದಿಂದ ಮೈಸೂರಿನ ಕಡೆಗೆ ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿದ್ದು, ಚಾಲಕ ಶೇಖರ್ ಕಾಲು ಮುರಿದಿದ್ದರೆ, ಕಂಡಕ್ಟರ್ ರವಿಚಂದ್ರ, ದೀಪಕ್, ಭಾಸ್ಕರ್, ಅಭಿ, ಕುಶಾಲ್, ನಾಗರಾಜು ಸೇರಿದಂತೆ ಏಳು ಮಂದಿ ಗಾಯಗೊಂಡಿದ್ದಾರೆ.

ಸರ್ಕಾರಿ ಬಸ್ ರಾಗಿಮುದ್ದನಹಳ್ಳಿ ಗ್ರಾಮದ ಟೋಲ್ ರಸ್ತೆಯಲ್ಲಿ ತೆರಳುತ್ತಿದ್ದಾಗ ಸ್ಟೇರಿಂಗ್ ರಾಡ್ ಕಟ್ ಆಗಿ ತಕ್ಷಣವೇ ಚಾಲಕ ಹರಸಾಹಸಪಟ್ಟು ಬಸ್ ನಿಯಂತ್ರಣ ತೆಗೆದುಕೊಳ್ಳಲು ಮುಂದಾಗಿದ್ದಾನೆ. ಬಸ್ ವೇಗದಲ್ಲಿದ್ದ ಕಾರಣ ಸರ್ವೀಸ್ ರಸ್ತೆಗೆ ಇಳಿದು ಹಳ್ಳಕ್ಕೆ ನುಗ್ಗಿದೆ ಎಂದು ತಿಳಿದುಬಂದಿದೆ.

ಬಸ್ ನುಗ್ಗಿದ ರಭಸಕ್ಕೆ ಮುಂದೆ ಸಾಗುತ್ತಿದ್ದ ಕಾರು, ಮೂರು ಬೈಕ್‌ಗಳೂ ಜಖಂ ಆಗಿವೆ, ಅಲ್ಲೇ ಪಕ್ಕದಲ್ಲಿ ಅಂಗಡಿ ಹೋಟೆಲ್ ಬಳಿ ನಿಂತಿದ್ದ ರಾಗಿಮುದ್ದನಹಳ್ಳಿ ಗ್ರಾಮದ ಕೆಂಪೇಗೌಡ, ಕೋಡಿಶೆಟ್ಟಿಪುರದ ಕುಮಾರ ಅವರ ಬೈಕ್‌ಗಳಿಗೂ ಬಸ್ ಡಿಕ್ಕಿ ಹೊಡೆದು ಹಳ್ಳಕ್ಕೆ ಹೋಗಿ ನಿಂತಿದೆ. ಈ ಎಲ್ಲ ಘಟನೆ ಪಕ್ಕದಲ್ಲಿದ್ದ ಕಾರದ ಪುಡಿ ಕಾರ್ಖಾನೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾಲು ಮುರಿತಕ್ಕೊಳಗಾದ ಬಸ್ ಚಾಲಕ ಸೇರಿ ಗಾಯಾಳು ಏಳು ಪ್ರಯಾಣಿಕರನ್ನು ಗ್ರಾಮಸ್ಥರ ಸಹಕಾರದಿಂದ ಆ್ಯಂಬುಲೆನ್ಸ್ ಮೂಲಕ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಕರೆತರಲಾಗಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಏಪ್ರಿಲ್‌ನಿಂದ ಆಲ್ಕೋಹಾಲ್‌ ಪ್ರಮಾಣಕ್ಕೆ ತಕ್ಕಂತೆ ಮದ್ಯ ಸುಂಕ
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ