ಕನ್ನಡಪ್ರಭ ವಾರ್ತೆ ಹಾಸನ
ನಗರದ ಮಲೆನಾಡು ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಆಯೋಜಿಸಿದ್ದ ೧೫ನೇ ಪದವಿ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ದೇಶದಲ್ಲಿ ಪ್ರತಿ ವರ್ಷ ೫೦ ಲಕ್ಷಕ್ಕೂ ಹೆಚ್ಚು ಎಂಜಿನಿಯರಿಂಗ್ ಪದವೀಧರರು ತಾಂತ್ರಿಕ ಶಿಕ್ಷಣ ಸಂಸ್ಥೆಗಳಿಂದ ಹೊರಹೊಮ್ಮುತ್ತಿದ್ದಾರೆ. ೧ ಕೋಟಿಗೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ಪದವಿಗಳನ್ನು ಪೂರೈಸುತ್ತಿದ್ದಾರೆ. ಪದವಿ ಪ್ರಮಾಣ ಪತ್ರ ತೆಗೆದುಕೊಳ್ಳುವುದು ಇಂದಿನ ವಿದ್ಯಾರ್ಥಿಗಳ ಮುಂದಿರುವ ಸವಾಲಲ್ಲ. ಓದಿದ ಪದವಿಗೆ ಸರಿಹೊಂದುವ ಉದ್ಯೋಗ ದಕ್ಕಿಸಿಕೊಳ್ಳುವುದು ನಿಜಕ್ಕೂ ಸವಾಲಿನ ಸಂಗತಿ. ಪದವಿ ಪೂರೈಸುವ ವಿದ್ಯಾರ್ಥಿಗಳಲ್ಲಿ ಓದಿಗೆ ತಕ್ಕಉದ್ಯೋಗ ಪಡೆಯುವವರ ಪ್ರಮಾಣ ಶೇ. ೪೫ಕ್ಕಿಂತ ಕಡಿಮೆ ಇದೆ ಎಂದು ತಿಳಿಸಿದರು.
ಹೆಚ್ಚು ವಿದ್ಯಾರ್ಥಿನಿಯರು ಪದವಿ ಶಿಕ್ಷಣ ಪಡೆಯುತ್ತಿದ್ದರೂ, ಉದ್ಯೋಗದಲ್ಲಿ ಮುಂದುವರಿಯುತ್ತಿರುವ ವಿದ್ಯಾರ್ಥಿನಿಯರ ಪ್ರಮಾಣ ಕಡಿಮೆ ಇದೆ. ವಿದ್ಯಾರ್ಥಿನಿಯರ ಪದವಿ ಪ್ರಮಾಣಪತ್ರ ಮನೆಯಲ್ಲಿ ಪ್ರದರ್ಶನಕ್ಕಿಡಬೇಕಾದ ಟ್ರೋಫಿ ಅಲ್ಲ. ವಿದ್ಯಾರ್ಥಿನಿಯರು ಓದಿಗೆ ತಕ್ಕ ಕೆಲಸಗಳನ್ನು ನಿರ್ವಹಿಸುವ ಮೂಲಕ ದೇಶದ ಜಿಡಿಪಿಗೆ ಹೆಚ್ಚು ಕೊಡುಗೆ ನೀಡುವಂತಾಗಬೇಕು. ಉದ್ಯೋಗದಲ್ಲಿ ಮುಂದುವರಿಯಲು ಬಯಸುವ ವಿದ್ಯಾರ್ಥಿನಿಯರ ಎದುರು ಸಾಕಷ್ಟು ಸವಾಲುಗಳಿರುವುದು ವಾಸ್ತವ. ಆ ಸವಾಲುಗಳನ್ನು ಮೆಟ್ಟಿ ನಿಂತು ಉದ್ಯೋಗ ಕ್ಷೇತ್ರದಲ್ಲಿ ಮುಂದುವರಿಯಬೇಕು ಎಂದು ವಿದ್ಯಾರ್ಥಿನಿಯರಿಗೆ ತಿಳಿ ಹೇಳಿದರು.ಮಲೆನಾಡು ತಾಂತ್ರಿಕ ಶಿಕ್ಷಣ ಸಮಿತಿ ಅಧ್ಯಕ್ಷ ಆರ್. ಟಿ. ದ್ಯಾವೇಗೌಡರು ಮಾತನಾಡಿ, ಹೆಚ್ಚಿನ ಸಾಧನೆ ಮಾಡುವ ಮೂಲಕ ಕಲಿಸಿದ ಪ್ರಾಧ್ಯಾಪಕರು ಹಾಗೂ ಸಂಸ್ಥೆಗೆ ಉತ್ತಮ ಹೆಸರುತನ್ನಿಎಂದರು. ಕಾಲೇಜಿನ ಶೈಕ್ಷಣಿಕ ವಿಷಯಗಳಿಗೆ ಸಂಬಂಧಿಸಿದ ಡೀನ್ ಡಾ.ನಂದಿತಾ ಬಿ ಆರ್‌ಅವರು ಪದವಿ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಕಂಪ್ಯೂಟರ್ ಸೈನ್ಸ್ ವಿಭಾಗದ ದೀಕ್ಷಿತ್ ಎಚ್ ಯು ಮತ್ತು ಇನಫರ್‌ಮೇಷನ್ ಸೈನ್ಸ್ ವಿಭಾಗದ ಪೂಜಾ ಎ ಬಿ ಅವರಿಗೆ ೨೦೨೫ನೇ ಸಾಲಿನ ಎಂಟಿಇಎಸ್ ಅತ್ಯುತ್ತಮ ವಿದ್ಯಾರ್ಥಿ ಪ್ರಶಸ್ತಿ, ಕಂಪ್ಯೂಟರ್ ಸೈನ್ಸ್ ವಿಭಾಗದ ನಂದನ್ ಸಿ ವಿ ಅವರಿಗೆ ೨೦೨೫ನೇ ಸಾಲಿನ ಅತ್ಯುತ್ತಮ ಕ್ರೀಡಾಪಟು ಪ್ರಶಸ್ತಿ ನೀಡಲಾಯಿತು. ಪ್ರತಿ ಎಂಜಿನಿಯರಿಂಗ್ ವಿಭಾಗದಲ್ಲೂ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನ ಮಾಡಲಾಯಿತು. ಪೃಥ್ವಿ ಸಿ ಪಿ, ಅರ್ಜುನ್ ಎಚ್, ಸೋನು ಬಿ ಆರ್, ಚೇತನಾ ಕೆ ಆರ್, ಶರಣ್ಯ ಕೆ ಎಂ, ಪೂಜಾ ಎ ಬಿ ಮತ್ತು ವಿನಯ್ ಎಚ್ ಆರ್ ಅವರಿಗೆ ಚಿನ್ನದ ಪದಕ ಪಡೆದರು.ಮಲೆನಾಡುತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಎಚ್. ಜೆ. ಅಮರೇಂದ್ರ ಅವರು ಕಾಲೇಜಿನ ಸಾಧನೆಗಳನ್ನು ತಿಳಿಸಿ, ಅತಿಥಿಗಳನ್ನು ಸ್ವಾಗತಿಸಿದರು. ನಿರ್ದೇಶಕ ಡಾ. ಎಸ್. ಪ್ರದೀಪ್ ಅವರು ವಂದನಾರ್ಪಣೆ ಮಾಡಿದರು. ಮಲೆನಾಡು ತಾಂತ್ರಿಕ ಶಿಕ್ಷಣ ಸಮಿತಿ ಕಾರ್ಯದರ್ಶಿ ಸಿ ಆರ್ ಜಗದೀಶ್, ಖಜಾಂಚಿ ಎಚ್. ಡಿ. ಪಾರ್ಶ್ವನಾಥ್, ಮಲೆನಾಡು ತಾಂತ್ರಿಕ ಶಿಕ್ಷಣ ಸಮಿತಿಯ ನಿರ್ದೇಶಕರು, ಕಾಲೇಜಿನ ಡೀನ್‌ಗಳು, ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.