ಸಂವಿಧಾನದ ಆಶಯ ಕಗ್ಗೊಲೆ ಮಾಡುತ್ತಿರುವ ಸಿಎಂ

KannadaprabhaNewsNetwork |  
Published : May 08, 2026, 01:15 AM IST
ಚಷ | Kannada Prabha

ಸಾರಾಂಶ

ಚಿಕ್ಕಮಗಳೂರುಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಅಂಚೆ ಮತ ಮರು ಎಣಿಕೆಯಲ್ಲಿ ಮತ ಡಕಾಯಿತಿ ಆಗಿದೆ ಎಂಬ ಪದ ಬಳಕೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಯ ಘನತೆಯನ್ನು ತಗ್ಗಿಸಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ದಕ್ಕೆ ಉಂಟು ಮಾಡಿದೆ. ಸಂವಿಧಾನದ ಆಶಯಗಳನ್ನು ಕಗ್ಗೊಲೆ ಮಾಡಲು ಹೊರಟಿದ್ದಾರೆ ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಚ್.ಸಿ.ಕಲ್ಮರುಡಪ್ಪ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಚ್.ಸಿ.ಕಲ್ಮರುಡಪ್ಪ ಆಕ್ರೋಶ

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಅಂಚೆ ಮತ ಮರು ಎಣಿಕೆಯಲ್ಲಿ ಮತ ಡಕಾಯಿತಿ ಆಗಿದೆ ಎಂಬ ಪದ ಬಳಕೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಯ ಘನತೆಯನ್ನು ತಗ್ಗಿಸಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ದಕ್ಕೆ ಉಂಟು ಮಾಡಿದೆ. ಸಂವಿಧಾನದ ಆಶಯಗಳನ್ನು ಕಗ್ಗೊಲೆ ಮಾಡಲು ಹೊರಟಿದ್ದಾರೆ ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಚ್.ಸಿ.ಕಲ್ಮರುಡಪ್ಪ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಪ್ರೆಸ್ ಕ್ಲಬ್ ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನ ಬದ್ಧವಾದ ವ್ಯವಸ್ಥೆಯಲ್ಲಿ ಜಿಲ್ಲಾಡಳಿತ ಪೊಲೀಸ್ ಇಲಾಖೆ ಚುನಾವಣಾ ಆಯೋಗ ಮತ್ತು ನ್ಯಾಯಾಂಗ ವ್ಯವಸ್ಥೆಗಳ ಮೂಲಕ ಡಿ.ಎನ್. ಜೀವರಾಜ್ ಶಾಸಕ ರಾಗಿದ್ದಾರೆ. ಆದರೆ, ಕಾಂಗ್ರೆಸ್ ಕಾರ್ಯಕರ್ತರು ಸಂವಿಧಾನ ಮತ್ತು ಅಂಬೇಡ್ಕರ್ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಎಣಿಕೆಯಲ್ಲಿ ಅಕ್ರಮ ನಡೆದಿರುವುದನ್ನು ಪ್ರಶ್ನಿಸಿ, ಜೀವರಾಜ್ ಅವರು ಹೈಕೋರ್ಟ್ ಮೊರೆ ಹೋಗಿ ಹೋರಾಟ ನಡೆಸಿದ್ದಾರೆ. ಜೀವರಾಜ್ ಅವರ ನಿರಂತರ ಹೋರಾಟದ ಫಲವಾಗಿ ನ್ಯಾಯಾಲಯ ಅಂಚೆ ಮತಗಳ ಮರು ಎಣಿಕೆಗೆ ಆದೇಶ ನೀಡಿತ್ತು. ಅಂಚೆ ಮತಗಳ ಮರು ಎಣಿಕೆಯಲ್ಲಿ ಕಾಂಗ್ರೆಸ್ ನಡೆಸಿದ್ದ ಅಕ್ರಮ ಬಯಲಾಗಿದೆ. ಹೀಗಾಗಿ ತಮ್ಮ ಅಕ್ರಮ ಮುಚ್ಚಿ ಹಾಕಿಕೊಳ್ಳಲು ಕಾಂಗ್ರೆಸ್ ಕಾರ್ಯಕರ್ತರು ಹತಾಶರಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ಕಳೆದ ಮೂರು ವರ್ಷದಿಂದ ಕಾಂಗ್ರೆಸ್ ಅಧಿಕಾರದಲ್ಲಿದೆ. ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಗೆ ಎರಡು ಬಾರಿ ಮನವಿ ಮಾಡಿದರು. ಸರ್ಕಾರ ಏಕೆ ಅನುಮತಿ ಕೊಡಲಿಲ್ಲ ಎಂದು ಪ್ರಶ್ನಿಸಿದ ಅವರು, ಸರ್ಕಾರ ನಿಮ್ಮ ಕೈ ಯಲ್ಲಿದ್ದರೂ ಈಗ ಬಿಜೆಪಿ ವಿರುದ್ಧ ಆರೋಪ ಮಾಡುವ ಕಾಂಗ್ರೆಸ್ ಮುಖಂಡರು ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಹೊರಟಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ 135 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ ನಂತರ ಶೃಂಗೇರಿ ವಿಧಾ‌ನಸಭಾ ಕ್ಷೇತ್ರದ ಅಂಚೆ‌ ಮತಗಳ ಎಣಿಕೆ ವೇಳೆ 170 ತಿದ್ದಿರುವ ಮತಗಳ ಕಟ್ಟನ್ನು ರಾಜೇಗೌಡರ ಬಾಕ್ಸ್ ನಲ್ಲಿ ಏಕೆ ಹಾಕಿರಬಾರದು?. ಮೂರು ವರ್ಷದಿಂದಲೂ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿದ್ದರೂ ಈಗ ಕಾಂಗ್ರೆಸ್ಸಿಗರು ತನಿಖೆ ನಾಟಕವಾಡುತ್ತಿದ್ದಾರೆ. ನೀವು ಯಾವ ತನಿಖೆ ಮಾಡಿದರೂ ನಾವು ಸಿದ್ಧರಿದ್ದೇವೆ. ಸತ್ಯ ಎಂದಿದ್ದರೂ ಸತ್ಯವಾಗಿಯೇ ಇರುತ್ತದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಹಿರೇಮಗಳೂರು ಪುಟ್ಟಸ್ವಾಮಿ, ಕುರುವಂಗಿ ವೆಂಕಟೇಶ್, ನರೇಂದ್ರ, ಈಶ್ವರಹಳ್ಳಿ ಮಹೇಶ್ ಮತ್ತಿತರರಿದ್ದರು.ಫೋಟೋ: ಎಚ್.ಸಿ.ಕಲ್ಮರುಡಪ್ಪ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಳೆ ಮಮತೆಯ ಮಡಿಲಿಗಿದು ಗೀತ ನಮನ
ರಸ್ತೆ, ಯುಜಿಡಿ ಸಮಸ್ಯೆ ಪರಿಹಾರಕ್ಕೆ 500 ಕೋಟಿ ರು. ಪ್ರಸ್ತಾವನೆ: ಜಿಟಿಡಿ