ಅಗಡಿಯಲ್ಲಿ ಸಂಭ್ರಮದ ಶೇಷಾಚಲ ಸದ್ಗುರುಗಳ ರಥೋತ್ಸವ

KannadaprabhaNewsNetwork |  
Published : Apr 08, 2026, 03:15 AM IST
ಹಾವೇರಿ ತಾಲೂಕು ಅಗಡಿ ಗ್ರಾಮದ ಆನಂದವನದಲ್ಲಿ ಶೇಷಾಚಲ ಸದ್ಗುರುಗಳ ಜಯಂತ್ಯುತ್ಸವ ನಿಮಿತ್ತ  ಶೇಷಾಚಲ ಸದ್ಗುರುಗಳ ರಥೋತ್ಸವ ವಿಜೃಂಭಣೆಯಿಂದ ನಡೆಯಿತು. | Kannada Prabha

ಸಾರಾಂಶ

ಹಾವೇರಿ ತಾಲೂಕಿನ ಅಗಡಿ ಗ್ರಾಮದ ಆನಂದವನದಲ್ಲಿ ಶೇಷಾಚಲ ಸದ್ಗುರುಗಳ ಜಯಂತ್ಯುತ್ಸವ ನಿಮಿತ್ತ ಮಂಗಳವಾರ ಶ್ರೀ ಶೇಷಾಚಲ ಸದ್ಗುರುಗಳ ರಥೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.

ಹಾವೇರಿ: ತಾಲೂಕಿನ ಅಗಡಿ ಗ್ರಾಮದ ಆನಂದವನದಲ್ಲಿ ಶೇಷಾಚಲ ಸದ್ಗುರುಗಳ ಜಯಂತ್ಯುತ್ಸವ ನಿಮಿತ್ತ ಮಂಗಳವಾರ ಶ್ರೀ ಶೇಷಾಚಲ ಸದ್ಗುರುಗಳ ರಥೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.ಜಯಂತಿ ಅಂಗವಾಗಿ ಆನಂದವನದಲ್ಲಿ ನಾಲ್ಕೈದು ದಿನಗಳಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸಂಭ್ರಮದಿಂದ ಜರುಗಿದವು. ಮಂಗಳವಾರ ಬೆಳಗ್ಗೆ ಸದ್ಗುರುಗಳ ಜನನೋತ್ಸವ ಪ್ರಯುಕ್ತ ಹರಿ ಕೀರ್ತನೆ, ನಂತರ ತೊಟ್ಟಿಲೋತ್ಸವ ನಡೆಯಿತು. ಮಧ್ಯಾಹ್ನದ ವೇಳೆ ಆನಂದವನದ ಆವರಣದಲ್ಲಿ ಸದ್ಗುರು ಶ್ರೀ ಶೇಷಾಚಲ ಸದ್ಗುರುಗಳ ಪಲ್ಲಕ್ಕಿ ಮೆರವಣಿಗೆ ನಡೆದು, ನಂತರ ಹೂಗಳಿಂದ ಸಿಂಗಾರಗೊಂಡಿದ್ದ ರಥೋತ್ಸವವದಲ್ಲಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಶ್ರೀಮಠದಿಂದ ಆರಂಭವಾದ ರಥೋತ್ಸವದಲ್ಲಿ ಭಜನೆ, ಕೀರ್ತನೆಗಳನ್ನು ಪ್ರಸ್ತುತಪಡಿಸಲಾಯಿತು. ಅಲ್ಲಿಂದ ಅರಳಿಮರದ ಮಂಟಪಕ್ಕೆ ತೆರಳಿ ಪೂಜೆ ಸಲ್ಲಿಸಿ ಮೂಲ ಸ್ಥಳಕ್ಕೆ ಆಗಮಿಸಿ ವಿರಾಜಮಾನಗೊಂಡಿತು. ಈ ವೇಳೆ ಭಕ್ತರಿಂದ ಜಯಘೋಷ ಮೊಳಗಿಸಿದವು. ಭಕ್ತರು ರಥೋತ್ಸವದ ಕಳಶಕ್ಕೆ ಬಾಳೆಹಣ್ಣು, ಉತ್ತತ್ತಿ ಎಸೆಯುವುದರ ಮೂಲಕ ಭಕ್ತಿಯನ್ನು ಸಮರ್ಪಿಸಿದರು. ಮಠದಲ್ಲಿ ಮಹಾಮಂಗಲೋತ್ಸವವನ್ನು ನಡೆಸಲಾಯಿತು. ಆಗಮಿಸಿದ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು. ಈ ವೇಳೆ ಶ್ರೀಮಠದ ಪೂಜ್ಯರು ಹಾಗೂ ಗುರುಭಕ್ತರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯಪಾಲರ ಕರ್ನಾಟಕ ವಿರೋಧಿ ಧೋರಣೆ ಖಂಡಿಸಿ ಕರವೇ ಪ್ರತಿಭಟನೆ
ದುರಸ್ತಿಯಾಗದ ರಸ್ತೆ ಬಂದ್ ಮಾಡಿ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ