ಮೈತ್ರಿ ಬಗ್ಗೆ ಕೇಂದ್ರದ ನಾಯಕರೇ ನಿರ್ಧರಿಸಲಿದ್ದಾರೆ

KannadaprabhaNewsNetwork |  
Published : Feb 14, 2026, 02:00 AM IST
13ಎಚ್ಎಸ್ಎನ್16 :  | Kannada Prabha

ಸಾರಾಂಶ

ಮುಂದಿನ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಗಳ ಮೈತ್ರಿ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಅಂತಿಮ ತೀರ್ಮಾನವನ್ನು ಕೇಂದ್ರ ನಾಯಕತ್ವವೇ ಕೈಗೊಳ್ಳಲಿದ್ದು, ಜನಮನ ಗೆದ್ದರೇ ಮಾತ್ರ ಆಡಳಿತ ಸಿಗಲಿದೆ ಎಂದು ಕಾಂಗ್ರೆಸ್ ವಿರುದ್ಧ ವಿಧಾನಪರಿಷತ್‌ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದರು. ಯಾವುದೇ ಸಣ್ಣ ವಿಷಯವನ್ನು ದೊಡ್ಡದಾಗಿ ಮಾಡಿ ಗೊಂದಲ ಸೃಷ್ಟಿಸುವುದು ಸರಿಯಲ್ಲ ಎಂದು ಹೇಳಿದರು.

ಕನ್ನಡಪ್ರಭ ವಾರ್ತೆ ಹಾಸನ

ಮುಂದಿನ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಗಳ ಮೈತ್ರಿ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಅಂತಿಮ ತೀರ್ಮಾನವನ್ನು ಕೇಂದ್ರ ನಾಯಕತ್ವವೇ ಕೈಗೊಳ್ಳಲಿದ್ದು, ಜನಮನ ಗೆದ್ದರೇ ಮಾತ್ರ ಆಡಳಿತ ಸಿಗಲಿದೆ ಎಂದು ಕಾಂಗ್ರೆಸ್ ವಿರುದ್ಧ ವಿಧಾನಪರಿಷತ್‌ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದರು.

ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಕುರಿತು ಅನಾವಶ್ಯಕ ಚರ್ಚೆ ನಡೆಸುವ ಅಗತ್ಯವಿಲ್ಲ. ರಾಜಕೀಯದಲ್ಲಿ ಪರಸ್ಪರ ಗೌರವ ಮುಖ್ಯ. ನಾವು ಅವರನ್ನು ಗೌರವಿಸುವಷ್ಟೇ ಅವರು ನಮ್ಮನ್ನು ಗೌರವಿಸಬೇಕು. ಆದರೆ ಟಿಕೆಟ್ ಹಂಚಿಕೆ, ಮೈತ್ರಿ ತೀರ್ಮಾನಗಳ ಬಗ್ಗೆ ಸ್ಥಳೀಯ ಮಟ್ಟದಲ್ಲಿ ಯಾರೂ ಹೇಳಿಕೆ ನೀಡುವ ಅಗತ್ಯವಿಲ್ಲ. ಆ ಅಧಿಕಾರ ರಾಜ್ಯ ಅಥವಾ ರಾಷ್ಟ್ರ ಮಟ್ಟದ ನಾಯಕತ್ವಕ್ಕೆ ಸೇರಿದೆ. ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಹೇಳಿದರು. ಮಂಡ್ಯ ಮತ್ತು ಹಾಸನ ಜಿಲ್ಲೆಗಳಲ್ಲಿ ಜನತಾದಳದ ಪ್ರಭಾವ ಇರುವುದು ಸಹಜ. ಈ ಹಿನ್ನೆಲೆಯಲ್ಲಿ ಕೆಲ ಅಪಸ್ವರಗಳು ಕೇಳಿಬರಬಹುದು. ಆದರೆ ಅಂತಿಮವಾಗಿ ಎಲ್ಲ ಪಕ್ಷಗಳ ವರಿಷ್ಠರು ಕೂತು ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತಾರೆ. ಯಾವುದೇ ಸಣ್ಣ ವಿಷಯವನ್ನು ದೊಡ್ಡದಾಗಿ ಮಾಡಿ ಗೊಂದಲ ಸೃಷ್ಟಿಸುವುದು ಸರಿಯಲ್ಲ ಎಂದು ಹೇಳಿದರು.

ಜೆಡಿಎಸ್‌ 113 ಸ್ಥಾನ ಗೆದ್ದರೆ ಸಿಎಂ ಆಗಬಹುದು೨೦೨೮ರಲ್ಲಿ ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗುತ್ತಾರೆ ಎಂಬ ನಿಖಿಲ್ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, “ಜನತಾದಳ ೧೧೩ ಸ್ಥಾನಗಳನ್ನು ಗೆದ್ದರೆ ಯಾರು ಬೇಕಾದರೂ ಮುಖ್ಯಮಂತ್ರಿ ಆಗಬಹುದು. ಪ್ರಜಾಪ್ರಭುತ್ವದಲ್ಲಿ ಜನರೇ ಅಂತಿಮ ತೀರ್ಪು ನೀಡುತ್ತಾರೆ. ಅದೇ ರೀತಿ ನಾವು ೧೧೩ ಸ್ಥಾನಗಳನ್ನು ಗೆದ್ದರೆ ನಮ್ಮ ಪಕ್ಷದವರೇ ಸಿಎಂ ಆಗುತ್ತಾರೆ. ಇದರಲ್ಲಿ ಯಾರಿಗೂ ಅನುಮಾನ ಬೇಡ ಎಂದು ಹೇಳಿದರು.ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ:ದೇಶದ ರಾಜಕೀಯ ಸ್ಥಿತಿಗತಿ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ಕೇವಲ ಮೂರು ರಾಜ್ಯಗಳಲ್ಲಿ ಮಾತ್ರ ಅಧಿಕಾರದಲ್ಲಿದೆ ಎಂದು ಟೀಕಿಸಿದರು. ಕರ್ನಾಟಕವನ್ನು ಎಟಿಎಂ ಮಾಡಿಕೊಂಡು ಇತರೆ ರಾಜ್ಯಗಳ ಚುನಾವಣೆಗೆ ಹಣ ಹರಿಸಲಾಗುತ್ತಿದೆ ಎಂಬ ಗಂಭೀರ ಆರೋಪ ಮಾಡಿದರು. ಅಬಕಾರಿ ಇಲಾಖೆಯಲ್ಲಿ 6 ಸಾವಿರ ಕೋಟಿ ರು. ಹಗರಣ ನಡೆದಿದೆ ಎಂದು ಆರೋಪಿಸಿ, ಈ ವಿಷಯದಲ್ಲಿ ರಾಜ್ಯ ಸರ್ಕಾರ ಸಂಕಷ್ಟಕ್ಕೆ ಸಿಲುಕಿದೆ ಎಂದರು. ವಿಶೇಷ ಅಧಿವೇಶನ ಕರೆದಿದ್ದು ೩೦ರಿಂದ ೪೦ ಕೋಟಿ ರು. ವೆಚ್ಚವಾಗಿದೆ. ಆ ಹಣವನ್ನು ಬಡಜನರ ಕಲ್ಯಾಣಕ್ಕೆ ಬಳಸಬಹುದಾಗಿತ್ತು ಎಂದು ಅಭಿಪ್ರಾಯಪಟ್ಟ ಅವರು, ಅಧಿವೇಶನಕ್ಕೆ ರಾಜ್ಯಪಾಲರನ್ನು ಕರೆದು ಅವಮಾನಿಸಲಾಗಿದೆ ಎಂದು ದೂರಿದರು. ೧೯೮೨ರಿಂದಲೇ ಸಿದ್ದರಾಮಯ್ಯ ಅವರನ್ನು ನೋಡುತ್ತಿದ್ದೇನೆ. ಆಗಿನ ಸಿದ್ದರಾಮಯ್ಯ ಮತ್ತು ಈಗಿನ ಸಿದ್ದರಾಮಯ್ಯ ನಡುವೆ ಸ್ಪಷ್ಟ ವ್ಯತ್ಯಾಸ ಇದೆ. ಕಾಂಗ್ರೆಸ್ ನೆಲಕಚ್ಚುತ್ತಿದೆ. ಈಗಲೇ ಚುನಾವಣೆ ನಡೆದರೂ ಕಾಂಗ್ರೆಸ್ ಹೆಚ್ಚಿನ ರಾಜ್ಯಗಳಲ್ಲಿ ಅಧಿಕಾರಕ್ಕೆ ಬರುವ ಸ್ಥಿತಿ ಇಲ್ಲ ಎಂದು ಹೇಳಿದರು. ಕೆಲ ಎಡಪಂಥೀಯ ಸಂಘಟನೆಗಳೊಂದಿಗೆ ಒಪ್ಪಂದ ಮಾಡಿಕೊಂಡು ರಾಜಕೀಯ ಲಾಭ ಪಡೆಯಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಅವರು, “ಓಟ್ ಚೋರಿ ಮಾಡಿ ಆಡಳಿತ ನಡೆಸಬಾರದು. ಜನಮನ ಗೆದ್ದು ಆಡಳಿತ ನಡೆಸಬೇಕು. ಇದೇ ರೀತಿ ಮುಂದುವರಿದರೆ ಜನರು ತಕ್ಕ ಶಿಕ್ಷೆ ನೀಡುತ್ತಾರೆ ಎಂದು ಎಚ್ಚರಿಸಿದರು.ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಬಿ. ಬಿ. ಎಚ್. ನಾರಾಯಣಗೌಡ, ಎಸ್.ಡಿ. ಚಂದ್ರು, ರೇಣುಕುಮಾರ್‌, ಗಿರೀಶ್ ಪಕ್ಷದ ಸ್ಥಳೀಯ ನಾಯಕರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಕ್ಷಭೇದ ಮರೆತು ಸಮುದಾಯಕ್ಕೆ ಶ್ರಮಿಸಬೇಕು: ಆರ್.ಅಶೋಕ್
ಕಾಡು ಬಸವೇಶ್ವರ ಶ್ರೀ ಆಂಜನೇಯ ದೇವಾಲಯ ಜೀರ್ಣೋದ್ಧಾರ