ಕೇಂದ್ರದ ಕ್ಷೇತ್ರ ಮರು ವಿಂಗಡಣೆ ಬೇಳೆ ಬೇಯಲಿಲ್ಲ: ಕೆಪಿಸಿಸಿಯ ಕವಿತಾ

KannadaprabhaNewsNetwork |  
Published : Apr 23, 2026, 01:30 AM IST
22ಕೆಡಿವಿಜಿ1-ಕೆಪಿಸಿಸಿ ಕಾರ್ಯದರ್ಶಿ ಕವಿತಾ ಚಂದ್ರಶೇಖರ | Kannada Prabha

ಸಾರಾಂಶ

ಮಹಿಳಾ ಮೀಸಲಾತಿ ಹೆಸರಲ್ಲಿ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಜಾರಿಗ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹುನ್ನಾರವು ಇಡೀ ದೇಶದ ಜನರ ಮುಂದೆ ಬಯಲಾಗಿದ್ದು, ಪಂಚ ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ಮಸೂದೆ ಮಂಡನೆಗೆ ಹೋದ ಬಿಜೆಪಿ ಮುಖಭಂಗಕ್ಕೀಡಾಗಿದೆ ಎಂದು ಕೆಪಿಸಿಸಿ ಮಹಿಳಾ ಘಟಕದ ಕಾರ್ಯದರ್ಶಿ ಕವಿತಾ ಚಂದ್ರಶೇಖರ ಟೀಕಿಸಿದ್ದಾರೆ.

ಕನ್ನಡಪ್ರಭ ವಾರ್ತೆ ದಾವಣಗೆರೆ

ಮಹಿಳಾ ಮೀಸಲಾತಿ ಹೆಸರಲ್ಲಿ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಜಾರಿಗ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹುನ್ನಾರವು ಇಡೀ ದೇಶದ ಜನರ ಮುಂದೆ ಬಯಲಾಗಿದ್ದು, ಪಂಚ ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ಮಸೂದೆ ಮಂಡನೆಗೆ ಹೋದ ಬಿಜೆಪಿ ಮುಖಭಂಗಕ್ಕೀಡಾಗಿದೆ ಎಂದು ಕೆಪಿಸಿಸಿ ಮಹಿಳಾ ಘಟಕದ ಕಾರ್ಯದರ್ಶಿ ಕವಿತಾ ಚಂದ್ರಶೇಖರ ಟೀಕಿಸಿದ್ದಾರೆ.

ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ವಿರೋಧಿಸುತ್ತದೆ. ಮಹಿಳೆಯರ ವಿರೋಧಿ ಕಾಂಗ್ರೆಸ್ ಪಕ್ಷವೆಂದು ಹೇಳುತ್ತಿರುವ ಬಿಜೆಪಿಯು ಮಹಿಳೆಯರ ಭಾವನೆ ಜೊತೆ ಚೆಲ್ಲಾಟವಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಪ್ರಶ್ನಿಸಿದ್ದಾರೆ.

ಪ್ರತಿಪಕ್ಷಗಳು ಡಿಲಿಮಿಟೇಶನ್ ಮಸೂದೆಗೆ ವಿರೋಧ ವ್ಯಕ್ತಪಡಿಸಿವೆಯೇ ಹೊರತು ಮಹಿಳಾ ಮೀಸಲಾತಿ ಮಸೂದೆಗಲ್ಲ. ಕೇಂದ್ರವು ಪ್ರಾಮಾಣಿಕವಾಗಿದ್ದರೆ 2023ರ ಕಾನೂನನ್ನು ಜಾರಿಗೆ ತರಲಿ. ನಾರಿ ಶಕ್ತಿ ವಂದನ ಚೌಕಟ್ಟು ಎಂದು ವ್ಯಾಪಕವಾಗಿ ಕರೆಯಲ್ಪಡುವ 2023ರ ಕಾನೂನು, ಶಾಸಕಾಂಗಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿಯ ಅನುಷ್ಟಾನವನ್ನು ಹೊಸ ಜನಗಣತಿ ಪೂರ್ಣಗೊಳಿಸಿ ನಂತರ ಡಿಲಿಮಿಟೇಶನ್ ಬಗ್ಗೆ ಚರ್ಚಿಸಿ, ಅನುಷ್ಟಾನಗೊಳಿಸಲಿ. ಅದನ್ನು ಬಿಟ್ಟು ವಿನಾಕಾರಣ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರಕ್ಕೆ ಸೋಲಾಗಿರುವುದು ಪ್ರಜಾಪ್ರಭುತ್ವದ ಗೆಲುವಾಗಿದೆ. ಭಾರತದ ಒಕ್ಕೂಟ ರಚನೆ ಬದಲಾಯಿಸಲು ಮುಂದಾಗಿದ್ದಕ್ಕೆ ತಕ್ಕ ಶಾಸ್ತಿಯಾಗಿದೆ. ಪ್ರಜಾಪ್ರಭುತ್ವವನ್ನೇ ದುರ್ಬಲಗೊಳಿಸುವ ಕೇಂದ್ರದ ಪಿತೂರಿಗೆ ತಕ್ಕ ಉತ್ತರ ನೀಡಲಾಗಿದೆ. ಇದು ಸಂವಿಧಾನಕ್ಕೆ ಸಿಕ್ಕ ಗೆಲುವು, ದೇಶಕ್ಕೆ, ವಿಪಕ್ಷದ ಒಗ್ಗಟ್ಟಿಗೆ ಸಿಕ್ಕ ಗೆಲುವು. ಉತ್ತರ ಭಾರತದಲ್ಲಿ ಹೆಚ್ಚು ಸ್ಥಾನಗಳನ್ನು ಸೃಷ್ಟಿಸಿ ಹೇಗಾದರೂ ಅಧಿಕಾರದಲ್ಲಿ ಉಳಿಯಬೇಕೆಂಬ ಬಿಜೆಪಿಯ ಪಿತೂರಿ ಜನರಿಗೆ ಅರಿವಾಗಿದೆ. ದಕ್ಷಿಣ ರಾಜ್ಯಗಳಲ್ಲಿ ಕಡಿಮೆ ಸ್ಥಾನವಾಗುವ ಆತಂಕ ಇದೆ ಎಂದಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳಿಗೆ ಆಟೋಟದ ಜೊತೆ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ: ಕೆ.ಎಸ್.ಆನಂದ್‌
ಹಳೆಯ ನೆನಪು ಮರು ಕಳಿಸಿದ ಸ್ನೇಹ ಸಮ್ಮಿಲನ: ಕೆ.ಎಸ್.ಮನೋಹರ್