ಕುಟುಂಬ ರಾಜಕಾರಣವನ್ನು ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಉಪ ಚುನಾವಣೆ ಫಲಿತಾಂಶ ಕೊನೆಗಾಣಿಸಿದೆ

KannadaprabhaNewsNetwork |  
Published : Nov 24, 2024, 01:49 AM ISTUpdated : Nov 24, 2024, 09:16 AM IST
23ಎಚ್ಎಸ್ಎನ್10 : ಪತ್ರಿಕಾಗೋಷ್ಠಿಯಲ್ಲಿ ಮಾತನಅಡಿದ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ದೇವರಾಜೇಗೌಡ. | Kannada Prabha

ಸಾರಾಂಶ

ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಈ ಮೂರು ಕ್ಷೇತ್ರಗಳಲ್ಲಿ ನಡೆದ ಉಪ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಅಭ್ಯರ್ಥಿಗಳನ್ನು ಸೋಲಿಸುವ ಮೂಲಕ ಜನರು ಕುಟುಂಬ ರಾಜಕಾರಣಕ್ಕೆ ಅಂತ್ಯ ಹಾಡಿ ಎಳ್ಳುನೀರು ಬಿಟ್ಟಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ದೇವರಾಜೇಗೌಡ ಹೇಳಿದರು. 

 ಹಾಸನ : ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಈ ಮೂರು ಕ್ಷೇತ್ರಗಳಲ್ಲಿ ನಡೆದ ಉಪ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಅಭ್ಯರ್ಥಿಗಳನ್ನು ಸೋಲಿಸುವ ಮೂಲಕ ಜನರು ಕುಟುಂಬ ರಾಜಕಾರಣಕ್ಕೆ ಅಂತ್ಯ ಹಾಡಿ ಎಳ್ಳುನೀರು ಬಿಟ್ಟಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ದೇವರಾಜೇಗೌಡ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತಾಡಿದ ಅವರು, ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ಜನರ ಮನ ಗೆದ್ದಿವೆ. ಇದಕ್ಕೆ ಈಗ ನಡೆದ ಮೂರು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಸಾಕ್ಷಿ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮ ವಹಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸಚಿವ ಸಂಪುಟದ ಎಲ್ಲಾ ಸದಸ್ಯರಿಗೂ ಅಭಿನಂದನೆ ಸಲ್ಲಿಸುತ್ತೇವೆ ಎಂದರು.

ಸರ್ಕಾರವನ್ನು ಬೀಳಿಸಬೇಕೆಂಬ ದುರುದ್ದೇಶದಿಂದ ಕಳೆದ ಹಲವು ದಿನಗಳಿಂದ ಕಾಂಗ್ರೆಸ್ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅಪಪ್ರಚಾರ ಹಾಗೂ ಸುಳ್ಳು ಆರೋಪಗಳನ್ನು ಮಾಡುತ್ತಿದ್ದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ರಾಜ್ಯದ ಜನ ತಕ್ಕ ಉತ್ತರ ನೀಡಿದ್ದಾರೆ. ಇದರ ಜೊತೆ ಕುಟುಂಬ ರಾಜಕಾರಣಕ್ಕೂ ತಿಲಾಂಜಲಿ ಹಾಡಿದ್ದಾರೆ ಎಂದು ಹೇಳಿದರು. ಕೇವಲ ಕರ್ನಾಟಕ ರಾಜ್ಯವಲ್ಲದೆ ಕೇರಳದ ವೈಯನಾಡು ಸೇರಿದಂತೆ ಇತರ ರಾಜ್ಯಗಳಲ್ಲೂ ಕಾಂಗ್ರೆಸ್‌ನ ಅಲೆ ಎದ್ದಿದೆ. ಕಾಂಗ್ರೆಸ್ ಸರ್ಕಾರದ ಜನಪರ ಕಾರ್ಯಕ್ರಮಗಳು ಜನ ಮೆಚ್ಚುಗೆಗಳಿವೆ. ಅವರು ಮಾಡುತ್ತಿದ್ದ ಟೀಕೆ ಟಿಪ್ಪಣಿ ಮತಗಳಾಗಿ ಪರಿವರ್ತನೆ ಆಗಿವೆ, ಕ್ಷೇತ್ರ ಪಲ್ಲಟ ಮಾಡಿದವರಿಗೆ ಜನ ಹೇಗೆ ಬುದ್ಧಿ ಕಲಿಸುತ್ತಾರೆ ಎಂಬುದಕ್ಕೆ ಈ ಚುನಾವಣೆ ಸಾಕ್ಷಿ ಎಂದರು. ಆರೋಪ, ಟೀಕೆ ಹಾಗೂ ಕುಟುಂಬ ರಾಜಕಾರಣವನ್ನು ನಿಲ್ಲಿಸಿ ಎಂದು ಈ ಉಪಚುನಾವಣೆಯಲ್ಲಿ ದಿಟ್ಟ ಉತ್ತರವನ್ನು ಕೊಟ್ಟಿದ್ದಾರೆ. ಜೆಡಿಎಸ್ ಪಕ್ಷದ ವರಿಷ್ಠರು ಈ ಚುನಾವಣೆಯಿಂದ ಬುದ್ಧಿ ಕಲಿಯಬೇಕು. ಕ್ಷೇತ್ರದ ಬದಲಾವಣೆ ಮಾಡಿದಾಗ ಜನರು ಬುದ್ದಿ ಕಲಿಸಿದ್ದಾರೆ ಎಂದು ದೂರಿದರು.

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ದೇವಪ್ಪ ಮಲ್ಲಿಗೆವಾಳು, ಚಂದ್ರಶೇಖರ್‌, ರಘು ದಾಸರಕೊಪ್ಪಲು, ಅಶೋಕ್ ನಾಯಕರಹಳ್ಳಿ, ಶಿವಕುಮಾರ್‌ ಇತರರು ಉಪಸ್ಥಿತರಿದ್ದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ